ನವದೆಹಲಿ: ಆಮ್ ಆದ್ಮಿ ಪಾರ್ಟಿ (AA) ನಾಯಕ ಹಾಗೂ ದಿಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish sisodia) ಅವರಿಗೆ ‘ಬಿಡುಗಡೆಯ ಭಾಗ್ಯ’ ಮಂಗಳವಾರವೂ ಸಿಗಲಿಲ್ಲ. ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ (delhi excise policy case) ಸಂಬಂಧಿಸಿದಂತೆ ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು (bail application) ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ. ಈ ಕುರಿತು ಸಿಬಿಐ (CBI) ವಿಚಾರಣೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಸಿಸೋಡಿಯಾ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಮನೀಶ್ ಸಿಸೋಡಿಯಾ ಅವರ ವಿರುದ್ಧ ಗಂಭೀರ ಆರೋಪಗಳಾಗಿದ್ದು, ಜಾಮೀನು ನೀಡಲಾಗುವುದಿಲ್ಲ ದೆಹಲಿ ಹೈಕೋರ್ಟ್ ಹೇಳಿದೆ. ಹಾಗಾಗಿ, ಅವರು ಮತ್ತೆ ಕಂಬಿಗಳನ್ನು ಎಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಜಸ್ಟೀಸ್ ದಿನೇಶ್ ಕುಮಾರ್ ಶರ್ಮಾ ಅವರು, ಮಾಜಿ ಡಿಸಿಎಂ ಅವರು 18 ಖಾತೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ, ಅವರು ಸಾಕ್ಷಿಗಳು ಹಾಗೂ ಹೆಚ್ಚಾಗಿ ಸಾರ್ವಜನಿಕ ನೌಕರರ ಮೇಲೆ ಪ್ರಭಾವ ಬೀರಬಹುದು. ಅರ್ಜಿದಾರರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಉಪಮುಖ್ಯಮಂತ್ರಿ ಹಾಗೂ 18 ಖಾತೆಗಳನ್ನುಹೊಂದಿದ್ದರು. ಹಾಗಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಹೇಳಿದ್ದಾರೆ.
ಅಬಕಾರಿ ನೀತಿಯನ್ನು ದಕ್ಷಿಣದ ಗುಂಪುಗಳಿಗೆ ಅನುಚಿತ ಲಾಭ ನೀಡುವ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪಗಳು ಬಹಳ ಗಂಭೀರ ಸ್ವರೂಪದ್ದಾಗಿವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು. ಆ ಮೂಲಕ ತೆಲಂಗಾಣ ಮತ್ತು ಆಂಧ್ರ ಪ್ರೇದಶದ ರಾಜಕಾರಣಿಗಳು ಮತ್ತು ಉದ್ಯಮಿಗಳಿಗೆ ಲಾಭ ಮಾಡಿಕೊಡುವುದು ಈ ನೀತಿಯ ಉದ್ದೇಶವಾಗಿತ್ತು ಎಂದು ಕೋರ್ಟ್ ಉಲ್ಲೇಖಿಸಿದೆ.
ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ದಿಲ್ಲಿ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಬಂಧಿಸಿತ್ತು. ಅಲ್ಲದೇ, ಇದೇ ಪ್ರಕರಣದಲ್ಲಿ ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯವು (ED) ಸಿಸೋಡಿಯಾ ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿತ್ತು.
ಈ ಸುದ್ದಿಯನ್ನೂ ಓದಿ: Delhi Excise Policy Case: ದೆಹಲಿ ಅಬಕಾರಿ ಕೇಸ್, ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ಕವಿತಾಗೆ ಸಮನ್ಸ್
ಬಂಧನವಾದ ಬಳಿಕ ಮನೀಶ್ ಸಿಸೋಡಿಯಾ ಅವರು ಸಿಬಿಐ ಕೋರ್ಟ್ ಹಾಗೂ ದಿಲ್ಲಿ ಹೈಕೋರ್ಟ್‌ನಲ್ಲಿ ಜಾಮೀನು ಪಡೆಯಲು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ, ಇದುವರೆಗೂ ಸಾಧ್ಯವಾಗಿಲ್ಲ. ಈ ಮಧ್ಯೆ ಆಪ್‌ನ ಮತ್ತೊಬ್ಬ ನಾಯಕ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಚಿಕಿತ್ಸೆಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸತ್ಯೇಂದ್ರ ಜೈನ್ ಜೈಲು ಪಾಲಾಗಿದ್ದರು.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.