ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ವಿಚಾರಣೆ ನಡೆಸಲು ಕೇಂದ್ರ ತನಿಖಾ ದಳ (CBI) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ(Delhi liquor policy case).
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಳೆದ ತಿಂಗಳು ದಿಲ್ಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಆ ಬಳಿಕ ಜಾರಿ ನಿರ್ದೇಶನಾಲಯವೂ ಅವರು ವಿರುದ್ಧ ದೂರು ದಾಖಲಿಸಿಕೊಂಡು, ಅವರನ್ನು ತನ್ನ ವಶಪಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಅವರಿನ್ನೂ ಜೈಲಿನಲ್ಲಿದ್ದು, ಜಾಮೀನು ದೊರೆತಿಲ್ಲ. ಅವರು ಜಾಮೀನು ಅರ್ಜಿಯನ್ನು ಮುಂದೂಡತ್ತಲೇ ಬರಲಾಗುತ್ತಿದೆ.
ಇದನ್ನೂ ಓದಿ: Kejriwal Government | ಅಬಕಾರಿ ನೀತಿ ಹಗರಣ: ವಕೀಲರಿಗೆಂದೇ 25 ಕೋಟಿಗೂ ಹೆಚ್ಚು ವೆಚ್ಚ ಮಾಡಿದ ಕೇಜ್ರಿವಾಲ್ ಸರ್ಕಾರ!
ಈಗ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಸಮನ್ಸ್ ನೀಡಿದ್ದು, ಮತ್ತೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಬಹುದು. ದಿಲ್ಲಿಯಲ್ಲಿ ಆಪ್ ಮತ್ತು ಬಿಜೆಪಿ ನಡುವೆ ತೀವ್ರ ರಾಜಕೀಯ ವೈರತ್ವವಿದೆ. ಈ ಹಿಂದೆ ಸಿಬಿಐ, ಇದೇ ರೀತಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಕರೆದು, ಬಳಿಕ ಬಂಧಿಸಿತ್ತು. ಅದೇ ರೀತಿ, ಸಿಎಂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಲಿದೆಯಾ, ಕಾದು ನೋಡಬೇಕು.