ಬೆಂಗಳೂರು: ಅಕ್ರಮ ಹಣ ಸಂಗ್ರಹಣೆ ಹಾಗೂ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಸೆಪ್ಟೆಂಬರ್ 19ರಂದು ಹಾಜರಾಗುವಂತೆ ಹೇಳಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಬಂಧನಕ್ಕೊಳಗಾಗಿದ್ದರು ಹಾಗೂ ಅನೇಕ ಬಾರಿ ವಿಚಾರಣೆಗೂ ಹಾಜರಾಗಿದ್ದರು. ಮುಂದಿನ ವಾರದಲ್ಲಿ ಹಾಜರಾಗಿ ವಿಚಾರಣೆ ಎದುರಿಸಿ ಎಂದು ಸಮನ್ಸ್ ನೀಡಲಾಗಿದೆ. ಸಮನ್ಸ್ ದೊರೆತಿರುವುದನ್ನು ಡಿ.ಕೆ. ಶಿವಕುಮಾರ್ ಖಚಿತಪಡಿದ್ದಾರೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡಿ ಸಮನ್ಸ್ ಕುರಿತು ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ.
ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದಿದ್ದಾರೆ.
ಈ ಹಿಂದೆ ಶಿವಕುಮಾರ್ ಅವರ ಮೇಲೆ ಇಡಿ ದಾಳಿ ನಡೆದ ಸಂದರ್ಭದಲ್ಲಿ, ಗುಜರಾತ್‌ನ ಶಾಸಕರಿಗೆ ಬೆಂಗಳೂರಿನಲ್ಲಿ ಆಶ್ರಯ ನೀಡಿದ್ದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲ್ಲಬೇಕೆಂದು ಆಶ್ರಯ ನೀಡಿದ್ದಕ್ಕಾಗಿ ಬಿಜೆಪಿ ರಾಜಕೀಯ ಸೇಡನ್ನು ತೀರಿಸಿಕೊಳ್ಳುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಆರೋಪಿಸಿದ್ದರು.
ಆನಂತರ ಬಂಧನ, ನೋಟಿಸ್ ನೀಡುವ ವೇಳೆಯಲ್ಲೂ ತಮ್ಮ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ ಎಂದು ಶಿವಕುಮಾರ್ ಆರೋಪ ಮಾಡಿದ್ದುಂಟು. ಇದೀಗ ಶಿವಕುಮಾರ್ ಅವರು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕದಲ್ಲಿ 21 ದಿನ ನಡೆಯುವ ಯಾತ್ರೆಗೆ ಸಂಘನೆಯನ್ನು ಬಲಪಡಿಸುವ ಉದ್ದೇಶದಿಂದ ವುವಿಧ ಜಿಲ್ಲೆಗಳಲ್ಲಿ ಸಭೆಯನ್ನೂ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇಡಿ ಚಾರ್ಜ್‌ಶೀಟ್ ಸಲ್ಲಿಕೆಯಲ್ಲಿ ರಾಜಕಾರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ