ನವದೆಹಲಿ: ರಾಷ್ಟ್ರ ರಾಜಧಾನಿಯ ಸುಲ್ತಾನ್‌ಪುರಿಯಲ್ಲಿ ಅಪಘಾತದ ಬಳಿಕ ಕಾರಿನ ಅಡಿಗೆ ಸಿಲುಕಿದ 20 ವರ್ಷದ ಯುವತಿಯನ್ನು 12 ಕಿ.ಮೀ ಎಳೆದ ಪ್ರಕರಣ ಸುದ್ದಿಯಾದ ಬೆನ್ನಲ್ಲೇ, ಚಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಅರ್ಧ ಕಿ.ಮೀ ಎಳೆಯುವ (Man Dragged On Car) ಮೂಲಕ ಅಮಾನವೀಯತೆ ಪ್ರದರ್ಶಿಸಿದ್ದಾನೆ. ಈ ವಿಡಿಯೊ ಈಗ ವೈರಲ್ ಆಗಿದ್ದು, ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ.
ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಮೊದಲಿಗೆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ವ್ಯಕ್ತಿಯು ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಹೀಗಿದ್ದರೂ, ಚಾಲಕನು ಕಾರು ಚಲಾಯಿಸಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಕೂಡಲೇ ಪೊಲೀಸರು ಕಾರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ | Sultanpuri Death Case | ಅಪಘಾತಕ್ಕೆ ಬಲಿಯಾದ ಅಂಜಲಿ ಸಿಂಗ್ ಮನೆಯಲ್ಲಿ ಕಳವು, ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದ ಕುಟುಂಬಸ್ಥರು