Site icon Vistara News

Rajya Sabha Election: ಕರ್ನಾಟಕದ 4 ಸೇರಿ ರಾಜ್ಯಸಭೆ 56 ಸ್ಥಾನಗಳಿಗೆ ಫೆ.27ಕ್ಕೆ ಚುನಾವಣೆ

Rajya Sabha Election

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮಧ್ಯೆಯೇ ಚುನಾವಣೆ ಆಯೋಗವು ರಾಜ್ಯಸಭೆ ಚುನಾವಣೆ (Rajya Sabha Election) ದಿನಾಂಕ ಘೋಷಿಸಿದೆ. 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸಲು ಆಯೋಗವು (Election Commission Of India) ತೀರ್ಮಾನಿಸಿದೆ. ಫೆಬ್ರವರಿ 27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ (Voting) ನಡೆಯಲಿದೆ ಎಂದು ಚುನಾವಣೆ ಆಯೋಗವು ಮಾಹಿತಿ ನೀಡಿದೆ.

ಉಮೇದುವಾರಿಕೆ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ಒಟ್ಟು 15 ರಾಜ್ಯಗಳ 56 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 16ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಫೆಬ್ರವರಿ 20 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ. ಮತದಾನ ನಡೆಯುವ ಫೆಬ್ರವರಿ 27ರಂದೇ ಫಲಿತಾಂಶ ಲಭ್ಯವಾಗಲಿದೆ.

ಯಾವ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳಿಗೆ ಚುನಾವಣೆ?

ರಾಜ್ಯಸ್ಥಾನ
ಕರ್ನಾಟಕ4
ಆಂಧ್ರಪ್ರದೇಶ3
ಬಿಹಾರ6
ಛತ್ತೀಸ್‌ಗಢ1
ಗುಜರಾತ್‌4
ಹರಿಯಾಣ 1
ಹಿಮಾಚಲ ಪ್ರದೇಶ1
ಮಧ್ಯಪ್ರದೇಶ5
ಮಹಾರಾಷ್ಟ್ರ 6
ತೆಲಂಗಾಣ 3
ಉತ್ತರ ಪ್ರದೇಶ10
ಉತ್ತರಾಖಂಡ1
ಪಶ್ಚಿಮ ಬಂಗಾಳ5
ಒಡಿಶಾ 3
ರಾಜಸ್ಥಾನ3
ಒಟ್ಟು56

ರಾಜ್ಯಸಭೆಯಲ್ಲಿ ಪಕ್ಷವಾರು ಬಲಾಬಲ ಎಷ್ಟಿದೆ?

ರಾಜ್ಯಸಭೆಯ ಒಟ್ಟು 245 ಸ್ಥಾನಗಳಲ್ಲಿ ಬಿಜೆಪಿಯೇ ಹೆಚ್ಚಿನ ಸದಸ್ಯರನ್ನು ಹೊಂದಿದೆ. ಬಿಜೆಪಿಯು ಐವರು ನಾಮನಿರ್ದೇಶಿತ ಸದಸ್ಯರು ಸೇರಿ 94 ಸದಸ್ಯರನ್ನು ಹೊಂದಿದೆ. ಇನ್ನು ಕಾಂಗ್ರೆಸ್‌ 30 ಸದಸ್ಯರನ್ನು ಹೊಂದಿದೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಸಭೆಯ 56 ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಇದು ಕೂಡ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: Lok Sabha Election: ಬುಲಂದ್‌ಶಹರ್‌ನಲ್ಲಿ ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ

Exit mobile version