Site icon Vistara News

Election Results 2023: ನಾಲ್ಕೂ ರಾಜ್ಯಗಳಲ್ಲಿ ಪೈಪೋಟಿ ಹೇಗಿದೆ? ಯಾರಿಗೆ ವಿಜಯಮಾಲೆ?

Assembly Election Results 2023 Live

Election Results 2023: How Is The Political Scenario In Four States? Who Will Win?

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election 2024) ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ (Election Results 2023) ಕ್ಷಣಗಣನೆ ಆರಂಭವಾಗಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಭಾನುವಾರ (ಡಿಸೆಂಬರ್‌ 3) ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಲಿದೆ. ಇದಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಮಧ್ಯಾಹ್ನದ ವೇಳೆಗೆ ನಾಲ್ಕೂ ರಾಜ್ಯಗಳ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಮತಗಟ್ಟೆ ಸಮೀಕ್ಷೆ, ಆಂತರಿಕ ವರದಿಗಳನ್ನು ಗಮನಿಸಿರುವ ರಾಜಕೀಯ ಪಕ್ಷಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ಮಧ್ಯಪ್ರದೇಶ

ಮಧ್ಯಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಇದೆ. ಅದರಲ್ಲೂ, ಕಳೆದ ಬಾರಿ ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆದಿದ್ದ ಕಾಂಗ್ರೆಸ್‌ಅನ್ನು ಬಿಜೆಪಿ ಓವರ್‌ಟೇಕ್‌ ಮಾಡಿ ಅಧಿಕಾರ ಹಿಡಿದಿದೆ. ಈಗ ಮತ್ತೆ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆಯೇರಲು ಕಾಂಗ್ರೆಸ್‌ ಇನ್ನಿಲ್ಲದ ರಣತಂತ್ರ ರೂಪಿಸಿದೆ. ಮತ್ತೊಂದೆಡೆ, ಕಳೆದ ಬಾರಿ ಸಾಧಿಸದ ಬಹುಮತವನ್ನು ಈ ಬಾರಿ ಸಾಧಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಹಾಗಾಗಿ, ಈ ಬಾರಿಯ ಚುನಾವಣೆಯು ತೀವ್ರ ಹಣಾಹಣಿಯಿಂದ ಕೂಡಿದೆ. ರಾಜ್ಯದಲ್ಲಿ ಶೇ.71ರಷ್ಟು ಮತದಾನವಾಗಿದೆ.

ಒಟ್ಟು ಸ್ಥಾನ 230
ಮ್ಯಾಜಿಕ್‌ ನಂಬರ್‌ 116

brs poll manifesto, Free insurance, rss 400 lpg cylinder and many more scheme

ರಾಜಸ್ಥಾನ

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಇದೆ. ಅಶೋಕ್‌ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದು, ಈ ಬಾರಿಯೂ ಗೆದ್ದು ಬೀಗುವ ಉತ್ಸಾಹದಲ್ಲಿದೆ. ಮತ್ತೊಂದೆಡೆ, 2018ರಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯು ಈ ಬಾರಿ ಗೆದ್ದು, ಮತ್ತೆ ಅಧಿಕಾರ ಪಡೆಯಲು ಯತ್ನಿಸುತ್ತಿದೆ. ಹಾಗಾಗಿಯೇ, ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ಹಾಗೂ ಬಿಜೆಪಿಯು ಜನರಿಗೆ ಉಚಿತ ಕೊಡುಗೆಗಳ ಮಹಾಪೂರವೇ ಹರಿಸಿವೆ. ಹಾಗಾಗಿ, ಈ ಬಾರಿ ಮತದಾರನ ಒಲವು ಯಾರ ಪರ ಇದೆ ಎಂಬುದು ಕುತೂಹಲ ಕೆರಳಿಸಿದೆ. ರಾಜಸ್ಥಾನದಲ್ಲಿ ಶೇ.75ರಷ್ಟು ಮತದಾನ ನಡೆದಿದೆ.

ಒಟ್ಟು ಕ್ಷೇತ್ರ: 200
ಮ್ಯಾಜಿಕ್‌ ನಂಬರ್‌: 101

brs poll manifesto, Free insurance, rss 400 lpg cylinder and many more scheme

ಛತ್ತೀಸ್‌ಗಢ

ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಳ್ಳುವ ತವಕದಲ್ಲಿ ಕಾಂಗ್ರೆಸ್‌ ಇದ್ದರೆ, ಮರಳಿ ಗದ್ದುಗೆ ಪಡೆಯುವ ಉತ್ಸಾಹ ಬಿಜೆಪಿಯಲ್ಲಿದೆ. ಸ್ಥಳೀಯ ಪಕ್ಷಗಳು ಕೂಡ ಪೈಪೋಟಿ ನೀಡಲು ಸಜ್ಜಾಗಿವೆ. ಇದರಿಂದಾಗಿ ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ. ‌ಛತ್ತೀಸ್‌ಗಢದಲ್ಲಿ ಶೇ.68ರಷ್ಟು ಮತದಾನ ದಾಖಲಾಗಿದೆ.

ಒಟ್ಟು ಕ್ಷೇತ್ರ: 90
ಮ್ಯಾಜಿಕ್‌ ನಂಬರ್‌: 46

brs poll manifesto, Free insurance, rss 400 lpg cylinder and many more scheme

ಇದನ್ನೂ ಓದಿ: Deepfake: ಚುನಾವಣೆ ಗೆಲ್ಲಲು ಕಾಂಗ್ರೆಸ್‌ನಿಂದ ಡೀಪ್‌ಫೇಕ್‌ ಬಳಕೆ; ದೂರು ದಾಖಲು

ತೆಲಂಗಾಣ

ತೆಲಂಗಾಣದಲ್ಲೂ ಸರ್ಕಾರ ರಚನೆಗೆ ಹಲವು ಕಸರತ್ತು ನಡೆಸಲಾಗಿದ್ದು, ಫಲಿತಾಂಶದತ್ತ ಎಲ್ಲರ ಗಮನ ನೆಟ್ಟಿದೆ. ತೆಲಂಗಾಣದಲ್ಲಿ ಬಿಆರ್‌ಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಫೈಟ್‌ ಇದೆ. ಅತ್ತ, ಸಿಎಂ ಕೆ.ಚಂದ್ರಶೇಖರ್‌ ರಾವ್‌ ಅವರಿಗೆ ಹ್ಯಾಟ್ರಿಕ್‌ ಕನಸು ಚಿಗುರೊಡೆದಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಮುನ್ನಡೆ ಸಾಧಿಸುವ ನಿರೀಕ್ಷೆ ಇದೆ.

ಒಟ್ಟು ಕ್ಷೇತ್ರ 119
ಮ್ಯಾಜಿಕ್‌ ನಂಬರ್‌ 60

brs poll manifesto, Free insurance, rss 400 lpg cylinder and many more scheme

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Exit mobile version