Site icon Vistara News

Dhanbad Apartment Fire: ಧನಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ, 4 ಮಕ್ಕಳು ಸೇರಿ 14 ಸಾವು

Dhanbad Apartment Fire, 14 people dead including 4 children

ಧನಬಾದ್: ಜಾರ್ಖಂಡ್‌ನ ಧನಬಾದ್ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Dhanbad Apartment Fire) ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 14 ಜನರು ಮೃತಪಟ್ಟಿದ್ದಾರೆ. ಭಾರೀ ಪ್ರಮಾಣದಲ್ಲಿ ಅಗ್ನಿ ಆವರಿಸಿದ್ದರಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ಅಗ್ನಿ ಅವಘಡ ಸಂಭವಿಸಲು ಕಾರಣ ಏನೆಂದು ತಿಳಿದು ಬಂದಿಲ್ಲ.

ಧನಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ಸಿಕ್ಕಿಬಿದ್ದಿದ್ದಾರೆ. ಕೆಲವು ಜನರು ಮೃತಪಟ್ಟಿರುವ ವರದಿಯಾಗಿವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಸಾವಿನ ಸಂಖ್ಯೆ ಇನ್ನೂ ನಿಖರವಾಗಿ ಗೊತ್ತಾಗಿಲ್ಲ ಎಂದು ಧನಬಾದ್ ಡೆಪ್ಯುಟಿ ಕಮಿಷನರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: Nasik Solapur Fire | ಮಹಾರಾಷ್ಟ್ರದಲ್ಲಿ ಒಂದೇ ದಿನ 2 ಕಾರ್ಖಾನೆಗಳಲ್ಲಿ ಸ್ಫೋಟ, ಅಗ್ನಿ ಅವಘಡ, ಐವರ ಸಾವು

ಅಗ್ನಿ ಅವಘಡದ ಗಂಭೀರತೆಯನ್ನು ಪರಿಗಣಿಸುವುದಾದರೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನಿಷ್ಠ ಇನ್ನೂ 50 ಜನರು ಅಪಾರ್ಟ್‌ಮೆಂಟ್‌ನೊಳಗೆ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಧನಬಾದ್ನ ಶಕ್ತಿ ಟೆಂಪಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯನ್ನು ನಂದಿಸುವ ಕೆಲಸವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಮಾಡುತ್ತಿದ್ದಾರೆ.

Exit mobile version