ನವ ದೆಹಲಿ: ಪಂಜಾಬ್‌ನ ಮಾಜಿ ಡಿಜಿಪಿ ಮತ್ತು 1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಸಚಿವ ಸಂಪುಟದ ನೇಮಕಾತಿ ಸಮಿತಿಯು ದಿನಕರ್ ಗುಪ್ತಾ ಅವರನ್ನು 31.03.2024ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಡೈರೆಕ್ಟರ್ ಜನರಲ್ ಆಗಿ ನೇಮಿಸಿದೆ. ಈ ಕುರಿತು ಗೃಹ ವ್ಯವಹಾರಗಳ ಸಚಿವಾಲಯ ಪ್ರಸ್ತಾವನೆ ನೀಡಿತ್ತು.
1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಇವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯ ಪೊಲೀಸ್ ಮುಖ್ಯಸ್ಥರ ಸ್ಥಾನದಿಂದ ತೆಗೆದುಹಾಕಿತ್ತು. ನಂತರ ಇವರು ಪಂಜಾಬ್ ಪೋಲಿಸ್ ಹೌಸಿಂಗ್ ಕಾರ್ಪೊರೇಷನ್ (ಪಿಪಿಹೆಚ್‌ಸಿ) ಅಧ್ಯಕ್ಷರಾಗಿ ನೇಮಕಗೊಂಡಿದ್ದರು.