Site icon Vistara News

ಶೋಪಿಯಾನ್​ನಲ್ಲಿ ಮುಂಜಾನೆಯಿಂದಲೂ ಎನ್​ಕೌಂಟರ್​; ಜೈಷ್​ ಎ ಮೊಹಮ್ಮದ್​ ಸಂಘಟನೆಯ ಉಗ್ರನ ಹತ್ಯೆ

encounter In Jammu Kashmir 1 Terrorist Killed

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್​​ನ ಕರ್ಪೆನ್​ ಏರಿಯಾದಲ್ಲಿ ಶುಕ್ರವಾರ ಮುಂಜಾನೆಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್​ ನಡೆಯುತ್ತಿದ್ದು, ಜೈಷ್​ ಎ ಮೊಹಮ್ಮದ್​ ಭಯೋತ್ಪಾದಕನೊಬ್ಬನ ಹತ್ಯೆಯಾಗಿದೆ. ಇಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಈ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಗುರುವಾರ ಬೃಹತ್​ ಉಗ್ರರ ಜಾಲವೊಂದನ್ನು ಪೊಲೀಸರು ಭೇದಿಸಿದ್ದರು. ಎನ್‌ಜಿಒ ಮೂಲಕ ಉಗ್ರರಿಗೆ ಹಣಕಾಸು ನೆರವು ಸೇರಿ ಹಲವು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಜಾಲವನ್ನು ಪತ್ತೆಹಚ್ಚಿ ಆರು ಜನರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೇ ಶೋಪಿಯಾನ್​ನಲ್ಲಿ ಉಗ್ರನೊಬ್ಬನ ಹತ್ಯೆಗೈದಿದ್ದಾರೆ.

ಇದನ್ನೂ ಓದಿ: Jammu Kashmir | ಪ್ರತ್ಯೇಕ ಎನ್‌ಕೌಂಟರ್‌, ಪಾಕಿಸ್ತಾನಿ ಸೇರಿದಂತೆ ನಾಲ್ವರು ಉಗ್ರರ ಹತ್ಯೆ

Exit mobile version