Site icon Vistara News

Donald Trump Assassination Bid: “ಮೋದಿ ವಿರುದ್ಧದ ಹಿಂಸಾಚಾರಕ್ಕೆ ಬೆಂಬಲ”- ಟ್ರಂಪ್‌ ಮೇಲೆ ದಾಳಿ ಬೆನ್ನಲ್ಲೇ ರಾಹುಲ್‌ ವಿರುದ್ಧ ಬಿಜೆಪಿ ಕಿಡಿ

Donald Trump Assassination Bid

ಹೊಸದಿಲ್ಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲೇ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump Assassination Bid) ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೆ ಯತ್ನಿಸಿದ ಪ್ರಕರಣವು ಜಗತ್ತಿನಾದ್ಯಂತ ಸುದ್ದಿಯಾಗಿದೆ. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ಹಳೆಯ ಹೇಳಿಕೆಯನ್ನು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದೆ.

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಟ್ರಂಪ್‌ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಹಿಂಸಾಚಾರಕ್ಕೆ ಪ್ರೋತ್ಸಾಹಿಸಿ ಈ ಹೊಂದೆ ರಾಹುಲ್‌ ಗಾಂದಿ ನೀಡಿದ್ದ ಹೇಳಿಕೆಯನ್ನೂ ಅವರು ಪ್ರಸ್ತಾಪಿಸಿದ್ದಾರೆ. “ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹಿಂಸಾಚಾರವನ್ನು ಸಮರ್ಥಿಸಿಕೊಳ್ಳುವ ಮತ್ತು ಪೋತ್ಸಾಹಿಸುವ ರಾಹುಲ್‌ ಗಾಂಧಿ ಮೂರನೇ ಬಾರಿ ಸೋಲುಂಡಿದ್ದಾರೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರನ್ನು ಫ್ಲೈ ಓವರ್‌ನ ಕೆಳಗೆ ಕೆಲಗಂಟೆಗಳ ಕಾಲ ತಡೆದ ಘಟನೆಯನ್ನು ಹೇಗೆ ಮರೆಯಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ರಾಹುಲ್‌ ಗಾಂಧಿ ತಮ್ಮ ವಿರೋಧಿಗಳ ವಿರುದ್ಧ ಒಂದೇ ರೀತಿಯಾದ ಭಾಷೆಯನ್ನು ಬಳಸುತ್ತಿದೆ. ಅಮೆರಿಕದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಅಭಿಯಾನ ಶುರು ಮಾಡಿದರೆ, ಭಾರತದಲ್ಲಿ ಪ್ರತಿಪಕ್ಷಗಳು ಸಂವಿಧಾನವನ್ನು ಕಾಪಾಡಿ ಎಂಬ ಅಭಿಯಾನ ನಡೆಸಿತ್ತು. ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಬಳಸುವಂತಹ ಪದ ಉದಾಹರಣೆಗೆ ಸರ್ವಾಧಿಕಾರಿ.. ಇಂತಹ ಪದಗಳನ್ನೇ ಜೋ ಬೈಡೆನ್‌ ಮತ್ತು ಅವರ ಬೆಂಬಲಿಗರು ಟ್ರಂಪ್‌ ವಿರುದ್ಧ ಬಳಸುತ್ತಿದ್ದಾರೆ ಎಂದು ಮಾಳವಿಯಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: Donald Trump: ಡೊನಾಲ್ಡ್‌ ಟ್ರಂಪ್‌ ಕಿವಿಗೆ ತಾಗಿದ್ದು ಬುಲೆಟ್‌ ಅಲ್ಲ? ಹಾಗಾದ್ರೆ ಏನದು? ಹುಸಿ ದಾಳಿಯ ಅನುಮಾನ ಏಕೆ?

Exit mobile version