ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪದೆಪದೇ ಅವಘಡಗಳು ಮರುಕಳಿಸುತ್ತಿವೆ. ತುಂಬಿ ಹರಿಯುವ ಹಳ್ಳಕ್ಕೆ ಹಾರಿದ ವ್ಯಕ್ತಿ ಶವವಾಗಿದ್ದಾರೆ. ಮಹಾರಾಷ್ಟ್ರದ ತಮ್ಹಿನಿ ಘಾಟ್‌ನಲ್ಲಿ ಈ ದುರ್ಘಟನೆ (Drowned In water ) ನಡೆದಿದೆ.
ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಮಾಜಿ ಸೈನಿಕರೊಬ್ಬರು ಕೊಚ್ಚಿ ಹೋಗಿದ್ದಾರೆ. ಈ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನೋಡನೋಡುತ್ತಿದ್ದಂತೆ ವ್ಯಕ್ತಿ ಜಲಸಮಾಧಿಯಾಗಿದ್ದಾರೆ. ಸುಮಾರು 20 ಜನರ ತಂಡ ಟ್ರಕ್ಕಿಂಗ್ ಹೋಗಿದ್ದರು. ಈ ವೇಳೆ ತುಂಬಿ ಹರಿವ ಹಳ್ಳಕ್ಕೆ ಜಿಗಿದ ಮಾಜಿ ಸೈನಿಕ ಸಾಹಸ ತೋರಿಸಲು ಹೋಗಿ ನೀರಲ್ಲಿ ಕೊಚ್ಚಿ ಹೋಗಿದ್ದಾನೆ.
ಮಹಾರಾಷ್ಟ್ರದ ಲೊನಾವನಾ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಈಜಿ ಬರುವ ವಿಶ್ವಾಸ ತೋರಿದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ
ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ
ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ನಿಪ್ಪಾಣಿ ಯುವಕರು ಕಣ್ಮರೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಶವ ಪತ್ತೆಯಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯಕ್ಕೆ ನಿನ್ನೆ ನಿಪ್ಪಾಣಿಯಿಂದ ಪ್ರವಾಸಕ್ಕೆಂದು 13 ಜನರ ಯುವಕರ ತಂಡ ತೆರಳಿದ್ದರು. ಈ ವೇಳೆ ಕಾಳಮ್ಮವಾಡಿ ಜಲಾಶಯದಲ್ಲಿ ಇಬ್ಬರು ನೀರಿನಲ್ಲಿ ಕಣ್ಮರೆಯಾಗಿದ್ದರು. ನಿಪ್ಪಾಣಿಯ ಗಣೇಶ ಕದಮ್ ಪ್ರತೀಕ್ ಪಾಟೀಲ್ ಇಬ್ಬರು ಕಣ್ಮರೆಯಾಗಿದ್ದರು. ಪ್ರತಿಕ ಪಾಟೀಲ್ ಶವವಾಗಿ ಪತ್ತೆಯಾದರೆ, ಗಣೇಶ್ ಕದಮ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಕೊಲ್ಹಾಪುರ ಪೊಲೀಸ್ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
ನೀರಲ್ಲಿ ಕೊಚ್ಚಿ ಹೋದವರ ಶವ ಪತ್ತೆ
ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ಮಹಿಳೆ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಸಿತ್ತ. ಅದರಲ್ಲಿ ಒಬ್ಬನ ಮೃತದೇಹವು ಮಂಗಳವಾರ ಸಿಕ್ಕಿದ್ದು, ಮತ್ತೊಬ್ಬ ಶವಕ್ಕೆ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ