Gold Demand Trends: 2022ರಲ್ಲಿ ಚಿನ್ನದ ಬೇಡಿಕೆ ದಶಕದಲ್ಲೇ ಅತ್ಯಧಿಕ - Vistara News

ದೇಶ

Gold Demand Trends: 2022ರಲ್ಲಿ ಚಿನ್ನದ ಬೇಡಿಕೆ ದಶಕದಲ್ಲೇ ಅತ್ಯಧಿಕ

ಬಂಗಾರ ಬಳಕೆಗೆ ಸಂಬಂಧಿಸಿದಂತೆ ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿಯನ್ನು (Gold Demand Trends) ಬಿಡುಗಡೆ ಮಾಡಿದ್ದು, ಕಳೆದ ದಶಕದಲ್ಲೇ 2022ರಲ್ಲಿ ಚಿನ್ನಕ್ಕೆ ಅತಿ ಹೆಚ್ಚು ಬೇಡಿಕೆ ಬಂದಿದೆ. ಜತೆಗೆ, ಚಿಲ್ಲರ ಹೂಡಿಕೆಯಲ್ಲಿ ನಿರಂತರ ಹೆಚ್ಚಳ ಕಂಡು ಬಂದಿದೆ.

VISTARANEWS.COM


on

Demand for Gold too high in 2022 and it is highest in decade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವರ್ಲ್ಡ್ ಗೋಲ್ಡ್ ಕೌನ್ಸಿಲ್ (World Gold Council) ಇತ್ತೀಚೆಗೆ ಬಿಡುಗಡೆ ಮಾಡಿದ ಗೋಲ್ಡ್ ಡಿಮ್ಯಾಂಡ್ (Gold Demand Trends) ಟ್ರೆಂಡ್ಸ್ ವರದಿ ಪ್ರಕಾರ 2022ರಲ್ಲಿ ವರ್ಷದಿಂದ ವರ್ಷಕ್ಕೆ ಚಿನ್ನದ ಬೇಡಿಕೆಯಲ್ಲಿ ಶೇ.18ರಷ್ಟು ಹೆಚ್ಚಳವಾಗಿದೆ. ಇದರ ಪರಿಣಾಮ 4,741 ಟನ್‌ಗೆ ತಲುಪಿದ್ದು, 2011 ರ ನಂತರ ಅತ್ಯಧಿಕ ಬೇಡಿಕೆ ಬಂದಿರುವುದು ಇದೇ ಮೊದಲು. ದಾಖಲೆಯ ನಾಲ್ಕನೇ ತ್ರೈಮಾಸಿಕದಿಂದ ಹೆಚ್ಚಿದ ಚಿನ್ನದ ಬೇಡಿಕೆಯು ಸೆಂಟ್ರಲ್ ಬ್ಯಾಂಕ್ –ಖರೀದಿ ಮತ್ತು ನಿರಂತರವಾದ ಬಲವಾದ ಚಿಲ್ಲರೆ ಹೂಡಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ.

2022 ರಲ್ಲಿ ವಾರ್ಷಿಕ ಸೆಂಟ್ರಲ್ ಬ್ಯಾಂಕ್ ಬೇಡಿಕೆ 1,136 ಟನ್‌ಗೆ ದ್ವಿಗುಣವಾಗಿದ್ದು, ಈ ಹಿಂದಿನ ವರ್ಷದಲ್ಲಿ ಇದರ ಪ್ರಮಾಣ 450 ಟನ್ ಇತ್ತು ಮತ್ತು ಇದು 55 ವರ್ಷಗಳಲ್ಲಿ ದಾಖಲೆಯ ಏರಿಕೆಯಾಗಿದೆ. 2022 ರ 4 ನೇ ತ್ರೈಮಾಸಿಕವೊಂದರಲ್ಲಿಯೇ 417 ಟನ್‌ ತಲುಪಿದ್ದು, 2022 ರ ದ್ವಿತೀಯಾರ್ಧದಲ್ಲಿ 800 ಟನ್‌ಗೂ ಅಧಿಕ ಖರೀದಿಯಾಗಿದೆ.

2022 ರಲ್ಲಿನ ಹೂಡಿಕೆ ಬೇಡಿಕೆ (OTC ಹೊರತುಪಡಿಸಿ) ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.10 ರಷ್ಟು ಹೆಚ್ಚಳ ಕಂಡಿದೆ. ಈ ಹೆಚ್ಚಳಕ್ಕೆ ಎರಡು ಪ್ರಮುಖ ಅಂಶಗಳಿವೆ:- ಇಟಿಎಫ್ ಹೊರಹರಿವಿನಲ್ಲಿ ಗಮನಾರ್ಹವಾದ ಇಳಿಕೆಯಾಗಿರುವುದು ಮತ್ತು ಚಿನ್ನದ ಗಟ್ಟಿ ಹಾಗೂ ನಾಣ್ಯಕ್ಕೆ ಬೇಡಿಕೆ ಹೆಚ್ಚಳವಾಗಿರುವುದು.

ಚಿನ್ನದ ಗಟ್ಟಿ ಮತ್ತು ನಾಣ್ಯಗಳು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ಹೂಡಿಕೆದಾರರ ಪರವಾಗಿದ್ದವು. ಇದು ಚೀನಾದಲ್ಲಿನ ಆರ್ಥಿಕ ದೌರ್ಬಲ್ಯವನ್ನು ಸರಿದೂಗಿಸಲು ನೆರವಾಗಿದೆ. 2022 ರ ಒಟ್ಟು ಯೂರೋಪಿಯನ್ ಚಿನ್ನದ ಗಟ್ಟಿ(ಬಾರ್) ಮತ್ತು ನಾಣ್ಯಗಳ ಹೂಡಿಕೆಯ 300 ಟನ್ ಯ ಗಡಿ ದಾಟಿದೆ. ಇದು ನಿರಂತರವಾಗಿ ದೃಢವಾದ ಜರ್ಮನ್ ಬೇಡಿಕೆಯಿಂದ ನೆರವಾಗಿದೆ. ಮಧ್ಯಪ್ರಾಚ್ಯದಲ್ಲಿಯೂ ಸಹ ಗಮನಾರ್ಹವಾದ ಬೆಳವಣಿಗೆ ಕಂಡುಬಂದಿದೆ. ಇಲ್ಲಿ ವಾರ್ಷಿಕ ಬೇಡಿಕೆಯು ವರ್ಷದಿಂದ ವರ್ಷಕ್ಕೆ ಶೇ.42 ರಷ್ಟು ಹೆಚ್ಚಳವಾಗಿದೆ.

ಇನ್ನು 2022 ರಲ್ಲಿ ಆಭರಣ ಬೇಡಿಕೆಯಲ್ಲಿ ಸ್ವಲ್ಪಮಟ್ಟಿನ ಇಳಿಕೆ ಕಂಡುಬಂದಿದೆ. ಈ ವಿಭಾಗದಲ್ಲಿ ಶೇ.3 ರಷ್ಟು ಇಳಿಕೆ ಉಂಟಾಗಿದ್ದು, ಒಟ್ಟಾರೆ 2,086 ಟನ್‌ಗೆ ಬಂದು ನಿಂತಿತ್ತು. ಇದಕ್ಕೆ ಪ್ರಮುಖ ಕಾರಣ ಚೀನಾದ ವಾರ್ಷಿಕ ಆಭರಣ ಬೇಡಿಕೆಯಲ್ಲಿ ಇಳಿಕೆಯಾಗಿರುವುದು. ವರ್ಷದ ಬಹುತೇಕ ಸಮಯದವರೆಗೆ ಚೀನಾದಲ್ಲಿ ಕೋವಿಡ್-19 ಲಾಕ್ಡೌನ್ ನಿಂದಾಗಿ ಗ್ರಾಹಕ ಚಟುವಟಿಕೆಗಳು ಶೇ.15 ರಷ್ಟು ಇಳಿಕೆಯಾಗಿತ್ತು. ಅದೇ ರೀತಿ 4 ನೇ ತ್ರೈಮಾಸಿಕದಲ್ಲಿ ಚಿನ್ನದ ದರ ಹೆಚ್ಚಳವಾಗಿದ್ದರಿಂದ ಆಭರಣ ಬೇಡಿಕೆಯಲ್ಲಿ ವಾರ್ಷಿಕ ಇಳಿಕೆ ಕಂಡುಬಂದಿದೆ.

2022 ರಲ್ಲಿನ ಒಟ್ಟು ವಾರ್ಷಿಕ ಪೂರೈಕೆ ಶೇ.2 ರಷ್ಟು ಹೆಚ್ಚಳವಾಗಿದ್ದು, 4,755 ಟನ್‌ನಷ್ಟು ಪೂರೈಕೆಯಾಗಿದೆ. ಇನ್ನು ಮೈನ್ ಉತ್ಪಾದನೆಯಲ್ಲಿ ಏರಿಕೆ ಉಂಟಾಗಿದ್ದು, ನಾಲ್ಕು ವರ್ಷಗಳ ಹೆಚ್ಚಳಕ್ಕೆ ಕಾರಣವಾಗಿದೆ. ಇದರ ಪರಿಣಾಮ 3,612 ಟನ್‌ಗೆ ತಲುಪಿದೆ.

ಈ ಬಗ್ಗೆ ಮಾತನಾಡಿದ ವರ್ಲ್ಡ್ ಗೋಲ್ಡ್ ಕೌನ್ಸಿಲ್ ನ ಸೀನಿಯರ್ ಮಾರ್ಕೆಟ್ಸ್ ಅನಾಲಿಸ್ಟ್ ಲೂಯಿಸ್ ಸ್ಟ್ರೀಟ್ ಅವರು, “ಕಳೆದ ಒಂದು ದಶಕದಲ್ಲೇ ಅತ್ಯಧಿಕ ಎನಿಸುವಂತಹ ರೀತಿಯಲ್ಲಿ ಕಳೆದ ವರ್ಷ ವಾರ್ಷಿಕ ಚಿನ್ನದ ಬೇಡಿಕೆ ಹೆಚ್ಚಳವಾಗಿತ್ತು. ಇದು ಸುರಕ್ಷಿತ ಸ್ವತ್ತಿಗಾಗಿ ಸೆಂಟ್ರಲ್ ಬ್ಯಾಂಕ್ ಬೇಡಿಕೆಯಿಂದ ಭಾಗಶಃ ಚಾಲಿತವಾಗಿತ್ತು. ಹೆಚ್ಚುತ್ತಿರುವ ಬಡ್ಡಿ ದರಗಳು ಕೆಲವು ಇಟಿಎಫ್ ಹೊರಹರಿವುಗಳನ್ನು ಪ್ರೋತ್ಸಾಹಿಸಿದ ಪರಿಣಾಮ ಚಿನ್ನದ ವೈವಿಧ್ಯಮಯ ಬೇಡಿಕೆಯನ್ನು ಹೊಂದಿರುವವರು ಸಮತೋಲನ ರೀತಿಯ ಕಾರ್ಯವನ್ನು ನಿರ್ವಹಿಸಿದ್ದಾರೆ. ಆದರೆ, ಚಿನ್ನದ ಬಾರ್ ಮತ್ತು ನಾಣ್ಯ ಹೂಡಿಕೆಯ ಮೇಲೆ ಹಣದುಬ್ಬರ ಪ್ರಮಾಣ ಹೆಚ್ಚಳ ಕಂಡಿತು. ಅಂತಿಮವಾಗಿ, ಒಟ್ಟಾರೆ ಹೂಡಿಕೆ ಬೇಡಿಕೆಯು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.10 ರಷ್ಟು ಹೆಚ್ಚಾಗಿದೆ’’ ಎಂದರು.

ಇದನ್ನೂ ಓದಿ: Twitter accounts | ಟ್ವಿಟರ್‌ ಖಾತೆಗಳಿಗೆ ಗೋಲ್ಡ್‌, ಗ್ರೇ, ಬ್ಲೂ ಟಿಕ್‌ ಮಾರ್ಕ್‌ ಗುರುತು ಲಭ್ಯ, ಏನಿದರ ಅರ್ಥ ?

“ಇನ್ನು 2023 ರ ವಿಚಾರದಲ್ಲಿ, ಆರ್ಥಿಕ ಮುನ್ಸೂಚನೆಗಳು ಸವಾಲಿನ ವಾತಾವರಣ ಮತ್ತು ಜಾಗತಿಕ ಆರ್ಥಿಕ ಹಿಂಜರಿತವನ್ನು ಸೂಚಿಸುತ್ತಿವೆ. ಇದು ಚಿನ್ನದ ಹೂಡಿಕೆ ಪ್ರವೃತ್ತಿಗಳಲ್ಲಿನ ಪಾತ್ರವನ್ನು ಹಿಂದಿರುಗಿಸಲು ಕಾರಣವಾಗಬಹುದು. ಹಣದುಬ್ಬರ ಕಡಿಮೆಯಾದರೆ, ಇದು ಚಿನ್ನದ ಬಾರ್ ಮತ್ತು ನಾಣ್ಯ ಹೂಡಿಕೆಗೆ ಹೆಡ್ ವಿಂಡ್ ಆಗಿರಬಹುದು. ವ್ಯತಿರಿಕ್ತವಾಗಿ ಯುಎಸ್ ಡಾಲರ್ ನ ನಿರಂತರ ದುರ್ಬಲಗೊಳ್ಳುವಿಕೆ ಮತ್ತು ಬಡ್ಡಿ ದರದ ಏರಿಕೆಗಳ ಮಧ್ಯಮ ವೇಗವು ಚಿನ್ನದ ಬೆಂಬಲಿತ ಇಟಿಎಫ್ ಬೇಡಿಕೆಗೆ ಗುಣಾತ್ಮಕವಾದ ಪರಿಣಾಮಗಳನ್ನು ಉಂಟು ಮಾಡುವ ನಿರೀಕ್ಷೆ ಇದೆ’’ ಎಂದು ಅವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Heavy Rain: ಶನಿವಾರ ಸುರಿದ ಭಾರೀ ಮಳೆಗೆ ರಾಜ್‌ಕೋಟ್‌ ವಿಮಾನ ನಿಲ್ದಾಣದ ಪ್ರಯಾಣಿಕರ ಪಿಕಪ್‌ ಮತ್ತು ಡ್ರಾಪ್‌ ಪ್ರದೇಶದ ಛಾವಣಿ ಕುಸಿದಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನೈಋತ್ಯ ಮಾನ್ಸೂನ್ ರಾಜ್ಯಕ್ಕೆ ಮತ್ತಷ್ಟು ಪ್ರವೇಶಿಸುತ್ತಿದ್ದಂತೆ ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ.

VISTARANEWS.COM


on

Heavy Rain
Koo

ಗಾಂಧಿನಗರ: ಶುಕ್ರವಾರ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದು ಓರ್ವ ಮೃತಪಟ್ಟ ಘಟನೆ ಹಸಿಯಾಗಿರುವಾಗಲೇ ಗುಜರಾತ್‌ನಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಶನಿವಾರ ಸುರಿದ ಭಾರೀ ಮಳೆ (Heavy Rain)ಗೆ ರಾಜ್‌ಕೋಟ್‌ ವಿಮಾನ ನಿಲ್ದಾಣ (Rajkot Airport)ದ ಪ್ರಯಾಣಿಕರ ಪಿಕಪ್‌ ಮತ್ತು ಡ್ರಾಪ್‌ ಪ್ರದೇಶದ ಛಾವಣಿ ಕುಸಿದಿದೆ (Canopy Collapses). ಮೂಲಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಏತನ್ಮಧ್ಯೆ ನೈಋತ್ಯ ಮಾನ್ಸೂನ್ ರಾಜ್ಯಕ್ಕೆ ಮತ್ತಷ್ಟು ಪ್ರವೇಶಿಸುತ್ತಿದ್ದಂತೆ ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF)ಯ ಏಳು ತಂಡಗಳನ್ನು ಕಚ್, ರಾಜ್‌ಕೋಟ್‌, ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್, ಭಾವನಗರ, ನರ್ಮದಾ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.

ದಿಲ್ಲಿಯಲ್ಲಿ ಏನಾಗಿತ್ತು?

ಅಧಿಕೃತ ಮೂಲಗಳ ಪ್ರಕಾರ ಶುಕ್ರವಾರ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಪ್ರತಿಕ್ರಿಯಿಸಿದ್ದು, ʼʼದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಮೃತರ ಕುಟುಂಬಕ್ಕೆ 20 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 3 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ರಣಭೀಕರ ಮಳೆಗೆ ದಿಲ್ಲಿ ತತ್ತರ

ದಿಲ್ಲಿಯಲ್ಲಿಯೂ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು. ಸದ್ಯ ಭಾರೀ ಮಳೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಆರೆಂಹ್‌ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Continue Reading

ದೇಶ

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

Kidnapping Case:ದೆಹಲಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಪೋಷಕರು ಹೀರಾ ಸ್ವೀಟ್‌ ಹೊರಗೆ ಕಾರು ನಿಲ್ಲಿಸಿದ್ದರು. ಕೆಲವೇ ಕ್ಷಣದ ಕೆಲಸವಾಗಿರುವುದರಿಂದ ಕಾರನ್ನು ಹಾಗೇ ಸ್ಟಾರ್ಟಿಂಗ್‌ನಲ್ಲಿಟ್ಟು, ಅದರೊಳಗೆ ತಮ್ಮ 11ವರ್ಷದ ಮಗ ಹಾಗೂ 3 ವರ್ಷದ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅಲ್ಲಿಂದ ವಾಪಾಸ್‌ ಬಂದು ನೋಡಿದಾಗ ಕಾರು ಸಮೇತ ಮಕ್ಕಳು ಕಣ್ಮರೆ ಆಗಿದ್ದರು.

VISTARANEWS.COM


on

Kidnapping Case
Koo

ಹೊಸದಿಲ್ಲಿ: ಈಗಿನ ಕಾಲದಲ್ಲಿ ಮಕ್ಕಳ ಬಗ್ಗೆ ಎಷ್ಟೇ ಎಚ್ಚರ ವಹಿಸಿದರೂ ಅದು ಕಡಿಮೆಯೇ. ಸ್ವಲ್ಪ ಎಚ್ಚರ ತಪ್ಪಿದರೂ ಭಾರೀ ಸಂಕಷ್ಟಕ್ಕೀಡಾಗಬೇಕಾಗುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ(Viral News) ದೆಹಲಿಯಲ್ಲಿ ನಡೆದಿದೆ. ಮಕ್ಕಳಿಬ್ಬರನ್ನು ಕಾರಿನಲ್ಲಿ ಬಿಟ್ಟು ಮಿಠಾಯಿ ತರಲೆಂದು ಬೇಕರಿಗೆ ಹೋಗಿದ್ದ ಪೋಷಕರು ವಾಪಸ್‌ ಬಂದು ನೋಡಿದಾಗ ಬಿಗ್‌ ಶಾಕ್‌ ಕಾದಿತ್ತು. ಕಾರು ಸಮೇತ ಮಕ್ಕಳಿಬ್ಬರು ಕಣ್ಮರೆ ಆಗಿದ್ದರು. ಆಮೇಲೆ ಅಪಹರಣಕಾರರು(Kidnapping Case) ಕಾರು ಸಮೇತ ಮಕ್ಕಳನ್ನು ಅಪಹರಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ಘಟನೆ ವಿವರ:

ದೆಹಲಿಯ ಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದೆ. ಪೋಷಕರು ಹೀರಾ ಸ್ವೀಟ್‌ ಹೊರಗೆ ಕಾರು ನಿಲ್ಲಿಸಿದ್ದರು. ಕೆಲವೇ ಕ್ಷಣದ ಕೆಲಸವಾಗಿರುವುದರಿಂದ ಕಾರನ್ನು ಹಾಗೇ ಸ್ಟಾರ್ಟಿಂಗ್‌ನಲ್ಲಿಟ್ಟು, ಅದರೊಳಗೆ ತಮ್ಮ 11ವರ್ಷದ ಮಗ ಹಾಗೂ 3 ವರ್ಷದ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅಲ್ಲಿಂದ ವಾಪಾಸ್‌ ಬಂದು ನೋಡಿದಾಗ ಕಾರು ಸಮೇತ ಮಕ್ಕಳು ಕಣ್ಮರೆ ಆಗಿದ್ದರು.

ಗಾಬರಿಗೊಂಡ ಪೋಷಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟು ಹೊತ್ತಿಗಾಗಗಲೇ ಅಪಹರಣಕಾರರು ಪೋಷಕರಿಗೆ ಕರೆ ಮಾಡಿ ತಕ್ಷಣ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಮಕ್ಕಳ ರಕ್ಷಣೆಗೆ ಹಾಗೂ ಕಿಡಿಗೇಡಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿ ಫೀಲ್ಡ್‌ಗಿಳಿಯುತ್ತಾರೆ. ತಾಂತ್ರಿಕ ಸಹಾಯದಿಂದ ಹೇಗಾದರೂ ಕಾರನ್ನು ಚೇಸ್‌ ಮಾಡಲು ಶುರು ಮಾಡುತ್ತಾರೆ.

ಬರೋಬ್ಬರಿ 20 ಪೊಲೀಸ್‌ ವಾಹನಗಳು ಕಿಡ್ನಾಪರ್ಸ್‌ ಕಾರನ್ನು ಚೇಸ್‌ ಮಾಡಿ, ಪತ್ತೆ ಮಾಡುತ್ತಾರೆ. ಅದೃಷ್ಟವಶಾತ್‌ ಎರಡೂ ಮಕ್ಕಳನ್ನು ಸುರಕ್ಷಿತವಾಗಿ ಕಾಪಾಡುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಕಾರಿನಲ್ಲಿ ಕೆಲವೊಂದು ಅಮೂಲ್ಯ ವಸ್ತುಗಳು, ಹಣ, ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೂ ಅಲ್ಲದೇ ಅಪಹರಣಕಾರರನ್ನೂ ಅರೆಸ್ಟ್‌ ಮಾಡಿದ್ದಾರೆ.

ಇಂತಹದ್ದೇ ಒಂದು ಘಟನೆ ಕಳೆದ ವರ್ಷ ಕುಂದಾನಗರಿ ಬೆಳಗಾವಿಯಲ್ಲೂ ನಡೆದಿತ್ತು. 9 ವರ್ಷದ ಬಾಲಕಿಯನ್ನು ಕಿಡಿಗೇಡಿಯೊಬ್ಬ ಅಪಹರಣಕ್ಕೆ ಯತ್ನಿಸಿದ್ದ. ಟ್ಯೂಷನ್‌ಗೆಂದು ಹೋಗುತ್ತಿದ್ದಾಗ ಬಾಲಕಿಗೆ ಚಾಕೊಲೇಟ್‌ ಆಮಿಷ ಒಡ್ಡುತ್ತಾ ಸಮೀಪಿಸಿದ್ದ. ಹತ್ತಿರ ಬಂದವನೇ ಎತ್ತಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಬಾಲಕಿ ಕಿರುಚಿದ್ದರಿಂದ ಜನ ಬರುವ ಸೂಚನೆ ಕಂಡು ಆರೋಪಿ ಓಡಿ ಹೋಗಿದ್ದ. ಈ ಘಟನೆಯ ಬಗ್ಗೆ ಆತಂಕಿತರಾದ ಹೆತ್ತವರು ಟಿಳಕವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ದೇಶ

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

5 Soldiers Killed: ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆ ಯ ಬಳಿ ಶ್ಯೋಕ್ ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಲಡಾಕ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಟಿ -72 ಟ್ಯಾಂಕ್‌ ನದಿಯನ್ನು ದಾಟುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

VISTARANEWS.COM


on

5 Soldiers Killed
Koo

ಲಡಾಕ್‌: ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆ (Line of Actual Control)ಯ ಬಳಿ ಶ್ಯೋಕ್ (Shyok) ನದಿ ದಾಟುವ ಸಮಯದಲ್ಲಿ ಟ್ಯಾಂಕ್ ಅಪಘಾತಕ್ಕೀಡಾಗಿ ಐವರು ಸೈನಿಕರು ಮೃತಪಟ್ಟಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ (5 Soldiers Killed). ಮೃತಪಟ್ಟ ಐವರು ಜೂನಿಯರ್ ಕಮಿಷನ್ಡ್ ಆಫೀಸರ್ (Junior Commissioned Officer) ಎಂದು ಗುರುತಿಸಲಾಗಿದೆ.

ಲಡಾಕ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಟಿ -72 ಟ್ಯಾಂಕ್‌ (T-72 Tank) ನದಿಯನ್ನು ದಾಟುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅಪಘಾತದ ವೇಳೆ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದ ಸೈನಿಕರು ತಮ್ಮ ಟಿ -72 ಟ್ಯಾಂಕ್‌ನಲ್ಲಿ ಲೇಹ್‌ನಿಂದ 148 ಕಿ.ಮೀ. ದೂರದಲ್ಲಿರುವ, ಚೀನಾ ಗಡಿ ಸಮೀಪದ ದೌಲತ್ ಬೇಗ್ ಓಲ್ಡಿಯ ಮಂದಿರ್ ಮೋರ್ಹ್ ಬಳಿ ನದಿಯನ್ನು ದಾಟುತ್ತಿದ್ದರು.

ʼʼಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ನದಿ ದಾಟುವಾಗ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಿಂದ ಈ ದುರ್ಘಟನೆ ನಡೆದಿದೆ. ಎಲ್ಲ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆʼʼ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಹಿಮ ಕರಗುವಿಕೆಯಿಂದಾಗಿ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದೆ. ಶ್ಯೋಕ್ ಸಿಂಧೂ ನದಿಯ ಉಪನದಿಯಾಗಿದೆ.

ರಾಜನಾಥ್‌ ಸಿಂಗ್‌ ಸಂತಾಪ

ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ʼʼಲಡಾಕ್‌ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

ಶ್ರೀನಗರ: ಕಳೆದ ಕೆಲ ದಿನಗಳಿಂದ ಉಗ್ರರ ದಾಳಿಗೆ ನಲುಗಿ ಹೋಗಿರುವ ಜಮ್ಮು-ಕಾಶ್ಮೀರದಲ್ಲಿ (Jammu Kashmir) ಜೂನ್‌ 13ರಂದು ಮತ್ತೊಂದು ದುರಂತ ಸಂಭವಿಸಿತ್ತು. ರಾಜೌರಿ ಜಿಲ್ಲೆಯಲ್ಲಿ ಸೇನೆಯ ವಾಹನವೊಂದು (Army Vehicle) ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರೆ, ನಾಲ್ವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಗುರುವಾರ ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿದೆ. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಉಗ್ರರ ನಿರ್ನಾಮಕ್ಕೆ ಸೂಚಿಸಿದ್ದಾರೆ. ಹಾಗೆಯೇ, ಎಲ್ಲ ಸೈನಿಕರನ್ನು ಗಡಿಯಲ್ಲಿ ನಿಯೋಜಿಸುವ ಮೂಲಕ ಉಗ್ರರಿಗೆ ತಿರುಗೇಟು ನೀಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Continue Reading

ದೇಶ

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

Ram Path: ಜೂನ್ 23 ಮತ್ತು ಜೂನ್ 25ರಂದು ಸುರಿದ ಮಳೆಯಿಂದಾಗಿ ಅಯೋಧ್ಯೆಯ 14 ಕಿ.ಮೀ. ಉದ್ದದ ರಾಮ ಪಥ ಹಾನಿಗೊಳಗಾಗಿದೆ. ಅಲ್ಲದೆ ಒಳಚರಂಡಿ ನಿರ್ಮಾಣ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರವು ಲೋಕೋಪಯೋಗಿ ಇಲಾಖೆ ಮತ್ತು ಉತ್ತರ ಪ್ರದೇಶ ಜಲ ನಿಗಮದ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

VISTARANEWS.COM


on

Ram Path
Koo

ಅಯೋಧ್ಯೆ: ಜೂನ್ 23 ಮತ್ತು ಜೂನ್ 25ರಂದು ಸುರಿದ ಮಳೆಯಿಂದಾಗಿ ಅಯೋಧ್ಯೆ (Ayodhya)ಯ 14 ಕಿ.ಮೀ. ಉದ್ದದ ರಾಮ ಪಥ (Ram Path) ಹಾನಿಗೊಳಗಾಗಿದೆ. ಅಲ್ಲದೆ ಒಳಚರಂಡಿ ನಿರ್ಮಾಣ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಉತ್ತರ ಪ್ರದೇಶ ಸರ್ಕಾರವು ಲೋಕೋಪಯೋಗಿ ಇಲಾಖೆ (PWD) ಮತ್ತು ಉತ್ತರ ಪ್ರದೇಶ ಜಲ ನಿಗಮದ 6 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ರಾಮಪಥದ ಉದ್ದಕ್ಕೂ ಇರುವ ಸುಮಾರು 15 ಉಪ ಮಾರ್ಗಗಳು ಮತ್ತು ಬೀದಿಗಳು ಮಳೆಯ ನಂತರ ತೀವ್ರವಾಗಿ ಜಲಾವೃತಗೊಂಡಿದ್ದವು. ಇದಲ್ಲದೆ ಸಮೀಪದ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಂಕಷ್ಟ ಎದುರಾಗಿತ್ತು. ಹೀಗಾಗಿ ಇದು ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಎಂದು ಉಲ್ಲೇಖಿಸಿ ಅಹಮದಾಬಾದ್ ಮೂಲದ ಗುತ್ತಿಗೆದಾರ ಸಂಸ್ಥೆ ಭುವನ್ ಇನ್ಫ್ರಾಕಾಮ್ ಪ್ರೈವೇಟ್ ಲಿಮಿಟೆಟ್‌ಗೆ ರಾಜ್ಯ ಸರ್ಕಾರ ನೋಟಿಸ್ ನೀಡಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಧ್ರುವ್ ಅಗರ್ವಾಲ್ ಮತ್ತು ಸಹಾಯಕ ಎಂಜಿನಿಯರ್ ಅನುಜ್ ದೇಶ್ವಾಲ್ ಅವರನ್ನು ಅಮಾನತುಗೊಳಿಸಿ ವಿಶೇಷ ಕಾರ್ಯದರ್ಶಿ ವಿನೋದ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಜತೆಗೆ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ (ಅಭಿವೃದ್ಧಿ) ವಿ.ಕೆ.ಶ್ರೀವಾಸ್ತವ್ ಅವರು ಕಿರಿಯ ಎಂಜಿನಿಯರ್ ಪ್ರಭಾತ್ ಕುಮಾರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.

ಇನ್ನು ಉತ್ತರ ಪ್ರದೇಶ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ಮಿಶ್ರಾ ಅವರು ಕಾರ್ಯನಿರ್ವಾಹಕ ಎಂಜಿನಿಯರ್ ಆನಂದ್ ಕುಮಾರ್ ದುಬೆ, ಸಹಾಯಕ ಎಂಜಿನಿಯರ್ ರಾಜೇಂದ್ರ ಕುಮಾರ್ ಯಾದವ್ ಮತ್ತು ಕಿರಿಯ ಎಂಜಿನಿಯರ್ ಮೊಹಮ್ಮದ್ ಶಾಹಿದ್ ಅವರನ್ನು ಅಮಾನತು ಮಾಡಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

“ರಾಮ ಪಥವನ್ನು ನಿರ್ಮಿಸಿದ ಕೆಲವೇ ದಿನಗಳಲ್ಲಿ ಅದರ ಮೇಲಿನ ಪದರಕ್ಕೆ ಹಾನಿಯಾಗಿದೆ. ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಕೈಗೊಂಡಿದ್ದ ಈ ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಇದರಿಂದ ಸಾರ್ವಜನಿಕರ ಮುಂದೆ ರಾಜ್ಯ ಸರ್ಕಾರದ ಘನತೆಗೆ ಹಾನಿಯಾಗಿದ್ದು, ಈ ನಿಟ್ಟನಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಲೋಕೋಪಯೋಗಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

“ಇದನ್ನು ಗಂಭೀರ ಅಕ್ರಮವೆಂದು ಪರಿಗಣಿಸಿ, ಉತ್ತರ ಪ್ರದೇಶ ಸರ್ಕಾರಿ ನೌಕರರ (ಶಿಸ್ತು ಮತ್ತು ಮೇಲ್ಮನವಿ) 1999ರ ನಿಯಮ 7ರ ಅಡಿಯಲ್ಲಿ ನಿರ್ಮಾಣ್ ಖಾಂಡ್ -3 ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಧ್ರುವ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಕಚೇರಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪಿಡಬ್ಲ್ಯುಡಿ ಪ್ರಧಾನ ಕಾರ್ಯದರ್ಶಿ ಅಜಯ್ ಚೌಹಾಣ್ ತಿಳಿಸಿದ್ದಾರೆ. ಹಾನಿಗೊಳಗಾದ ರಾಮ ಪಥದ ಚಿತ್ರಗಳು ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆ ರಾಮಲಲ್ಲಾನ ಸ್ನಾನವನ್ನೇ ಮರೆತ ಎಂಜಿನಿಯರ್‌ಗಳು! ಗರ್ಭಗುಡಿಯಲ್ಲೀಗ ದೊಡ್ಡ ಸಮಸ್ಯೆ!

ಈ ಮಧ್ಯೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅರ್ಚಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಂಗ್ರಹವಾದ ನೀರು ಹೊರಹರಿಯುವ ಒಳಚರಂಡಿ ವ್ಯವಸ್ಥೆಯಲ್ಲಿ ದೋಷಗಳು ಕಾಣಿಸಿಕೊಂಡು ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಕಾರಣವಾಗಿದೆ.

Continue Reading
Advertisement
Sania Mirza
ಕ್ರೀಡೆ13 mins ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ14 mins ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ23 mins ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ23 mins ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Valmiki Corporation Scam
ಕರ್ನಾಟಕ29 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು1 hour ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest1 hour ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ1 hour ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ1 hour ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest1 hour ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ21 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌