ರಾಯ್‌ಪುರ: ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್ ಬಘೇಲ್ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಛತ್ತೀಸ್‌ಗಢ ರ‍್ಯಾಲಿಯಲ್ಲಿ ಮಾತನಾಡಿದ ನರೇಂದ್ರ ಮೋದಿ, “ಮಹಾದೇವ ಎಂಬ ಹೆಸರನ್ನೂ ಕಾಂಗ್ರೆಸ್ ಬಿಟ್ಟಿಲ್ಲ. ಅಲ್ಲೂ ಭ್ರಷ್ಟಾಚಾರ ಎಸಗಿದೆ” ಎಂದು ತಿರುಗೇಟು ನೀಡಿದರು.
“ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷವು ಜನರ ಹಣವನ್ನು ಎಲ್ಲ ರೀತಿಯಲ್ಲಿ ಲೂಟಿ ಮಾಡುತ್ತಿದೆ. ಇದರಿಂದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ರಾಜ್ಯದಲ್ಲಿ ಸುಳ್ಳಿನ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡಿಲ್ಲ. ಆದರೆ, ಬಿಜೆಪಿಯು ಜನರಿಗೆ ನೀಡುವ ಭರವಸೆಗಳನ್ನು ಈಡೇರಿಸುತ್ತದೆ. ನೀವು ಬಿಜೆಪಿಯನ್ನು ಗೆಲ್ಲಿಸಿ ನೋಡಿ. ಇಡೀ ರಾಜ್ಯದ ಚಹರೆಯನ್ನೇ ಬದಲಾಯಿಸುತ್ತೇವೆ. ಆದರೆ, ಕಾಂಗ್ರೆಸ್‌ನವರು ಮಹಾದೇವ ಎಂಬ ಹೆಸರನ್ನೂ ಬಿಟ್ಟಿಲ್ಲ. ಅಲ್ಲೂ ಭ್ರಷ್ಟಾಚಾರ ಎಸಗಿದ್ದಾರೆ” ಎಂದು ಟಾಂಗ್ ಕೊಟ್ಟರು.
#WATCH | Chhattisgarh elections | In Durg, PM Modi says, "Congress party's Chhattisgarh Govt is leaving no opportunity to loot you. They did not leave even the name of 'Mahadev.' Two days back, a big operation took place in Raipur. Huge cache of currency notes was found. People… pic.twitter.com/eeLhIsjjC5
— ANI (@ANI) November 4, 2023
ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದೆ. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್ ಖಾತೆಯನ್ನೂ ಜಪ್ತಿ ಮಾಡಿದೆ. ಆಸಿಂ ದಾಸ್ ಎಂಬಾತನನ್ನು ಕೂಡ ಇ.ಡಿ ಬಂಧಿಸಿದೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ 508 ಕೋಟಿ ರೂ. ಸಂದಾಯವಾಗಿದೆ ಎಂದು ಇ.ಡಿ ಬಹಿರಂಗಪಡಿಸಿದೆ. ಹಾಗಾಗಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಮಹಾದೇವ ಹೆಸರು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು.
ಏನಿದು ಪ್ರಕರಣ?
ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳಿಂದ ಇ.ಡಿ ತನಿಖೆ ನಡೆಸುತ್ತಿದೆ. ಅದರಲ್ಲೂ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರಲ್ಲಿ ಒಬ್ಬರಾದ ಸೌರಭ್ ಚಂದ್ರಕರ್ ಅವರು 2023ರ ಫೆಬ್ರವರಿಯಲ್ಲಿ ಯುಎಇನಲ್ಲಿ 200 ಕೋಟಿ ರೂ. ವ್ಯಯಿಸಿ ವಿವಾಹ ಮಾಡಿಕೊಂಡ ಬಳಿಕ ಪ್ರಕರಣ ಗಂಭೀರವಾಗಿದೆ. ಚಂದ್ರಕರ್ ಅವರು ಮದುವೆಗೆ ವೆಚ್ಚ ಮಾಡಿದ ಅಷ್ಟೂ 200 ಕೋಟಿ ರೂಪಾಯಿಯನ್ನು ನಗದಿನಲ್ಲಿ ಪಾವತಿಸಿದ್ದು ಬಯಲಾದ ಬಳಿಕ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: Bhupesh Baghel: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ಕ್ಯಾಂಡಿ ಕ್ರಶ್ ಆಡಿದ ಭೂಪೇಶ್ ಬಘೇಲ್!
ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಹವಾಲ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ನ ಖ್ಯಾತ ನಟ ರಣಬೀರ್ ಕಪೂರ್, ನಟಿ ಶ್ರದ್ಧಾ ಕಪೂರ್, ಹಾಸ್ಯ ಕಲಾವಿದ ಕಪಿಲ್ ಶರ್ಮಾ, ಹುಮಾ ಖುರೇಷಿ, ಹೀನಾ ಖಾನ್ ಅವರಿಗೂ ಇ.ಡಿ ಸಮನ್ಸ್ ನೀಡಿತ್ತು.