ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Policy Case) ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ (BRS) ನಾಯಕಿ, ಕೆ. ಕವಿತಾ(K Kavitha)ರನ್ನು ಡಿಡಿಯು ಆಸ್ಪತ್ರೆ(DDU Hospital) ದಾಖಲಿಸಲಾಗಿದೆ. ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕವಿತಾ, ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಸುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
BRS leader K Kavitha, who is lodged in Tihar Jail, has been admitted to DDU Hospital after a deterioration in her health: Tihar Jail Officials
— ANI (@ANI) July 16, 2024
(file pic) pic.twitter.com/UzFuWK0iJ7
ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೀಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.
ಇಲ್ಲಿಯ ತನಕ ನಡೆದ ತನಿಖೆಯ ಪ್ರಕಾರ ಒಟ್ಟು 1,100 ಕೋಟಿ ರೂ. ಮೊತ್ತದ ಹಗರಣ ನಡೆದಿರುವುದು ಕಂಡು ಬಂದಿದೆ. ಕವಿತಾ, ಚಂಪ್ರೀತ್ ಸಿಂಗ್, ಪ್ರಿನ್ಸ್ ಕುಮಾರ್, ದಾಮೋದರ್ ಶರ್ಮಾ ಮತ್ತು ಅರವಿಂದ್ ಸಿಂಗ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ಈ ಪೈಕಿ ಕವಿತಾ ಅವರು 292.8 ಕೋಟಿ ರೂ.ಗಳ ಪಿಒಸಿ (Money generated and laundered in crime)ಯಲ್ಲಿ ಭಾಗಿಯಾಗಿದ್ದಾರೆ. 100 ಕೋಟಿ ರೂ.ಗಳ ಕಿಕ್‌ಬ್ಯಾಕ್ ಅನ್ನು ಎಎಪಿ ನಾಯಕರಿಗೆ ನೀಡಲಾಗಿದೆ. ಮಾತ್ರವಲ್ಲ ಕವಿತಾ ಅವರು ಮೊಬೈಲ್‌ನಲ್ಲಿದ್ದ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದೂ ದೂರಲಾಗಿದೆ.
ಆರೋಪಿ ವಿಜಯ್ ನಾಯರ್ (ಎಎಪಿಯ ಉನ್ನತ ನಾಯಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ) ಮೂಲಕ ಕವಿತಾ ಅವರು ಸೌತ್ ಗ್ರೂಪ್ ಸದಸ್ಯರು ಮತ್ತು ಎಎಪಿ ನಾಯಕರೊಂದಿಗೆ ಸೇರಿ 100 ಕೋಟಿ ರೂ.ಗಳನ್ನು ಪಾವತಿಸಲು ಮತ್ತು ಅನಗತ್ಯ ಪ್ರಯೋಜನಗಳನ್ನು ಪಡೆಯಲು ಸಂಚು ರೂಪಿಸಿದ್ದರು ಎಂದು ವಿವರಿಸಲಾಗಿದೆ.
ಸೌತ್ ಗ್ರೂಪ್ ಎಂಬ ಕಂಪನಿಯನ್ನು ಕೆ. ಕವಿತಾ ಸೇರಿ ಹಲವರನ್ನು ಮುನ್ನಡೆಸುತ್ತಿದ್ದು, ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ಬಳಿಕ ಇದೇ ಕಂಪನಿಗೆ ಗುತ್ತಿಗೆ ಪಡೆಯಲು ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಕ್ಕೆ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕಾಗಿ ಇ.ಡಿ ಹಾಗೂ ಸಿಬಿಐ ಕೂಲಂಕಷ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್ ಆರೋಪ