Site icon Vistara News

Salman Khan : ಸಲ್ಮಾನ್ ಮನೆ ಬಳಿಯ ಗುಂಡಿನ ದಾಳಿಯ ಪ್ರಕರಣ ತನಿಖೆ ಎನ್​ಕೌಂಟರ್​ ದಯಾನಾಯಕ್ ಹೆಗಲಿಗೆ?

Salman Khan

ಮುಂಬಯಿ: ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಲಕ್ಷ್ಮಿ ಗೌತಮ್ ಮತ್ತು ಎನ್​ಕೌಂಟರ್​ ಸ್ಪೆಷಲಿಸ್ಟ್ ದಯಾ ನಾಯಕ್ (Encounter Dayanayak) ಸೇರಿದಂತೆ ಮುಂಬೈ ಪೊಲೀಸ್ ಅಧಿಕಾರಿಗಳ ತಂಡವು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮನೆಯ ಹೊರಗೆ ಕಾಣಿಸಿಕೊಂಡಿದೆ ಭಾನುವಾರ ಮುಂಜಾನೆ, ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಈ ಪ್ರಕರಣದ ವಿಚಾರಣೆ ಹೊಣೆ ಇದೀಗ ದಯಾ ನಾಯಕ್ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರು ಅವರ ನಿವಾಸದ ಸುತ್ತಲೂ ಭದ್ರತೆ ಹೆಚ್ಚಿಸಿದ್ದಾರೆ. ಈ ವೇಳೆ ದಯಾನಾಯಕ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಲಕ್ಷ್ಮಿ ಗೌತಮ್ ಮತ್ತು ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರು ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಸಲ್ಮಾನ್ ಮನೆಯ ಹೊರಗಡೆ ಕಾಣಿಸಿಕೊಂಡರು.

ಖಾನ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳು ಅವರ ಮನೆಯ ಬಳಿ ಸ್ಥಾಪಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂದಿದೆ. ಆರೋಪಿಗಳನ್ನು ಬಂಧಿಸಲು 15 ತಂಡಗಳನ್ನು ರಚಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ತಮ್ಮ ಮನೆಯಲ್ಲಿದ್ದರು.

ಇದನ್ನೂ ಓದಿ: Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

ನಟ ವಾಸಿಸುವ ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್ಮೆಂಟ್​ ಹೊರಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ನಂತರ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಮಾನ್ ಖಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಹೊಣೆ ಹೊತ್ತ ಗ್ಯಾಂಗ್​ಸ್ಟರ್​ ಸಹೋದರ

ಮುಂಬೈ: ಇಂದು (ಏ. 14) ಮುಂಜಾನೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮುಂಬೈ ನಿವಾಸದ ಹೊರಗೆ ದುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ (Anmol Bishnoi)​ ಹೇಳಿಕೊಂಡಿದ್ದಾನೆ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾನೆ.

ಇಂದು ಬೆಳಗ್ಗೆ ಇಬ್ಬರು ಆಗಂತುಕರು ಸಲ್ಮಾನ್‌ ಖಾನ್‌ ಅವರ ನಿವಾಸದೆದುರು 6 ಬಾರಿ ಗುಂಡಿನ ಮಳೆಗೆರೆದಿದ್ದರು. ಬಳಿಕ ಅವರು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Exit mobile version