Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು - Vistara News

ದೇಶ

Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು

Economic Survey 2023-24: ದೇಶದ ಜನ ಕುತೂಹಲದಿಂದ ಕಾಯುತ್ತಿದ್ದ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಭಾರತದ ಆರ್ಥಿಕತೆ ಹೇಗಿದೆ? ಬಡ-ಮಧ್ಯಮ ವರ್ಗದವರಿಗೆ ಆಶಾದಾಯಕ ಬೆಳವಣಿಗೆಗಳು ಏನಿವೆ ಎಂಬುದರ ಕುರಿತು ಕೂಡ ಕೇಂದ್ರ ಸಚಿವೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಆದ್ಯತೆಗಳು ಏನು ಎಂಬುದರ ಕುರಿತ ವಿವರ ಇಲ್ಲಿದೆ.

VISTARANEWS.COM


on

Economic Survey 2023-24
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಜನ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ ಮಂಡನೆಗೆ (Union Budget 2024) ಮುನ್ನಾ ದಿನವಾದ ಸೋಮವಾರ (ಜುಲೈ 22) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷಾ (Economic Survey 2023-24) ವರದಿಯನ್ನು ಮಂಡಿಸಿದ್ದಾರೆ. ದೇಶದ ಆರ್ಥಿಕತೆ ಸುಭದ್ರವಾಗಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು, ಮುಂದಿನ ದಿನಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿ, ಕೃಷಿಗೆ ಆದ್ಯತೆ ಹಾಗೂ ಕೌಶಲ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಉದ್ಯೋಗ ಸೃಷ್ಟಿಗೆ ಆದ್ಯತೆ

2024-25ನೇ ಸಾಲಿನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಆರ್ಥಿಕ ಸಮೀಕ್ಷೆ ಪ್ರಕಾರ, ಉದ್ಯೋಗ ಸೃಷ್ಟಿಯ ಪ್ರಮಾಣ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 56.5 ಕೋಟಿ ಉದ್ಯೋಗಿಗಳಿದ್ದು, ಕೃಷಿ ಕ್ಷೇತ್ರದಲ್ಲಿಯೇ ಶೇ.45ರಷ್ಟು ಜನ ತೊಡಗಿದ್ದಾರೆ. ಇನ್ನು ಶೇ.11.4ರಷ್ಟು ಜನ ಉತ್ಪಾದನೆ, ಶೇ.28.9 ಮಂದಿ ಸೇವೆಗಳು ಹಾಗೂ ಶೇ.13ರಷ್ಟು ಜನ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಕೌಶಲ ವೃದ್ಧಿಗೆ ಪ್ರಾಮುಖ್ಯತೆ

ಆರ್ಥಿಕ ಸಮೀಕ್ಷೆಯ ವರದಿಯನ್ನು ಅವಲೋಕಿಸಿ ದೇಶಾದ್ಯಂತ ಕೌಶಲ ವೃದ್ಧಿಗೆ ಇನ್ನಷ್ಟು ಪ್ರಾಮುಖ್ಯತೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣವು ಶೇ.65ರಷ್ಟಿದೆ. ಹಾಗಾಗಿ, ಆಧುನಿಕ ಆರ್ಥಿಕತೆಯ ಸೃಜನೆಗೆ ಯುವಕರಿಗೆ ಕೌಶಲ ಅಭಿವೃದ್ಧಿಯು ಪ್ರಮುಖವಾಗಿದೆ. ಕಳೆದ ಒಂದು ದಶಕದಲ್ಲಿ ಶೇ.34ರಿಂದ ಶೇ.51.3ಕ್ಕೆ ಕೌಶಲ ವೃದ್ಧಿ ಪ್ರಮಾಣ ಏರಿಕೆಯಾಗಿದೆ. ಇದಕ್ಕೆ ಇನ್ನಷ್ಟು ಒತ್ತು ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಕೃಷಿ ಕ್ಷೇತ್ರದ ಏಳಿಗೆಗೆ ಒತ್ತು

ದೇಶದ ಆರ್ಥಿಕತೆಗೆ ಬಹುಮುಖ್ಯ ಪಾತ್ರ ವಹಿಸುವ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ವಿವಿಧ ಬೆಳೆಗಳನ್ನು ಬೆಳೆಯಲು ಉತ್ತೇಜನ, ಆಧುನಿಕ ತಂತ್ರಜ್ಞಾನದ ಅಳವಡಿಕೆ, ಆಧುನಿಕ ಕೃಷಿಗಾಗಿ ಕೌಶಲ ವೃದ್ಧಿ, ಸಾವಯವ ಗೊಬ್ಬರದ ಬಳಕೆಗೆ ಪ್ರೋತ್ಸಾಹ ಸೇರಿ ಹಲವು ದಿಸೆಯಲ್ಲಿ ಸರ್ಕಾರವು ಕೃಷಿ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೃಷಿ, ಉದ್ಯೋಗ ಸೃಷ್ಟಿಯ ಜತೆಗೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಗಳಿಗೆ (MSME) ಪ್ರೋತ್ಸಾಹ, ಆರ್ಥಿಕ ನೆರವು, ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ ನಿಯಂತ್ರಣ, ಸುಸ್ಥಿರ ಅಭಿವೃದ್ಧಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಗಮನ ಹರಿಸುವುದು ಸೇರಿ ಕೇಂದ್ರ ಸರ್ಕಾರವು ಹಲವು ನಿರ್ಧಾರಗಳನ್ನು ಘೋಷಣೆ ಮಾಡಿದೆ. ಇವುಗಳನ್ನು ಬಜೆಟ್‌ನಲ್ಲಿ ಹೇಗೆ ಸಾಕಾರಗೊಳಿಸುತ್ತದೆ ಎಂಬುದು ಈಗ ಕುತೂಹಲ ಕೆರಳಿಸಿದೆ.

ಆರ್ಥಿಕ ಸಮೀಕ್ಷೆಯ ಹೈಲೈಟ್ಸ್‌….

  • ಪ್ರಸಕ್ತ ಸಾಲಿನಲ್ಲಿ ಉತ್ತಮ ಮುಂಗಾರು, ನೀತಿ-ನಿರೂಪಣೆಗಳ ಬದಲಾವಣೆ ಇಲ್ಲದ ಕಾರಣ 2024-25ನೇ ಹಣಕಾಸು ವರ್ಷದಲ್ಲಿ ದೇಶದ ಹಣದುಬ್ಬರ ಪ್ರಮಾಣವು ಶೇ.4.5ರಿಂದ ಶೇ.4.1ಕ್ಕೆ ಇಳಿಕೆಯಾಗಲಿದೆ ಎಂಬುದಾಗಿ ಆರ್‌ಬಿಐ ಉಲ್ಲೇಖಿಸಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವರದಿ ಕೂಡ ಹಣದುಬ್ಬರವು ಶೇ.4.2ಕ್ಕೆ ಇಳಿಯಲಿದೆ ಎಂಬುದಾಗಿ ತಿಳಿಸಿದೆ. ಇದರಿಂದಾಗಿ ದೇಶದ ಜನರ ಮೇಲಿನ ಹೊರೆ ಕಡಿಮೆಯಾಗಲಿದೆ.
  • ಕೊರೊನಾ ಬಿಕ್ಕಟ್ಟಿನ ನಂತರ ಭಾರತದ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಇದರಿಂದಾಗಿ ದೇಶದ ವಿತ್ತೀಯ ವ್ಯವಸ್ಥೆಯಲ್ಲಿ ಗಣನೀಯವಾಗಿ ಚೇತರಿಕೆ ಕಂಡಿದೆ. ಹಾಗಾಗಿ, 2024-25ನೇ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿಯು ಶೇ.6.5ರಿಂದ ಶೇ.7ಕ್ಕೆ ಏರಿಕೆಯಾಗುವ ಅಂದಾಜಿದೆ.
  • ಸೇವಾ ವಲಯದಲ್ಲಿ ದೇಶದಲ್ಲೇ ಅತಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ. ನಿರ್ಮಾಣ, ಉತ್ಪಾದನೆ ಸೇರಿ ಹಲವು ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
  • 2023ರ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಹೊಸ ಬಂಡವಾಳ ಹೂಡಿಕೆ ಪ್ರಮಾಣವು 47.6 ಶತಕೋಟಿ ಡಾಲರ್‌ ಇತ್ತು. ಆದರೆ, ಇದು 2024ನೇ ಹಣಕಾಸು ವರ್ಷದಲ್ಲಿ 45.8 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ. ಜಾಗತಿಕ ಬೆಳವಣಿಗೆಗಳು ಇದಕ್ಕೆ ಕಾರಣವಾಗಿವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Economic Survey 2023-24: ದೇಶದ ಆರ್ಥಿಕತೆ, ಜಿಡಿಪಿ, ಹೂಡಿಕೆ; ಆರ್ಥಿಕ ಸಮೀಕ್ಷೆಯ ಪ್ರಮುಖಾಂಶಗಳು ಇಲ್ಲಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

Kanwar Yatra: ರಾಜ್ಯದಲ್ಲಿ ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿದೆ. ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಇಂದು ಪ್ರಾರಂಭವಾಗಿರುವ ಈ ಯಾತ್ರೆ ಆಗಸ್ಟ್ 2ರವರೆಗೆ ನಡೆಯಲಿದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. 

VISTARANEWS.COM


on

Kanwar Yatra
Koo

ಭೋಪಾಲ್‌: ರಾಜ್ಯದಲ್ಲಿ ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಮಧ್ಯಪ್ರದೇಶ (Madhya Pradesh)ದ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿದೆ.

ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶದ ಆದೇಶ ವಿವಾದದ ಹುಟ್ಟು ಹಾಕಿದ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ಈ ಸ್ಪಷ್ನೆ ನೀಡಿದ್ದು, ಯಾವುದೇ ಗೊಂದಲವನ್ನು ಹರಡದಂತೆ ನಗರ ಸಂಸ್ಥೆಗಳಿಗೆ ಸೂಚಿಸಿದೆ. ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಬೋರ್ಡ್‌ಗಳಲ್ಲಿ ಪ್ರದರ್ಶಿಸಲು ನಿರ್ದೇಶಿಸಲಾಗಿದೆ ಎಂದು ಉಜ್ಜಯಿನಿ ಮೇಯರ್ ಹೇಳಿದ ಕೆಲವು ದಿನಗಳ ನಂತರ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ (UDHD) ಭಾನುವಾರ ರಾತ್ರಿ ಈ ಹೇಳಿಕೆ ಬಿಡುಗಡೆ ಮಾಡಿದೆ.

ನಗರ ಪ್ರದೇಶಗಳಲ್ಲಿನ ಕನ್ವರ್ ಯಾತ್ರಾ ಮಾರ್ಗಗಳಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರಿನ ಬೋರ್ಡ್‌ ಅಳವಡಿಸುವಂತೆ ರಾಜ್ಯ ಸರ್ಕಾರ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಯುಡಿಎಚ್‌ಡಿ ಸ್ಟಷ್ಟಪಡಿಸಿದೆ. ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಅವರು ಕಳೆದ ವಾರ, ಎರಡು ವರ್ಷಗಳ ಹಿಂದಿನ ಮೇಯರ್-ಇನ್-ಕೌನ್ಸಿಲ್‌ನ ನಿರ್ಧಾರವನ್ನು ಉಲ್ಲೇಖಿಸಿ, ಅಂಗಡಿಯ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಪ್ರಸ್ತಾಪವನ್ನು ಅನುಮೋದಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕಯನ್ನು ಖಂಡಿಸಿದ ಯುಡಿಎಚ್‌ಡಿ, ಕನ್ವರ್ ಯಾತ್ರೆಗೆ ಸಂಬಂಧಿಸಿದ ಹರಡಿಸುವ ಈ ಗೊಂದಲಗಳನ್ನು ಬಗೆಹರಿಸುವಂತೆ ನಗರ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ಕೂಡ ನಗರದ ಅಂಗಡಿ ಫಲಕಗಳಲ್ಲಿ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಿಂದ ತಡೆ

ಈ ಮಧ್ಯೆ ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನಾಮ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆ ನಡೆಯವವರೆಗೆ ತಡೆಯಾಜ್ಞೆ ಹೊರಡಿಸುವುದಾಗಿ ಹೇಳಿದೆ. ಪೊಲೀಸರು ನಾಮಫಲಕ ಅಳವಡಿಸಿ ಎಂದು ವ್ಯಾಪಾರಿಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಇಂದು ಆರಂಭ

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಇಂದು ಪ್ರಾರಂಭವಾಗಿರುವ ಈ ಯಾತ್ರೆ ಆಗಸ್ಟ್ 2ರವರೆಗೆ ನಡೆಯಲಿದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. 

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ದೇಶ

Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ

Nipah Virus: ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

VISTARANEWS.COM


on

Nipah Virus
Koo

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿರುವ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರಲ್ಲಿ ನಿಫಾ ವೈರಸ್‌ ಕಂಡುಬಂದಿದೆ. ಇನ್ನು ರಾಜ್ಯದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ನಿನ್ನೆ ಮೃತಪಟ್ಟ ಬಾಲಕ ಜೊತೆ ನೇರ ಸಂಪರ್ಕ ಹೊಂದಿದ್ದ 13ಮಂದಿಯ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಾಗಿದೆ.

ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

ಇನ್ನು ಸೋಂಕು ದೃಢಪಟ್ಟಿರುವ ಒಟ್ಟು ಆರು ಮಂದಿ ಪಾಲಕ್ಕಾಡ್‌ ಮತ್ತು ತಿರುವನಂತಪುರಂ ಜಿಲ್ಲೆಯವರಾಗಿದ್ದಾರೆ. ಇಬ್ಬರು ಪಾಲಕ್ಕಾಡು ಸರ್ಕಾರಿ ಆಸ್ಪತ್ರೆಯಲ ಸಿಬ್ಬಂದಿಗಳಾಗಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಇನ್ನು ಸರ್ಕಾರ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ

Continue Reading

ವೈರಲ್ ನ್ಯೂಸ್

Viral News: 10 ವರ್ಷ ಪ್ರಯತ್ನಿಸಿ ಸಿಎ ಪಾಸಾದ ಚಹಾ ಮಾರುವವನ ಮಗಳು! ಭಾವುಕ ವಿಡಿಯೊ ನೋಡಿ

ದೆಹಲಿಯ ಬೀದಿಯಲ್ಲಿ ಚಹಾ ಮಾರಾಟ ಮಾಡುವವನ ಮಗಳು ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಇದನ್ನು ಸಾಮಾಜಿಕ ಜಾಲತಾಣದಲ್ಲಿ ಆಕೆ ಹಂಚಿಕೊಂಡಿದ್ದಾಳೆ. ಕಷ್ಟದ ಬದುಕಿನ ಮಧ್ಯೆಯೂ ತಾನು ಸಿಎ ಪರೀಕ್ಷೆ ಬರೆಯಲು ಏನು ಕಾರಣ, ಹೇಗೆ ಪರೀಕ್ಷೆಯನ್ನು ಎದುರಿಸಬೇಕಾಯಿತು ಎಂಬುದನ್ನು ಹೇಳಿಕೊಂಡಿದ್ದಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ನವದೆಹಲಿ: ಹತ್ತು ವರ್ಷಗಳ ಹಿಂದೆ ಮಾಡಿದ ದೃಢ ನಿರ್ಧಾರದ ಬಳಿಕ ಕಠಿಣ ಪರಿಶ್ರಮಪಟ್ಟು ಓದಿದ ಮಗಳು ಸಿಎ ಪರೀಕ್ಷೆಯಲ್ಲಿ (CA exam) ತೇರ್ಗಡೆಯಾಗಿರುವುದನ್ನು ಕೇಳಿ ದೆಹಲಿಯ ಬೀದಿಯಲ್ಲಿ ಚಹಾ ಮಾರಾಟ ಮಾಡುವ ತಂದೆಯ (Chai seller’s daughter) ಸಂತೋಷ ಕಣ್ಣೀರಾಗಿ ಹರಿದುದನ್ನು ಮಗಳು ಲಿಂಕ್ಡ್ ಇನ್ ನಲ್ಲಿ (LinkedIn) ಹಚ್ಚಿಕೊಂಡಿದ್ದಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ (Viral News) ವೈರಲ್ ಆಗಿದೆ.

ದೆಹಲಿಯ ಅಮಿತಾ ಪ್ರಜಾಪತಿ ಸಿಎ ಪರೀಕ್ಷೆ ಪಾಸಾಗಿರುವ ವಿದ್ಯಾರ್ಥಿನಿ. ತನ್ನ ಶೈಕ್ಷಣಿಕ ಪಯಣದುದ್ದಕ್ಕೂ ತಂದೆ ಹೇಗೆ ತನಗೆ ಬೆಂಬಲವಾಗಿ ನಿಂತರು ಎಂಬುದನ್ನು ಆಕೆ ಹೇಳಿಕೊಂಡಿದ್ದಾಳೆ. ಅಮಿತಾ ಪ್ರಜಾಪತಿ ಅವರು ಪರೀಕ್ಷೆಯನ್ನು ಹೇಗೆ ಎದುರಿಸಿದರು ಎಂಬುದನ್ನು ವಿವರಿಸಿದ್ದಾರೆ. ತಂದೆಯನ್ನು ತಬ್ಬಿಕೊಂಡು ಕಣ್ಣೀರು ಈಡುತ್ತಿರುವ ಭಾವನಾತ್ಮಕ ವಿಡಿಯೋವನ್ನು ಆಕೆ ಪೋಸ್ಟ್ ಮಾಡಿದ್ದಾಳೆ.

ಇದು 10 ವರ್ಷಗಳನ್ನು ತೆಗೆದುಕೊಂಡಿತು. ಪ್ರತಿದಿನ ನನ್ನ ಕಣ್ಣುಗಳಲ್ಲಿ ಸಿಎ ಆಗುವ ಕನಸು ಇತ್ತು. ಇದು ಕೇವಲ ಕನಸೇ ಅಥವಾ ಇದು ಎಂದಾದರೂ ನನಸಾಗಬಹುದೇ ಎಂದು ನಾನು ನನ್ನನ್ನು ಕೇಳಿಕೊಳ್ಳುತ್ತೇನೆ. 2024ರ ಜುಲೈ 11ರಂದು ಅದು ನಿಜವಾಯಿತು. ಹೌದು ಕನಸುಗಳು ನನಸಾಗುತ್ತವೆ. ಜನರು ಹೇಳುತ್ತಿದ್ದರು, ನೀವು ಅವಳನ್ನು ಏಕೆ ಇಷ್ಟು ದೊಡ್ಡ ಕೋರ್ಸ್‌ಗೆ ಸೇರಿಸುತ್ತಿದ್ದೀರಿ, ನಿಮ್ಮ ಮಗಳು ಇದನ್ನು ಮಾಡಲು ಸಾಧ್ಯವಾಗುವುದಿಲ್ಲ ಎಂದು ತಂದೆಗೆ ಹೇಳುತ್ತಿದ್ದರು ಎಂದು ಅಮಿತಾ ಪ್ರಜಾಪತಿ ಹೇಳಿದರು.

ಚಹಾ ಮಾರಾಟ ಮಾಡುವ ಮೂಲಕ ತಂದೆ ಹಣವನ್ನು ಉಳಿಸಿ ಮನೆಯನ್ನು ನಿರ್ಮಿಸುವ ಕನಸು ಕಾಣುತ್ತಿದ್ದರು. ಇದರಿಂದ ಮಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳುತ್ತಿದ್ದರು. ಬೆಳೆದ ಹೆಣ್ಣು ಮಕ್ಕಳೊಂದಿಗೆ ನೀವು ಎಷ್ಟು ದಿನ ಬೀದಿಯಲ್ಲಿ ವಾಸಿಸುತ್ತೀರಿ ಎಂದು ಜನ ಪ್ರಶ್ನಿಸುತ್ತಿದ್ದರು. ಅವರು ಹೇಗಿದ್ದರೂ ಬೇರೆಯವರ ಸಂಪತ್ತು. ಒಂದು ದಿನ ಬಿಟ್ಟು ಹೋಗುತ್ತಾರೆ ಮತ್ತು ನಿಮಗೆ ಏನೂ ಉಳಿಯುವುದಿಲ್ಲ ಎನ್ನುತ್ತಿದ್ದರು ಎನ್ನುತ್ತಾರೆ ಅಮಿತಾ.

ತಂದೆಯೊಂದಿಗೆ ನಾನು ಕೊಳೆಗೇರಿಯಲ್ಲಿ ವಾಸಿಸುತ್ತಿದ್ದೇನೆ. ಇದು ಕೆಲವೇ ಜನರಿಗೆ ತಿಳಿದಿದೆ. ಆದರೆ ಈಗ ನಾನು ಇದಕ್ಕೆ ನಾಚಿಕೆಪಡುತ್ತಿಲ್ಲ. ಕೆಲವರು ಸ್ಲಂ ನಿವಾಸಿಗಳು, ಹುಚ್ಚು ಮನಸ್ಸಿನವರು ಎಂದು ಹೇಳುತ್ತಿದ್ದರು. ನಿಜ, ಅದು ಸಂಪೂರ್ಣವಾಗಿ ಸರಿ. ನನ್ನ ಮನಸ್ಸು ಹುಚ್ಚ ಆಗಿಲ್ಲದಿದ್ದರೆ ನಾನು ಇಂದು ಇಲ್ಲಿಗೆ ಬರುತ್ತಿರಲಿಲ್ಲ. ಈಗ, ನನ್ನ ತಂದೆಗೆ ಮನೆ ನಿರ್ಮಿಸಲು ನಾನು ಸಾಕಷ್ಟು ಸಮರ್ಥಳಾಗಿದ್ದೇನೆ. ನಾನು ಅವರ ಎಲ್ಲಾ ಆಸೆಗಳನ್ನು ಪೂರೈಸಬಲ್ಲೆ. ಮೊದಲ ಬಾರಿಗೆ, ನಾನು ನನ್ನ ತಂದೆಯನ್ನು ಅಪ್ಪಿಕೊಂಡು ಅಳುತ್ತಿದ್ದೆ. ಇದು ಶಾಂತಿ. ನಾನು ಈ ಕ್ಷಣಕ್ಕಾಗಿ ಬಹಳ ಸಮಯ ಕಾಯುತ್ತಿದ್ದೆ, ತೆರೆದ ಕಣ್ಣುಗಳಿಂದ ಈ ಕನಸನ್ನು ಕಲ್ಪಿಸಿಕೊಂಡಿದ್ದೇನೆ ಮತ್ತು ಇಂದು ಅದು ವಾಸ್ತವದಲ್ಲಿ ಸೆರೆಹಿಡಿಯಲ್ಪಟ್ಟಿದೆ ಎಂದು ಭಾವುಕರಾಗುತ್ತಾರೆ ಅಮಿತಾ.


ಇದು ಎಂದಿಗೂ ತಡವಾಗಿಲ್ಲ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಮತ್ತು ನಮ್ಮ ಕನಸುಗಳು ನಿಜವಾಗುತ್ತವೆ. ಇಂದು ನಾನು ಏನಾಗಿದ್ದರೂ ನನ್ನ ತಂದೆ ಮತ್ತು ತಾಯಿಯಿಂದ. ಅವರು ನನ್ನನ್ನು ತುಂಬಾ ನಂಬಿದ್ದರು. ಒಂದು ದಿನ ನಾನು ಮದುವೆಯಾಗಿ ಅವರನ್ನು ಬಿಟ್ಟು ಹೋಗುತ್ತೇನೆ ಎಂದು ಎಂದಿಗೂ ಯೋಚಿಸಲಿಲ್ಲ. ಆದರೆ ತಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ದೃಢ ನಿರ್ಧಾರ ಮಾಡಿದ್ದರು ಎನ್ನುತ್ತಾರೆ ಅಮಿತಾ ಪ್ರಜಾಪತಿ.

ಇದನ್ನೂ ಓದಿ: Viral Video: ಭವ್ಯ ರಥೋತ್ಸವ; ಪ್ಯಾರಿಸ್‌ ಬೀದಿಯಲ್ಲಿ ಸಾವಿರಾರು ತೆಂಗಿನ ಕಾಯಿ ಒಡೆದ ಹಿಂದೂಗಳು!

ಅವರು ಮಾಡಿರುವ ಈ ಪೋಸ್ಟ್‌ಗೆ ಹಲವಾರು ಕಮೆಂಟ್‌ಗಳು ಬಂದಿವೆ. ಇದು ಸ್ಫೂರ್ತಿದಾಯಕ! ಆಕೆಯಂತಹ ಕಥೆಗಳನ್ನು ಮೇಲಿಂದ ಕೂಗಿ ಹೇಳಬೇಕು ಮತ್ತು ಅದನ್ನು ಸಂಭ್ರಮಿಸಬೇಕು. ಭರವಸೆ ಮತ್ತು ಪರಿಶ್ರಮದ ಬೆಳಕಿನಂತೆ ಹಿಡಿದಿಟ್ಟುಕೊಳ್ಳಬೇಕು ಎಂದಿದೆ ಈ ಪೋಸ್ಟ್‌. ಮತ್ತೊಬ್ಬರು ಕಮೆಂಟ್ ಮಾಡಿ, ತಂದೆಯು ತನ್ನ ಮಗಳನ್ನು ಯಶಸ್ಸಿನ ಏಣಿಯನ್ನು ಏರುವಂತೆ ಮಾಡುವ ಅದ್ಭುತ ಭಾವುಕ ಕತೆ ಎಂದು ಪ್ರತಿಕ್ರಿಯಿಸಿದ್ದಾರೆ.

Continue Reading
Advertisement
Parashuram D
ಪ್ರಮುಖ ಸುದ್ದಿ6 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Gautam Gambhir
ಪ್ರಮುಖ ಸುದ್ದಿ30 mins ago

Gautam Gambhir : ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ 2027ರ ವಿಶ್ವ ಕಪ್​ ತನ ಆಡುತ್ತಾರೆ ಎಂದ ಗಂಭೀರ್​

Kanwar Yatra
ದೇಶ38 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

Boycott PhonePe
ವೈರಲ್ ನ್ಯೂಸ್40 mins ago

Boycott PhonePe: ತಾಕತ್ತಿದ್ರೆ ಫೋನ್ ಪೇ ತರಹದ ಕಂಪನಿ ಹುಟ್ಟುಹಾಕಿ; ಕನ್ನಡಿಗರ ವಿರುದ್ಧ ಯುವಕ ಆಕ್ರೋಶ! ವಿಡಿಯೊ ಇದೆ

Hombale Films Keerthy Suresh Talks 'Raghu Thatha' and Anti-Hindi Speculations
ಸ್ಯಾಂಡಲ್ ವುಡ್41 mins ago

Hombale Films: ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಸಿನಿಮಾದಲ್ಲಿ ಇರಲಿದ್ಯಾ ಹಿಂದಿ ಹೇರಿಕೆ ವಿವಾದ? ಕೀರ್ತಿ ಸುರೇಶ್‌ ಹೇಳಿದ್ದೇನು?

karnataka rain
ಮಳೆ47 mins ago

Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

Gautam Gambhir
ಕ್ರೀಡೆ51 mins ago

Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​

Job Alert
ಉದ್ಯೋಗ2 hours ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Nipah Virus
ದೇಶ2 hours ago

Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ

SS Rajamouli Modern Masters Official Trailer Netflix India
ಬಾಲಿವುಡ್2 hours ago

SS Rajamouli: ರಾಜಮೌಳಿಯನ್ನು ಜ್ಯೂನಿಯರ್‌ ಎನ್‌ಟಿಆರ್‌ ʻಮ್ಯಾಡ್‌ ಮ್ಯಾನ್‌ʼ ಎಂದು ಕರೆದಿದ್ದೇಕೆ? ವಿಡಿಯೊದಲ್ಲಿ ಏನಿದೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ7 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌