Site icon Vistara News

Assembly Election 2023: 5 ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆ; ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

Assembly Election 2023

Lok Sabha Election Date 2024: ECI to announce voting, result dates in few Minutes, Watch Live Here

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ (Assembly Election 2023) ಚುನಾವಣೆ ಆಯೋಗವು ದಿನಾಂಕ ಘೋಷಿಸಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ಹಾಗೂ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಆಯೋಗವು ಸುದ್ದಿಗೋಷ್ಠಿ ಮೂಲಕ ದಿನಾಂಕ ಘೋಷಿಸಿದೆ. ಡಿಸೆಂಬರ್ 3ರಂದು ಐದೂ ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಛತ್ತೀಸ್‌ಗಢದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆದರೆ, ಉಳಿದ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಚುನಾವಣೆ ದಿನಾಂಕ

“ಐದೂ ರಾಜ್ಯಗಳಲ್ಲಿ ಶಾಂತಿಯುತ ಮತದಾನ ಹಾಗೂ ಗರಿಷ್ಠ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಹಿರಿಯ ನಾಗರಿಕರು ಮನೆಯಿಂದಲೇ ಮತದಾನ ಮಾಡುವ ಸೌಕರ್ಯವಿದೆ. ಐದೂ ರಾಜ್ಯಗಳಲ್ಲಿ ಮೊದಲ ಬಾರಿಗೆ ಮತದಾನ ಮಾಡುವವರ ಸಂಖ್ಯೆ 60 ಲಕ್ಷ ಇದೆ” ಎಂದು ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು.

ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಿಗೆ ಚುನಾವಣೆ?

ಇದನ್ನೂ ಓದಿ: Supreme Court: ಚುನಾವಣೆಗೂ ಮುನ್ನ ಉಚಿತ ಕೊಡುಗೆ: ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳಿಗೆ ನೋಟಿಸ್

ಯಾವ ರಾಜ್ಯದಲ್ಲಿ ಯಾವ ಸರ್ಕಾರ?

ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದರೆ, ತೆಲಂಗಾಣದಲ್ಲಿ ಕೆ.ಚಂದ್ರಶೇಖರ್‌ ರಾವ್‌ ಅವರ ಬಿಆರ್‌ಎಸ್‌ ಆಡಳಿತದಲ್ಲಿದೆ. ಮಿಜೋರಾಂನಲ್ಲಿ ಮಿಜೋ ನ್ಯಾಷನಲ್‌ ಫ್ರಂಟ್‌ನ ಜೊರಾಮ್‌ಥಾಂಗ ಮುಖ್ಯಮಂತ್ರಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ.

ಐದೂ ರಾಜ್ಯಗಳಲ್ಲಿ ಆಯಾ ಪಕ್ಷಗಳು ಮುನ್ನಡೆ ಸಾಧಿಸುವ, ಆ ಮೂಲಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ದಿಸೆಯಲ್ಲಿ ಎಲ್ಲ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಪ್ರಸ್ತುತ ಸರ್ಕಾರಗಳ ಅವಧಿ ಮಿಜೋರಾಂನಲ್ಲಿ ಡಿಸೆಂಬರ್ 17, 2023, ಮಧ್ಯಪ್ರದೇಶದಲ್ಲಿ ಜನವರಿ 6, ಛತ್ತೀಸ್‌ಗಢದಲ್ಲಿ ಜನವರಿ 3, ರಾಜಸ್ಥಾನದಲ್ಲಿ ಜನವರಿ 14, ತೆಲಂಗಾಣದಲ್ಲಿ ಜನವರಿ 16ಕ್ಕೆ ಮುಗಿಯಲಿದೆ.

Exit mobile version