Site icon Vistara News

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

Devendra Fadnavis

Devendra Fadnavis offers to resign as deputy CM, takes responsibility for BJP's poll debacle in Maharashtra

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election Result 2024) ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಕಾರಣ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ (Devendra Fadnavis) ಅವರು ಹಿನ್ನಡೆಯ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಹಾರಾಷ್ಟ್ರದ (Maharashtra) ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ದೇವೇಂದ್ರ ಫಡ್ನವೀಸ್‌ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್‌ ಪವಾರ್)‌ ಅವರ ಮಹಾ ವಿಕಾಸ್‌ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ, ಕಳೆದ ಬಾರಿ 1 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

Exit mobile version