ದೇಶ
Delhi Shocker: ಮಹಿಳಾ ಪಿಜಿ ಮುಂದೆ ಯುವಕ ಹಸ್ತುಮೈಥುನ! ಕ್ರಮ ಕೈಗೊಳ್ಳಲು ವಿಫಲರಾದ್ರಾ ದಿಲ್ಲಿ ಪೊಲೀಸ್?
Delhi Shocker: ಉತ್ತರ ದಿಲ್ಲಿಯ ಹುಡುಗಿಯ ಪಿಜಿಯ ಮುಂದೆ ಯುವಕನೊಬ್ಬ ಹಸ್ತುಮೈಥುನ ಮಾಡಿಕೊಂಡಿದ್ದ. ಈ ಕುರಿತು ದೂರು ದಾಖಲಾಗಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ದಿಲ್ಲಿ ಪೊಲೀಸ್ ವಿರುದ್ಧ ಆರೋಪ ಕೇಳಿ ಬಂದಿದೆ.
ನವದೆಹಲಿ: ಮಹಿಳಾ ಪಿಜಿ ಮುಂದೆ(Girls PG), ಬಾಲ್ಕಿನಿಯಲ್ಲಿ ನಿಂತಿದ್ದ ಹುಡುಗಿಯರನ್ನು ನೋಡುತ್ತ ವ್ಯಕ್ತಿಯೊಬ್ಬ ಹಸ್ತಮೈಥುನ (Masturbating) ಮಾಡಿಕೊಂಡ ಘಟನೆ ದಿಲ್ಲಿಯಲ್ಲಿ (Delhi)ನಡೆದಿದೆ. ಜೂನ್ 12ರಂದು ಈ ಘಟನೆ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ(Delhi Shocker). ಈ ಕುರಿತು ಪೇಯಿಂಗ್ ಗೆಸ್ಟ್ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಕುರಿತು ದೂರು ನೀಡಿದ್ದರು. ಈ ದೂರಿನ ಕುರಿತು ನಗರ ಪೊಲೀಸರು (Delhi Police) ಕ್ರಮ ಕೈಗೊಂಡ ವರದಿಯನ್ನು ನೀಡುವಂತೆ ದೆಹಲಿ ಮಹಿಳಾ ಆಯೋಗ (DCW) ಅಧ್ಯಕ್ಷ ಸ್ವಾತಿ ಮಾಲಿವಾಲ್ ಅವರು ಕೇಳಿದ್ದಾರೆ. ಈ ಮಧ್ಯೆ, ಯುವಕರ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ದಿಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಅವರ ಟ್ವೀಟ್
हमें दो शिकायतें मिली कि Girls PG के बाहर एक लड़का रात में सड़क पर खड़ा होकर Masturbation करता है। दोनों वीडियो एक ही शख़्स की लग रही हैं। दिल्ली पुलिस को हाज़िरी समन जारी कर Action Taken रिपोर्ट माँगी है। ये मामला बेहद गंभीर है।
— Swati Maliwal (@SwatiJaiHind) June 26, 2023
Warning – Disturbing Content pic.twitter.com/vIga4CXHEf
ಈ ಘಟನೆ ಕುರಿತು ಕೈಗೊಳ್ಳಲಾದ ಕ್ರಮದ ಕುರಿತು ಉತ್ತರ ನೀಡುವಂತೆ ಜೂನ್ 19ರಂದು ನೋಟಿಸ್ ನೀಡಿದ್ದರೂ ಈವರೆಗೂ ದಿಲ್ಲಿ ಪೊಲೀಸರು ಯಾವುದೇ ಉತ್ತರವನ್ನು ನೀಡಿಲ್ಲ. ಈ ಪ್ರಕರಣ ತನಿಖೆಯ ಕುರಿತು ಅವರು ವೈಫಲ್ಯ ಕಾಣುತ್ತಿದ್ದಾರೆ ಎಂದು ಆಯೋಗವು ಆರೋಪಿಸಿದೆ. ಈ ಪ್ರಕರಣದಲ್ಲಿ ಆರೋಪಿಯ ಬಂಧನ, ಎಫ್ಐಆರ್ ಸೇರಿದಂತೆ ಇನ್ನಿತರ ಮಾಹಿತ ನೀಡುವಂತೆ ಮಹಿಳಾ ಆಯೋಗವು ಪೊಲೀಸರಿಗೆ ಕೇಳಿತ್ತು.
ಈ ಸುದ್ದಿಯನ್ನೂ ಓದಿ: Delhi Crime | ಮತ್ತೊಬ್ಬಳ ಜತೆಗೆ ಚಾಟಿಂಗ್, ಸಿಟ್ಟಿಗೆದ್ದ ಶ್ರದ್ಧಾ-ಅಫ್ತಾಬ್ ನಡುವೆ ಫೈಟಿಂಗ್
ನಿರ್ದಿಷ್ಟ ಸಮಯದಲ್ಲಿ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಯಾಕೆ ಸಾಧ್ಯವಾಗಿಲ್ಲ ಎಂದು ಕಾರಣ ನೀಡುವಂತೆ ದಿಲ್ಲಿ ಪೊಲೀಸ್‌ಗೆ ಮಹಿಳಾ ಆಯೋಗ ಕೇಳಿದೆ. ಜೂನ್ 28 ರಂದು ಡಿಸಿಡಬ್ಲ್ಯೂ ಮುಂದೆ ಹಾಜರಾಗಲು ಮತ್ತು ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಂಡ ವರದಿಯನ್ನು ನೀಡುವಂತೆ ಅದು ಮಾರಿಸ್ ನಗರದ ಪೊಲೀಸ್ ಠಾಣೆ ಮುಖ್ಯಸ್ಥರಿಗೆ ಸೂಚಿಸಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕ್ರೈಂ
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
ಭೋಪಾಲ್: ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.
ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಆಸ್ಪತ್ರೆಗೆ ಸಾಗಿಸಿದ ಸಂತ
ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!
ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೇಶ
Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!
Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್ ಮಾಡುತ್ತಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.
ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್ ಮಾಡಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ರಿಂಕು ದುಗ್ಗ ಅವರ ಪತಿ ಸಂಜೀವ್ ಖೈರ್ವಾರ್ ಕೂಡ 1994ರ ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್‌ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್‌ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.
ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್ ಸಿವಿಲ್ ಸರ್ವಿಸಸ್ (CCS) ಪೆನ್ಶನ್ ರೂಲ್ಸ್, 1972ರ ಫಂಡಮೆಂಟಲ್ ರೂಲ್ಸ್ (FR) 56(j), ರೂಲ್ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿವಾದವೇನು?
ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್ ಸೆಕ್ರೆಟರಿ ಅಗಿದ್ದ ಖೈರ್ವಾರ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.
ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
ವಿವಾದದ ಬಳಿಕ 1994ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ದೇಶ
Lok Sabha Election 2024: 2.5 ಲಕ್ಷ ಗ್ರಾಮಗಳಲ್ಲಿ ಬಿಜೆಪಿ ‘ರಥ’ಯಾತ್ರೆ; ‘ಲೋಕ’ ಸಮರಕ್ಕೆ ರಣತಂತ್ರ
Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ ಮಾಹಿತಿ ಇಲ್ಲಿದೆ.
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಸೇರಿ ಎಲ್ಲ ಪಕ್ಷಗಳು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ. ಸುಮಾರು 26 ಪಕ್ಷಗಳನ್ನು ಒಗ್ಗೂಡಿಸಿಕೊಂಡು ಪ್ರತಿಪಕ್ಷಗಳು ಇಂಡಿಯಾ ಒಕ್ಕೂಟ (INDIA Bloc) ರಚಿಸಿದರೆ, ಬಿಜೆಪಿಯೂ ಎನ್‌ಡಿಎ (NDA) ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಿದೆ. ಅದರಲ್ಲೂ, ಲೋಕಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹೊಸ ಮಾದರಿಯಲ್ಲಿ ರಥಯಾತ್ರೆ (Grameen Samvaad Yatra) ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಹೌದು, ಬಿಜೆಪಿಯು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ‘ಗ್ರಾಮೀಣ ಸಂವಾದ ಯಾತ್ರೆ’ ಕೈಗೊಳ್ಳಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವುದು, ಕೇಂದ್ರದ ಸಾಧನೆ, ಪ್ರಮುಖ ತೀರ್ಮಾನಗಳನ್ನು ಜನರಿಗೆ ತಿಳಿಸುವುದು ಗ್ರಾಮೀಣ ಸಂವಾದ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರೊಂದಿಗೆ, ಲೋಕಸಭೆ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರನ್ನು ತನ್ನತ್ತ ಸೆಳೆಯುವುದು ಬಿಜೆಪಿಯ ರಣತಂತ್ರವಾಗಿದೆ ಎನ್ನಲಾಗಿದೆ.
1,500 ರಥಗಳು ಸಜ್ಜು
ದೇಶದ ಸುಮಾರು 2.5 ಲಕ್ಷ ಗ್ರಾಮಗಳಲ್ಲಿ ರಥಗಳ ಮೂಲಕ ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳುವುದು ಬಿಜೆಪಿಯ ಯೋಜನೆಯಾಗಿದೆ. ಇದಕ್ಕಾಗಿ 1,500 ಅತ್ಯಾಧುನಿಕ ರಥಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ. ಜಿಪಿಎಸ್ ಅಳವಡಿಕೆ ಮಾಡಲಾದ, ಡ್ರೋನ್‌ಗಳ ನಿರ್ವಹಣೆ ಸೇರಿ ಹಲವು ರೀತಿಯಲ್ಲಿ ಜನರ ಜತೆ ಸಂವಾದ ನಡೆಸಲು ಸಾಧ್ಯವಾಗುವ ಅತ್ಯಾಧುನಿಕ ರಥಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?
ಕೇಂದ್ರದ ಸಚಿವರು, ಸಂಸದರು, ಬಿಜೆಪಿ ನಾಯಕರು, ಶಾಸಕರು ಸೇರಿ ಹಲವರು ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಇದರ ಜತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನೂ ಇಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಭಾರಿ ಪ್ರಮಾಣದ ಪ್ರಚಾರಕ್ಕೂ ಬಿಜೆಪಿ ಎಲ್ಲ ರೀತಿಯಲ್ಲಿ ಸಜ್ಜಾಗುತ್ತಿದೆ.
ದೇಶ
Push Up Challenge: ಚಲಿಸುವ ಮೆಟ್ರೋದಲ್ಲೇ ಪುಶ್‌ಅಪ್ ಮಾಡಿದ ಅಂಕಲ್; ನಿಬ್ಬೆರಗಾದ ಯುವಕರು!
Push Up Challenge: ಮುಂಬೈ ಮೆಟ್ರೋ ರೈಲೊಂದರಲ್ಲಿ ಮಧ್ಯ ವಯಸ್ಕರೊಬ್ಬರು ಪುಶ್ ಅಪ್(pushup)ಮಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಂಬೈ: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲುಗಳು (metro train) ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿವೆ. ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ಯುವ ಜೋಡಿ ಅಶ್ಲೀಲವಾಗಿ ವರ್ತಿಸುವ ಮೂಲಕ ಸುದ್ದಿಯಾಗಿತ್ತು. ಇದೀಗ ವೈರಲ್ ಆಗಿರುವ ವಿಡಿಯೊ ಒಂದರಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಪುಶ್ ಅಪ್ (Pushup)ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ವಯಸ್ಸು ಯಾವುದಾದರೇನು ಫಿಟ್ ಆಗಿರುವುದು ಮುಖ್ಯ ಎಂಬ ಪಾಠವನ್ನು ಅವರು ಈ ಮೂಲಕ ತಿಳಿಸಿ ಕೊಟ್ಟಿದ್ದಾರೆ.
ವಿಡಿಯೊ ವೈರಲ್
ಈ ವಿಡಿಯೊವನ್ನು ಕಂಟೆಂಟ್ ಕ್ರಿಯೇಟರ್ ಭರತ್ ರಗತಿ ತಮ್ಮ ಖಾತೆಯಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೆಟ್ರೋ ರೈಲೊಂದರ ಒಳಗೆ ಪ್ರಯಾಣಿಕರು ನೋಡುತ್ತಿದ್ದಂತೆ ಮೊದಲು ರಗತಿ ವಿವಿಧ ರೀತಿಯ ಪುಶ್ ಅಪ್ ಪ್ರಕಾರಗಳನ್ನು ಪ್ರದರ್ಶಿಸಿದರು. ಬಳಿಕ ಅಲ್ಲೇ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರ ಬಳಿ ಪ್ರಯತ್ನಿಸಲು ಹೇಳಿದರು. ಮೊದಲು ಅವರು ನಿರಾಕರಿಸಿದರು. ಬಳಿಕ ಪುಶ್ ಅಪ್ ಮಾಡುತ್ತ ತಮ್ಮ ಸಾಮರ್ಥ್ಯ ಪ್ರದರ್ಶಿಸತೊಡಗಿದರು. ಅವರ ಈ ಸಾಹಸವನ್ನು ಉಳಿದ ಪ್ರಯಾಣಿಕರು ನಿಬ್ಬೆರಗಾಗಿ ನೋಡುತ್ತಿದ್ದರು.
ಸ್ಟ್ರಾಂಗೆಸ್ಟ್ ಅಂಕಲ್
ಸ್ಟ್ರಾಂಗೆಸ್ಟ್ ಅಂಕಲ್ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈಗಾಗಲೇ ಈ ವಿಡಿಯೊವನ್ನು 3 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ʼಅಂಕಲ್ʼನ ಫಿಟ್ನೆಸ್‌ಗೆ ಅನೇಕರು ಫಿದಾ ಆಗಿದ್ದಾರೆ.
ತರಹೇವಾರಿ ಕಮೆಂಟ್
ಅನೇಕರು ಈ ವಿಡಿಯೊ ನೋಡಿ ತಮ್ಮ ಕಣ್ಣನ್ನು ತಾವೇ ನಂಬಲಾರದ ಸ್ಥಿತಿ ತಲುಪಿದ್ದಾರೆ. ಬಳಿ ಷರ್ಟ್, ಕಪ್ಪು ಪ್ಯಾಂಟ್ ಧರಿಸಿ ಇನ್‌ಶರ್ಟ್ ಮಾಡಿಕೊಂಡಿದ್ದ ಆ ವ್ಯಕ್ತಿ ಈ ರೀತಿ ಎಲ್ಲರನ್ನೂ ಬೆರಗುಗೊಳಿಸುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಇದನ್ನೇ ಅನೇಕರು ಕಮೆಂಟ್ ಮೂಲಕ ತಿಳಿಸಿದ್ದಾರೆ. ʼʼಇವರು ಖಂಡಿತವಾಗಿ ಸೈನಿಕರಾಗಿದ್ದಿರಬೇಕುʼʼ ಎಂದು ಒಬ್ಬರು ಹೇಳಿದ್ದಾರೆ. ʼʼಈ ಅಂಕಲ್ ರೀತಿ ತಾಳ್ಮೆಯಿಂದ, ಪ್ರಬುದ್ಧರಾಗಿ, ಸರಳವಾಗಿ ಇರುವುದನ್ನು ಕಲಿಯಬೇಕುʼʼ ಎಂದು ಇನ್ನೊಬ್ಬರು ಸಲಹೆ ನೀಡಿದ್ದಾರೆ. ʼʼಆರಂಭದಲ್ಲಿ ಅವರು ಸ್ವಲ್ಪ ತಯಾರಿ ನಡೆಸಿಕೊಂಡು ಬಳಿಕ ಸರಾಗವಾಗಿ ಪುಶ್ ಅಪ್ ತೆಗೆದರುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಈ ಅಂಕಲ್ ಯುವ ಜನತೆಗೆ ಸ್ಫೂರ್ತಿʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ʼʼಕವರ್ ನೋಡಿ ಪುಸ್ತಕವನ್ನು ನಿರ್ಧರಿಸಬೇಡಿ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆʼʼ ಎಂದು ಕಮೆಂಟ್ ಮಾಡಿದ್ದಾರೆ ಇನ್ನೊಬ್ಬರು. ಅನೇಕರು ಬೆಂಕಿ ಮತ್ತು ಹೃದಯದ ಎಮೋಜಿ ಕಳುಹಿಸುವ ಮೂಲಕ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ.
ಇದನ್ನೂ ಓದಿ: Viral News: ತುಂಬಿ ಹರಿವ ಹಳ್ಳದಲ್ಲಿ ಶಾಲಾ ಬಸ್ ಚಲಾಯಿಸಿ ಮಕ್ಕಳ ಜೀವದ ಜೊತೆಗೆ ಚಾಲಕನ ಚೆಲ್ಲಾಟ!
ಸದ್ಯ ಈ ಪುಶ್ ಅಪ್ ಚಾಲೆಂಜ್ ಮೊದಲೇ ಪ್ಲಾನ್ ಆಗಿತ್ತಾ ಅಥವಾ ಆಕಸ್ಮಿಕವಾಗಿ ಜರುಗಿದ್ದೇ ಎನ್ನುವುದು ಸ್ಪಷ್ಟವಾಗಿಲ್ಲ. ಅದೇನೇ ಇರಲಿ ಒಟ್ಟಿನಲ್ಲಿ ಅಂಕಲ್ ಪುಶ್ ಅಪ್ ಚಾಲೆಂಜ್ ಸ್ವೀಕರಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಹಲವರ ಮನಸ್ಸು ಬದಲಾಯಿಸಿದ್ದಂತೂ ಸುಳ್ಳಲ್ಲ.
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್