ನವದೆಹಲಿ: ಎನ್‌ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು (Draupadi Murmu) ಇಂದು (ಜೂ.22) ಮುಂಜಾನೆ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರೈರಂಗಪುರದ ಶಿವನ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸುವುದಕ್ಕೂ ಮೊದಲು ಅವರು ದೇವಸ್ಥಾನದ ಆವರಣದಲ್ಲಿ ಪೊರಕೆಯಿಂದ ಕಸಗುಡಿಸಿದ್ದಾರೆ. ಈ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಇಷ್ಟಾದ ಬಳಿಕ ಜಗನ್ನಾಥ ಮತ್ತು ಹನುಮ ದೇಗುಲಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಅವರು ಬುಡಕಟ್ಟು ಜನಾಂಗದ ದೈವಾರಾಧನೆ ಸ್ಥಳ ಜಾಹಿರಾಕ್ಕೂ ಭೇಟಿ ನೀಡಿದರು. ಅಲ್ಲಿಂದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯಕ್ಕೆ ತೆರಳಿದರು.
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲಕ್ಕೆ ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತೆರೆ ಎಳೆದಿದ್ದರು. ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಹೆಸರನ್ನು ಘೋಷಣೆ ಮಾಡಿದ್ದಾರೆ. ಅವರಿಗೆ ಇಂದಿನಿಂದ ಕೇಂದ್ರ ಸರ್ಕಾರ ಝಡ್ ಪ್ಲಸ್ ಸೆಕ್ಯೂರಿಟಿಯನ್ನೂ ನೀಡಿದೆ. ದ್ರೌಪದಿ ಮುರ್ಮು ಗೆಲುವು ನಿಶ್ಚಿತ ಎಂದು ಮೇಲ್ನೋಟಕ್ಕೆ ಅನ್ನಿಸುತ್ತಿದ್ದರೂ ಚುನಾವಣೆ ಮುಗಿದು, ಫಲಿತಾಂಶ ಬರುವವರೆಗೂ ಅಧಿಕೃತವಲ್ಲ.
ಇದನ್ನೂ ಓದಿ: ಎನ್‌ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ Z+ ಕೆಟಗರಿ ಭದ್ರತೆ