Site icon Vistara News

Rajkumar Hirani: ʼಡಂಕಿ’ ಡೈರೆಕ್ಟರ್‌ ಹುಟ್ಟುಹಬ್ಬ; ರಾಜ್ ಕುಮಾರ್ ಹಿರಾನಿಗೆ ಶುಭಾಶಯಗಳ ಮಹಾಪೂರ

Rajkumar Hirani and shahrukh khan

ಮುಂಬೈ: ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್, ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ‌ (Rajkumar Hirani) ಅವರಿಗಿಂದು ಜನ್ಮದಿನದ ಸಂಭ್ರಮ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಅವರು ʼಡಂಕಿʼ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್‌ಗೆ ಡಂಕಿ ಎಂಬ ಸಿನಿಮಾ ಅನೌನ್ಸ್ ಮಾಡಿರುವುದು ಗೊತ್ತೇ ಇದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ | Pop Singer Shakira: ಅಂತೂ ಇಂತೂ ಜೈಲು ತಪ್ಪಿಸಿಕೊಂಡ ಪಾಪ್ ಸಿಂಗರ್ ಶಕೀರಾ!

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೇ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.

ಇದನ್ನೂ ಓದಿ | Nandi Film Award 2023: ನಂದಿ ಪ್ರಶಸ್ತಿ ಅರ್ಹರಿಗೆ ಸಿಗಲಿ: ಕಿಚ್ಚ ಸುದೀಪ್

ನಾಯಕ ನಟನಾಗಿ ಶಾರುಖ್ ಖಾನ್ ನಟಿಸಿದ್ದು, ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಅತೀ ದೊಡ್ಡ ತಾರಾಬಳಗದ ʼಡಂಕಿʼ ಸಿನಿಮಾ ವಿಶ್ವದಾತ್ಯಂತ ಕಣಕ್ಕಿಳಿಯಲು ಸಜ್ಜಾಗಿದ್ದು, ಪ್ರಭಾಸ್‌ ಅವರ ಸಲಾರ್‌ ಎದುರು ಸ್ಪರ್ಧಿಸಲು ಸಿದ್ದವಾಗಿದೆ. ಇದೇ ಡಿಸೆಂಬರ್ 22ರಂದು ಮೋಸ್ಟ್ ಅವೈಟೆಡ್ ಡಂಕಿ ತೆರೆಗಪ್ಪಳಿಸಲಿದೆ.

ಬಾಲಿವುಡ್‌ ಖ್ಯಾತ ನಿರ್ದೇಶಕ ರಾಜಕುಮಾರ್ ಹಿರಾನಿ ಮತ್ತು ಶಾರುಖ್‌ ಖಾನ್‌ ಕಾಂಬಿನೇಷನ್‌ನ ಮೊದಲ ಚಿತ್ರ ಡಂಕಿ ಆಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಕಾಮಿಡಿ, ಎಮೋಷನ್ಸ್‌ ಹಾಗೂ ಒಂದೊಳ್ಳೆಯ ಸಂದೇಶದ ಮೂಲಕ ಈ ಸಿನಿಮಾವು ಪ್ರೇಕ್ಷಕರನ್ನು ಸೆಳೆಯಲಿದೆ ಎಂದು ಈಗಾಗಲೇ ಚಿತ್ರತಂಡ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version