ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ಭಾರಿ ಭೂಕಂಪ (Earthquake) ಸಂಭವಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲಾಗಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಲೇ ಜನ ಮನೆಯಿಂದ ಹೊರಗೆ ಬಂದಿದ್ದಾರೆ. ಕೆಲ ಗಂಟೆಗಳ ಬಳಿಕವೇ ಅವರು ಮನೆಗೆ ಹೋಗಿದ್ದಾರೆ. ಆದಾಗ್ಯೂ, ಪ್ರಾಣಾಪಾಯ ಸೇರಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಬಾರಾಮುಲ್ಲಾ ಪ್ರದೇಶದಲ್ಲಿ ಶುಕ್ರವಾರ (ಜುಲೈ 12) ಮಧ್ಯಾಹ್ನ 12.26ರ ಸುಮಾರಿಗೆ ಭೂಮಿ ಕಂಪಿಸಿದೆ. ಜನರ ಮನೆಗಳಲ್ಲಿರುವ ಫ್ಯಾನ್ ಹಾಗೂ ಮೇಜುಗಳು ಅಲುಗಾಡಿದ ಕಾರಣ ಜನ ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ. ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲ ತಿಂಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ ಸೇರಿ ಹಲವೆಡೆ ಭೂಕಂಪ ಸಂಭವಿಸಿತ್ತು.
4.2 Magnitude Earthquake Strikes Baramulla District
— Junaid Bhat Photographer (@Junaidbhatphoto) July 12, 2024
4.2 magnitude earthquake has struck the Baramulla district today, marking the first time an earthquake has been recorded exclusively in this area.there have been no reports of casualties or major damage so far. pic.twitter.com/XBOh6rZlwy
ಚೀನಾದಲ್ಲಿ ಕೆಲ ತಿಂಗಳ ಹಿಂದಷ್ಟೇ ಸಂಭವಿಸಿದ್ದ ಭೂಕಂಪದಲ್ಲಿ 100ಕ್ಕೂ ಅಧಿಕ ಜನ ಮೃತಪಟ್ಟು, ಸಾವಿರಾರು ನಾಗರಿಕರು ಗಾಯಗೊಂಡಿದ್ದರು. ಜಪಾನ್‌ನಲ್ಲೂ ಹೊಸ ವರ್ಷದ ದಿನವೇ ಭೂಕಂಪ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಚೀನಾದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿತ್ತು. ಅಫಘಾನಿಸ್ತಾನ, ಪಾಕಿಸ್ತಾನ, ಮ್ಯಾನ್ಮಾರ್ ಸೇರಿ ಹಲವೆಡೆ ಭೂಕಂಪ ಸಂಭವಿಸಿದರೆ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪದ ಅನುಭವವಾಗುವುದು ಸಾಮಾನ್ಯವಾಗಿದೆ.
ನೇಪಾಳದಲ್ಲೂ ಕಳೆದ ವರ್ಷ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಾವಿರಾರು ಕಟ್ಟಡಗಳು ಧರೆಗುರುಳಿದ್ದ ಕಾರಣ ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿತ್ತು.
ಇದನ್ನೂ ಓದಿ: Earthquake today : ಹಿಮಾಚಲ ಪ್ರದೇಶದಲ್ಲಿ 5.3 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ