Arvind Kejriwal: ಕೇಜ್ರಿವಾಲ್‌ ವಿರುದ್ಧ ಹೊಸ ಆರೋಪ; ಏನಿದು ಲೈಂಗಿಕ ಕಿರುಕುಳ ಕೇಸ್? - Vistara News

ದೇಶ

Arvind Kejriwal: ಕೇಜ್ರಿವಾಲ್‌ ವಿರುದ್ಧ ಹೊಸ ಆರೋಪ; ಏನಿದು ಲೈಂಗಿಕ ಕಿರುಕುಳ ಕೇಸ್?

Arvind Kejriwal: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಹೊಸ ಆರೋಪ ಮಾಡಿದ್ದಾರೆ. ಇದು ಕೂಡ ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Aravind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಜಾರಿ ನಿರ್ದೇಶನಾಲಯದ (ED) ಕಸ್ಟಡಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. “ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರೊಬ್ಬರ ವರ್ಗಾವಣೆ ಫೈಲ್‌ ಒಂದನ್ನು ಕಳೆದ 45 ದಿನಗಳಿಂದ ಅರವಿಂದ್‌ ಕೇಜ್ರಿವಾಲ್‌ ಅವರು ಪೆಂಡಿಂಗ್‌ನಲ್ಲಿ ಇಟ್ಟಿದ್ದಾರೆ” ಎಂದು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ (VK Saxena) ಆರೋಪಿಸಿದ್ದಾರೆ.

“ದೆಹಲಿಯ ಬಾಬಾ ಸಾಹೇಬ್‌ ಅಂಬೇಡ್ಕರ್‌ ಮೆಡಿಕಲ್ ಕಾಲೇಜಿನಲ್ಲಿ ಪ್ರಾಂಶುಪಾಲರ ವಿರುದ್ಧವೇ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ದೆಹಲಿ ಆರೋಗ್ಯ ಸಚಿವ ಸೌರಭ್‌ ಭಾರದ್ವಾಜ್‌ ಅವರೇ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಿದ್ದರೂ, ಪ್ರಾಂಶುಪಾಲರ ವರ್ಗಾವಣೆಯ ದಾಖಲೆಯನ್ನು ಕಳೆದ 45 ದಿನಗಳಿಂದಲೂ ವಿಲೇವಾರಿ ಮಾಡಿಲ್ಲ. ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಸೌರಭ್‌ ಭಾರದ್ವಾಜ್‌ ಅವರೇ ಆಕ್ರೋಶ ವ್ಯಕ್ತಪಡಿಸಿದರೂ, ಸರ್ಕಾರವು ವರ್ಗಾವಣೆಗೆ ಮೀನ ಮೇಷ ಎಣಿಸುತ್ತಿದೆ” ಎಂದು ವಿ.ಕೆ. ಸಕ್ಸೇನಾ ಆರೋಪಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ

ಪ್ರಾಂಶುಪಾಲ ಈಶ್ವರ್‌ ಸಿಂಗ್‌ ಅವರನ್ನು ಕೂಡಲೇ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಸೌರಭ್‌ ಭಾರದ್ವಾಜ್‌ ಅವರು 2024ರ ಮಾರ್ಚ್‌ 20ರಂದು ಆಗ್ರಹಿಸಿದ್ದರು. ಆದರೆ, ಇದುವರೆಗೆ ಪ್ರಾಂಶುಪಾಲರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪ್ರಕರಣದ ಹಿಂದೆ ಆಮ್‌ ಆದ್ಮಿ ಪಕ್ಷದ ಕುಮ್ಕಕ್ಕು ಇರುವುದನ್ನು ಅಲ್ಲಗಳೆಯುವಂತಿಲ್ಲ ಎಂದು ವಿ.ಕೆ.ಸಕ್ಸೇನಾ ಆರೋಪಿಸಿದ್ದಾರೆ. ಇದು ಈಗ ಹೊಸ ಚರ್ಚೆಗೆ ಕಾರಣವಾಗಿದೆ. ಇದಕ್ಕೂ ಮೊದಲು ಕೂಡ ವಿ.ಕೆ.ಸಕ್ಸೇನಾ ಹಾಗೂ ದೆಹಲಿ ಸರ್ಕಾರದ ಮಧ್ಯೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಜಟಾಪಟಿ ನಡೆದಿವೆ.

ಇದನ್ನೂ ಓದಿ: Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇದಾದ ಬಳಿಕ ಮಾರ್ಚ್‌ 28ರವರೆಗೆ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿತ್ತು. ಇದಾದ ಬಳಿಕ ಮತ್ತೆ ನ್ಯಾಯಾಲಯವು ಅವರನ್ನು ಏಪ್ರಿಲ್‌ 1ರವರೆಗೆ ಇ.ಡಿ ಕಸ್ಟಡಿಗೆ ನೀಡಿದೆ. ಇನ್ನು, ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಆಪ್‌ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರದಲ್ಲಿ ಶುಕ್ರವಾರ (ಜೂನ್‌ 6) ಏಳು ನಕ್ಸಲರನ್ನು ಭದ್ರತಾ ಸಿಬ್ಬಂದಿಯು ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆಯ ವೇಳೆ ಮೂವರು ಯೋಧರಿಗೆ ಗಾಯಗಳಾಗಿವೆ. ಭದ್ರತಾ ಸಿಬ್ಬಂದಿ ಮೇಲೆ ಮಾವೋವಾದಿಗಳು ಕೂಡ ಗುಂಡಿನ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Naxals
Koo

ರಾಯ್‌ಪುರ: ಛತ್ತೀಸ್‌ಗಢ, ತೆಲಂಗಾಣ ಗಡಿ ಸೇರಿ ಹಲವೆಡೆ ಭದ್ರತಾ ಸಿಬ್ಬಂದಿಯು ಮಾವೋವಾದಿಗಳ ವಿರುದ್ಧ ಸಮರ ಸಾರಿದ್ದಾರೆ. ನಕ್ಸಲರು ಅಡಗಿರುವ ಕುರಿತು ಸಣ್ಣ ಮಾಹಿತಿ ಸಿಕ್ಕರೂ ಸಾಕು, ಕಾರ್ಯಾಚರಣೆ ಮೂಲಕ ಅವರನ್ನು ಹೊಡೆದುರುಳಿಸುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ನಾರಾಯಣಪುರದಲ್ಲಿ ಶುಕ್ರವಾರ (ಜೂನ್‌ 6) ಏಳು ನಕ್ಸಲರನ್ನು (Naxalites) ಭದ್ರತಾ ಸಿಬ್ಬಂದಿಯು (Security Forces) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆಯ ವೇಳೆ ಮೂವರು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಓರ್ಛಾ ಪ್ರದೇಶದ ಗೋಬೆಲ್‌ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲಾ ಮೀಸಲು ದಳ, ಐಟಿಬಿಪಿ ಸಿಬ್ಬಂದಿಯು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದೇ ವೇಳೆ, ಭದ್ರತಾ ಸಿಬ್ಬಂದಿ ಮೇಲೆ ಮಾವೋವಾದಿಗಳು ಕೂಡ ಗುಂಡಿನ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಏಳೂ ನಕ್ಸಲರ ಶವಗಳನ್ನು ಪತ್ತೆಹಚ್ಚಲಾಗಿದ್ದು, ಭಾರಿ ಪ್ರಮಾಣಧ ಶಸ್ತ್ರಾಸ್ತ್ರಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

Kerala Police And Naxals Firing

6 ತಿಂಗಳಲ್ಲಿ 114 ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಆರು ತಿಂಗಳಲ್ಲಿ 114 ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇ ‌13ರಂದು ಮಹಾರಾಷ್ಟ್ರದಲ್ಲಿ ಮೂವರು ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದರು. ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Continue Reading

ದೇಶ

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Chandrababu Naidu: ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರು ಕಳೆದ 5 ದಿನಗಳಲ್ಲಿಯೇ 870 ಕೋಟಿ ರೂ. ಗಳಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯುವ 1,319 ಕೋಟಿ ರೂ.ನಿಂದ 2,190 ಕೋಟಿ ರೂ.ಗೆ ಏರಿಕೆಯಾಗಿದೆ. ಹೆರಿಟೇಜ್‌ ಫುಡ್ಸ್‌ ಕಂಪನಿಯಲ್ಲಿ ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರ ಷೇರುಗಳ ಪ್ರಮಾಣವು ಶೇ.35.7ರಷ್ಟಿದೆ.

VISTARANEWS.COM


on

Chandrababu Naidu
Koo

ನವದೆಹಲಿ: ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು (Chandrababu Naidu) ಅವರ ಅದೃಷ್ಟವು ಖುಲಾಯಿಸಿದೆ. ಆಂಧ್ರಪ್ರದೇಶದ (Andhra Pradesh) 175 ವಿಧಾನಸಭೆ ಕ್ಷೇತ್ರಗಳ ಪೈಕಿಯು ಟಿಡಿಪಿ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾಗಿ, ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಇನ್ನು, ಲೋಕಸಭೆಯ 25 ಕ್ಷೇತ್ರಗಳ ಪೈಕಿ 16ರಲ್ಲಿ ಗೆಲುವು ಸಾಧಿಸಿದ್ದು, ಕೇಂದ್ರದಲ್ಲೂ ಕಿಂಗ್‌ ಮೇಕರ್‌ ಆಗಿದ್ದಾರೆ. ಅಷ್ಟೇ ಅಲ್ಲ, ಚಂದ್ರಬಾಬು ನಾಯ್ಡು ಅವರ ಕುಟುಂಬವು ಕಳೆದ 5 ದಿನಗಳಲ್ಲಿಯೇ 870 ಕೋಟಿ ರೂ. ಗಳಿಸಿದೆ. ಅಧಿಕಾರ, ಹಣ, ಗೌರವ, ಹುದ್ದೆ… ಹೀಗೆ ಒಂದೇ ವಾರದಲ್ಲಿ ಚಂದ್ರಬಾಬು ನಾಯ್ಡು ಅದೃಷ್ಟವು ಸಕಲ ರೀತಿಯಲ್ಲಿ ಬದಲಾಗಿದೆ.

ಹೌದು, ಚಂದ್ರಬಾಬು ನಾಯ್ಡು ಅವರ ಪಕ್ಷವು ಐತಿಹಾಸಿಕ ಗೆಲುವು ದಾಖಲಿಸಿದ ಕಾರಣ ಚಂದ್ರಬಾಬು ನಾಯ್ಡು ಅವರ ಕುಟುಂಬದ ಒಡೆತನದ ಹೆರಿಟೇಟ್‌ ಫುಡ್ಸ್‌ (Heritage Foods) ಕಂಪನಿಯ ಷೇರುಗಳ ಮೌಲ್ಯವು ಚುನಾವಣೆ ಫಲಿತಾಂಶದ ಬಳಿಕ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರು ಕಳೆದ 5 ದಿನಗಳಲ್ಲಿಯೇ 870 ಕೋಟಿ ರೂ. ಗಳಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯುವ 1,319 ಕೋಟಿ ರೂ.ನಿಂದ 2,190 ಕೋಟಿ ರೂ.ಗೆ ಏರಿಕೆಯಾಗಿದೆ.

ನಾಯ್ಡು ಕುಟುಂಬ

ನಾಯ್ಡು ಕುಟುಂಬದ ಪಾಲೆಷ್ಟು?

ಹೆರಿಟೇಜ್‌ ಫುಡ್ಸ್‌ ಕಂಪನಿಯಲ್ಲಿ ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರ ಷೇರುಗಳ ಪ್ರಮಾಣವು ಶೇ.35.7ರಷ್ಟಿದೆ. ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ ಅವರು ಶೇ.24.37, ಪುತ್ರ ಲೋಕೇಶ್‌ ಶೇ.10.82ರಷ್ಟು ಹಾಗೂ ಸೊಸೆ ಬ್ರಹ್ಮಿಣಿ 0.46ರಷ್ಟು ಷೇರುಗಳನ್ನು ಹೊಂದಿದ್ದಾರೆ. ಚಂದ್ರಬಾಬು ನಾಯ್ಡು ಅವರ ಮೊಮ್ಮಗ ದೇವಾಂಶ್‌ ಕೂಡ ಡೇರಿ ಕಂಪನಿಯಲ್ಲಿ 0.06ರಷ್ಟು ಷೇರುಗಳನ್ನು ಹೊಂದಿದ್ದಾನೆ.

ಹೆರಿಟೇಜ್‌ ಫುಡ್ಸ್‌ ಕಂಪನಿಯನ್ನು 1992ರಲ್ಲಿ ಸ್ಥಾಪನೆ ಮಾಡಲಾಗಿದ್ದು, ಡೇರಿ ಉತ್ಪನ್ನಗಳ ಪೂರೈಕೆಗೆ ಹೆಸರುವಾಸಿಯಾಗಿದೆ. ಹಾಲು, ಹಾಲಿನ ಉತ್ಪನ್ನಗಳಾದ ಮೊಸರು, ತುಪ್ಪ, ಪನೀರ್‌, ಇಮ್ಯುನಿಟಿ ಮಿಲ್ಕ್‌ ಸೇರಿ ಹಲವು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ. ದೇಶದ 11 ರಾಜ್ಯಗಳಲ್ಲಿ ಸುಮಾರು 1.5 ಕೋಟಿ ಮನೆಗಳಲ್ಲಿ ಹೆರಿಟೇಜ್‌ ಫುಡ್ಸ್‌ ಕಂಪನಿಯ ಉತ್ಪನ್ನಗಳನ್ನು ಬಳಸಲಾಗುತ್ತದೆ.

ಇದರ ಮಾರುಕಟ್ಟೆ ಬಂಡವಾಳ ಮೊತ್ತವು ಸುಮಾರು 3,700 ಕೋಟಿ ರೂ.ನಿಂದ 6,136 ಕೋಟಿ ರೂ.ಗೆ ಏರಿಕೆಯಾಗಿದೆ. ಚುನಾವಣೆ ಫಲಿತಾಂಶದ ಬಳಿಕ ಕಂಪನಿಯ ಷೇರುಗಳ ಮೌಲ್ಯದಲ್ಲಿ ಶೇ.55ರಷ್ಟು ಏರಿಕೆಯಾಗಿದ್ದು, ಹೂಡಿಕೆದಾರರೂ ಬಂಪರ್‌ ಲಾಭ ಗಳಿಸಿದ್ದಾರೆ. ಜೂನ್‌ 7ರಂದು ಹೆರಿಟೇಜ್‌ ಫುಡ್ಸ್‌ನ ಒಂದು ಷೇರಿನ ಬೆಲೆಯಲ್ಲಿ ಶೇ.10ರಷ್ಟು ಏರಿಕೆಯಾಗಿದ್ದು, ಒಂದು ಷೇರಿನ ಮೌಲ್ಯವು 661 ರೂ. ಆಗಿದೆ. ಜೂನ್‌ 3ರಂದು ಒಂದು ಷೇರಿನ ಬೆಲೆ 424 ರೂ. ಇತ್ತು.

ಇದನ್ನೂ ಓದಿ: Modi 3.0 Government: ನರೇಂದ್ರ ಮೋದಿ ಮುಂದೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟಿರುವ ಬೇಡಿಕೆಗಳು ಇಷ್ಟು!

Continue Reading

ದೇಶ

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Narendra Modi: ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಇದ್ದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು, ಇದಕ್ಕೆ ಎನ್‌ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿವೆ. ಇದಾದ ಬಳಿಕ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಸರ್ಕಾರ ರಚನೆ ಕುರಿತು ಹಕ್ಕು ಮಂಡಿಸಿದ್ದಾರೆ. ಇನ್ನು, ಜೂನ್‌ 9ರಂದು (ಭಾನುವಾರ) ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ.

ಹೌದು, ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. “ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ರಾಷ್ಟ್ರಪತಿಯವರ ಕಚೇರಿಯು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿ ಹಲವು ನಾಯಕರು ಇದ್ದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ನಡೆದ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಿತೀಶ್‌ ಕುಮಾರ್‌ ಅವರು ಹೊಗಳಿದರು. “ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಇದನ್ನೂ ಓದಿ: Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM


on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading
Advertisement
Naxals
ದೇಶ4 mins ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ33 mins ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ37 mins ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ37 mins ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ1 hour ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ2 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Narendra Modi
ದೇಶ2 hours ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ2 hours ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

UG Neet 2024
ಕರ್ನಾಟಕ2 hours ago

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

Niveditha Gowda
ಪ್ರಮುಖ ಸುದ್ದಿ3 hours ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌