Site icon Vistara News

Delhi Liquor scam: ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್! ಇದು ಅರೆಸ್ಟ್ ಮಾಡುವ ಸಂಚು; ಆಪ್

ED summons to Arvind Kejriwal about Delhi Liquor scam, Conspiracy to arrest says App

ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ (Delhi Liquor scam) ಸಂಬಂಧಿಸಿದಂತೆ ಡಿಸೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಅವರಿಗೆ ಜಾರಿ ನಿರ್ದೇಶನಾಲಯವು (Enforcement Directorate) ಸಮನ್ಸ್ ನೀಡಿದೆ(Summons). ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಎರಡನೇ ಬಾರಿಗೆ ದಿಲ್ಲಿ ಸಿಎಂ ಅವರನ್ನು ವಿಚಾರಣೆಗೊಳಪಡಿಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರು ಜೈಲುಗಳ ಹಿಂದೆ ಇದ್ದಾರೆ.

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನವೆಬಂರ್ 2ರಂದು ದಿಲ್ಲಿ ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ಆದರೆ, ಇತ್ತೀಚೆಗೆಷ್ಟೇ ಮುಕ್ತಾಯವಾದ ವಿಧಾನಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ನಿರ್ಧಾರಿ ಕಾರ್ಯಕ್ರಮಗಳು ಇರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.

ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯವು ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಅವರು ಆಮ್ ಆದ್ಮಿ ಪಾರ್ಟಿ(ಆಪ್) ಹೇಳಿಕೊಂಡಿದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೇ ಅಥವಾ ಜೈಲಿನೊಳಗೆ ಸರ್ಕಾರವನ್ನು ಮುಂದುವರಿಸಬೇಕೇ ಎಂಬ ಬಗ್ಗೆ ರಾಷ್ಟ್ರ ರಾಜಧಾನಿಯ ಜನರ ಅಭಿಪ್ರಾಯವನ್ನು ಕೇಳುವ ಅಭಿಯಾನವನ್ನು ಅದು ನಡೆಸುತ್ತಿದೆ.

ಕೇಜ್ರಿವಾಲ್ ಅವರ ಇಬ್ಬರು ಆಪ್ತ ಸಹಚರರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಮದ್ಯದ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಂಗಳುಗಟ್ಟಲೆ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಜಾಮೀನು ನಿರಾಕರಿಸಿದೆ.

ಎಎಪಿಯ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರಿಗೆ ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಶ್ನಿಸಲು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಈ ಸುದ್ದಿಯನ್ನೂ ಓದಿ: Delhi Liquor Scam: ದೆಹಲಿ ಅಬಕಾರಿ ನೀತಿ ಅಕ್ರಮ; ಹೈದರಾಬಾದ್ ಉದ್ಯಮಿ ಅರುಣ್​ ರಾಮಚಂದ್ರ ಪಿಳ್ಳೈ ಬಂಧನ​​

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚ ನೀಡಿದ ಆರೋಪದ ಕೆಲವು ಡೀಲರ್‌ಗಳಿಗೆ ಒಲವು ನೀಡಿದೆ ಎಂದು ಆರೋಪಿಸಲಾಗಿದೆ, ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಪದೇ ಪದೇ ನಿರಾಕರಿಸುತ್ತಲೇ ಬಂದಿದೆ.

ಈ ಸುದ್ದಿಗೆ ನಿಮ್ಮ ಅನಿಸಿಕೆ ಏನು, ಕಾಮೆಂಟ್ ಮಾಡಿ ತಿಳಿಸ

Exit mobile version