Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ - Vistara News

ದೇಶ

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Akhilesh Yadav: ನಾನು ಮೊದಲಿನಿಂದಲೂ ಇವಿಎಂಗಳ ಬಗ್ಗೆ ಅನುಮಾನ ಹೊಂದಿದ್ದೇನೆ. ನಾನು ಮೊದಲು ಕೂಡ ಇವಿಎಂಗಳನ್ನು ನಂಬಿಲ್ಲ, ಈಗಲೂ ನಂಬುವುದಿಲ್ಲ. ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬುವುದಿಲ್ಲ ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಸಂಸತ್‌ನಲ್ಲಿ ಹೇಳಿದ್ದಾರೆ.

VISTARANEWS.COM


on

Akhilesh Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯವಾಗಿದೆ. ಬಿಜೆಪಿಯು ಸ್ಪಷ್ಟ ಬಹುಮತ ಪಡೆಯದಿದ್ದರೂ, ಎನ್‌ಡಿಎ ಒಕ್ಕೂಟದ ಬಲದಿಂದ ಅಧಿಕಾರ ಗಳಿಸಿದೆ. ಕಳೆದ ಬಾರಿಗಿಂತ ಈ ಬಾರಿ ಪ್ರತಿಪಕ್ಷಗಳು ಗಣನೀಯವಾಗಿ ಸೀಟುಗಳನ್ನು ಹೆಚ್ಚಿಸಿಕೊಂಡಿವೆ. ಇಷ್ಟಾದರೂ ಚುನಾವಣಾ ಮತಯಂತ್ರಗಳ (EVM) ಕುರಿತು ಪ್ರತಿಪಕ್ಷಗಳ ಅನುಮಾನ ಮಾತ್ರ ಕಡಿಮೆಯಾಗಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, “ಉತ್ತರ ಪ್ರದೇಶದ ಎಲ್ಲ 80 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ನಾನು ಚುನಾವಣೆ ಮತಯಂತ್ರಗಳನ್ನು ನಂಬುವುದಿಲ್ಲ” ಎಂಬುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಹೇಳಿದ್ದಾರೆ.

ಸಂಸತ್ತಿನಲ್ಲಿ ರಾಷ್ಟ್ರಪತಿಯವರ ವಂದನಾ ನಿರ್ಣಯದ ಕುರಿತು ಮಾತನಾಡಿದ ಅವರು ಇವಿಎಂ ವಿಚಾರವನ್ನು ಪ್ರಸ್ತಾಪಿಸಿದರು. “ನಾನು ಮೊದಲಿನಿಂದಲೂ ಇವಿಎಂಗಳ ಬಗ್ಗೆ ಅನುಮಾನ ಹೊಂದಿದ್ದೇನೆ. ನಾನು ಮೊದಲು ಕೂಡ ಇವಿಎಂಗಳನ್ನು ನಂಬಿಲ್ಲ, ಈಗಲೂ ನಂಬುವುದಿಲ್ಲ. ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಇವಿಎಂಗಳನ್ನು ನಂಬುವುದಿಲ್ಲ. ಇವಿಎಂಗಳ ವಿಚಾರದಲ್ಲಿ ನಮ್ಮ ನಿಲುವು ಮುಂದುವರಿಯುತ್ತದೆ. ಇವಿಎಂಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸದ ಹೊರತು ಸಮಸ್ಯೆ ಬಗೆಹರಿಯುವುದಿಲ್ಲ” ಎಂಬುದಾಗಿ ತಿಳಿಸಿದ್ದಾರೆ.

ಅನುಮಾನ ವ್ಯಕ್ತಪಡಿಸಿದ್ದ ಎಲಾನ್‌ ಮಸ್ಕ್‌

ಕೆಲ ದಿನಗಳ ಹಿಂದೆ ಟೆಸ್ಲಾ ಸಿಎಒ ಎಲಾನ್‌ ಮಸ್ಕ್‌ ಅವರು ಕೂಡ ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಎಲಾನ್‌ ಮಸ್ಕ್‌ ಅಭಿಪ್ರಾಯವನ್ನು ರಾಹುಲ್‌ ಗಾಂಧಿ ಕೂಡ ಅನುಮೋದಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದರು.

ಇದನ್ನೂ ಓದಿ: DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Air India: ಟೀಮ್​ ಇಂಡಿಯಾ ಆಟಗಾರರನ್ನು ಕರೆ ತಂದ ಏರ್‌ ಇಂಡಿಯಾಗೆ ವರದಿ ಕೇಳಿದ ಡಿಜಿಸಿಎ; ಕಾರಣವೇನು?

Air India: ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

VISTARANEWS.COM


on

Air India
Koo

ಮುಂಬಯಿ: ವಿಶೇಷ ಚಾರ್ಟರ್ಡ್ ವಿಮಾನದ ಮೂಲಕ ಟೀಮ್​ ಇಂಡಿಯಾ(Team India) ಆಟಗಾರರನ್ನು ನವದೆಹಲಿಗೆ ಕರೆ ತಂದ ಏರ್ ಇಂಡಿಯಾಗೆ(Chartered flight for Team India) ಸಂಕಷ್ಟವೊಂದು ಎದುರಾಗಿದೆ. ನೆವಾರ್ಕ್‌ನಿಂದ ದೆಹಲಿ ನಡುವೆ ಹಾರಾಟ ನಡೆಸಬೇಕಿದ್ದ ಏರ್‌ ಇಂಡಿಯಾದ(Air India) ಸಾಮಾನ್ಯ ಪ್ಯಾಸೆಂಜರ್‌ ವಿಮಾನವನ್ನು ಜುಲೈ 2ರಂದು ರದ್ದುಗೊಳಿಸಿ, ಭಾರತದ ಕ್ರಿಕೆಟ್‌ ತಂಡವನ್ನು ಸ್ವದೇಶಕ್ಕೆ ಕರೆತರುವ ಉದ್ದೇಶದಿಂದ ಬಾರ್ಬಡೋಸ್‌ಗೆ ಡೈವರ್ಟ್‌ ಮಾಡಿದ ಕ್ರಮಕ್ಕೆ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(DGCA)ವು ಏರ್‌ ಇಂಡಿಯಾದಿಂದ ವರದಿ ಕೇಳಿದ.

ಟಿ20 ವಿಶ್ವಕಪ್​ ಟೂರ್ನಿ ಮುಗಿದ ಮರು ದಿನವೇ​ ವೆಸ್ಟ್ ​ಇಂಡೀಸ್​ನಲ್ಲಿ ಉಂಟಾದ ಬೆರಿಲ್ ಚಂಡಮಾರುತದಿಂದಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು. ಹೀಗಾಗಿ ಟೀಮ್​ ಇಂಡಿಯಾ ಆಟಗಾರರು ಬಾರ್ಬಡೋಸ್‌ನಲ್ಲೇ ನಾಲ್ಕು ದಿನಗಳ ಕಾಲ ಸಿಲುಕಿಕೊಂಡಿದ್ದರು. ಹವಾಮಾನವು ಸುಧಾರಿಸಿದ ನಂತರ, ವಿಶ್ವ ಚಾಂಪಿಯನ್‌ಗಳನ್ನು ಮರಳಿ ಮನೆಗೆ ಕರೆತರಲು ಬಿಸಿಸಿಐ ವಿಶೇಷ ಏರ್ ಇಂಡಿಯಾ ಚಾರ್ಟರ್ಡ್ ವಿಮಾನವನ್ನು ಬಾರ್ಬಡೋಸ್‌ಗೆ ಕಳುಹಿಸಲಾಗಿತ್ತು. ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಇಂದು(ಗುರುವಾರ) ಬೆಳಗ್ಗೆ ಭಾರತಕ್ಕೆ ಬಂದಿಳಿದೆ. ಇದೀಗ ಪ್ಯಾಸೆಂಜರ್‌ ವಿಮಾನವನ್ನು ರದ್ದುಗೊಳಿಸಿದ ಕ್ರಮಕ್ಕೆ ಉತ್ತರ ನೀಡುವಂತೆ ಏರ್‌ ಇಂಡಿಯಾಗೆ ಡಿಜಿಸಿಎ ಆದೇಶಿಸಿದೆ.

ಇದನ್ನೂ ಓದಿ Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಮಾನ ರದ್ದುಗೊಂಡ ಕುರಿತು ಪ್ರಯಾಣಿಕರಿಗೆ ಮುಂಚಿತವಾಗಿ ತಿಳಿಸಲಾಗಿತ್ತು. ಅವರಿಗೆ ನ್ಯೂಯಾರ್ಕ್‌ ತನಕ ರಸ್ತೆ ಮೂಲಕ ಸಾಗಲು ಅಥವಾ ವಿಮಾನದಲ್ಲಿ ಸಾಗಲು ಅವಕಾಶ ಕಲ್ಪಿಸಲಾಗಿತ್ತು. ನಂತರ ನ್ಯೂಯಾರ್ಕ್‌ನಿಂದ ದಿಲ್ಲಿಗೆ ತೆರಳಲು ಬೇರೆ ವಿಮಾನ ಸೇವೆ ಒದಗಿಸಲಾಗಿತ್ತು ಎಂದು ಏರ್‌ ಇಂಡಿಯಾ ಹೇಳಿದೆ.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ


ಜುಲೈ 29ರಂದು ನಡೆದಿದ್ದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

Continue Reading

ದೇಶ

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Om Birla: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು. ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

VISTARANEWS.COM


on

Om Birla
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ (Lok Sabha Speaker) ಓಂ ಬಿರ್ಲಾ (Om Birla) ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಈ ಬಾರಿ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಘೋಷಣೆ ಕೂಗಿದ್ದು ವಿವಾದದ ಕಿಡಿ ಹೊತ್ತಿಸಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು.

ಬಳಿಕ ಈ ವಿಚಾರ ವಿವಾದ ಎಬ್ಬಿಸಿತ್ತು. ದೇಶಾದ್ಯಂತ ಪರ-ವಿರೋಧ ಚರ್ಚೆ ನಡೆದಿದ್ದವು. ಇದರ ನಂತರ ಬಿರ್ಲಾ ಅವರು ಸದಸ್ಯರ ಪ್ರಮಾಣ ವಚನ ಸ್ವೀಕಾರ ಮತ್ತು ದೃಢೀಕರಣಕ್ಕಾಗಿ ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಿದ್ದರು. ಸಮಿತಿಯ ಶಿಫಾರಸ್ಸಿನಂತೆ ಇದೀಗ ಲೋಕಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಗಳ 389ನೇ ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಓಂ ಬಿರ್ಲಾ ಅವರು ಸ್ಪೀಕರ್ ನಿರ್ದೇಶನಗಳಿಗೆ ಹೊಸ ಷರತ್ತು ಸೇರಿಸಿದ್ದಾರೆ.

ಹೊಸ ನಿಯಮದಲ್ಲಿ ಏನಿದೆ?

ಹೊಸ ನಿಯಮದ ಪ್ರಕಾರ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮೊದಲು ಅಥವಾ ಬಳಿಕ ಯಾವುದೇ ಪದಗಳು ಅಥವಾ ಅಭಿವ್ಯಕ್ತಿಗಳನ್ನು ಬಳಸಬಾರದು. ಒಂದುವೇಳೆ ನಿಯಮ ಉಲ್ಲಂಘಿಸಿದರೆ ಸಂಸದರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ 18ನೇ ಲೋಕಸಭೆಯ ಮೊದಲ ಅಧಿವೇಶನದ ಕೊನೆಯಲ್ಲಿ ಮಾಹಿತಿ ನೀಡಿದರು.

ಏನಿದು ವಿವಾದ?

18ನೇ ಲೋಕಸಭೆಯ ಸದಸ್ಯರಾಗಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಸಾದುದ್ದೀನ್ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದರು. ಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದರು. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದರು. ಬಳಿಕ ಇದು ವ್ಯಾಪಕ ವಿವಾದ ಹುಟ್ಟು ಹಾಕಿತ್ತು.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Hathras Stampede: ಕಾಲ್ತುಳಿತದ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ. ಇದರ ಬೆನ್ನಲ್ಲೇ ಪೊಲೀಸರು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಲ್ತುಳಿತದ ಕುರಿತು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. “ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಸೇರಿದ್ದರು. ಸತ್ಸಂಗ ಮುಗಿದ ಬಳಿಕ ಇನ್ನೇನು ಭೋಲೆ ಬಾಬಾ ಹೊರಡುವವರಿದ್ದರು. ಇದೇ ವೇಳೆ ಲಕ್ಷಾಂತರ ಜನ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ, ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣವಾಗಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Continue Reading

ದೇಶ

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Agnipath Scheme: ರಾಹುಲ್‌ ಗಾಂಧಿ ಆರೋಪಕ್ಕೆ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಕರ್ತವ್ಯದಲ್ಲಿರುವಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹೇಳಿವೆ. ಒಟ್ಟಾರೆ ಮೊತ್ತದಲ್ಲಿ ಅಗ್ನಿವೀರ್ ಅಜಯ ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ ನೀಡಲಾಗಿದೆ.

VISTARANEWS.COM


on

Agnipath Scheme
Koo

ಹೊಸದಿಲ್ಲಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಅಗ್ನಿಪಥ್‌(Agnipath Scheme) ಬಗ್ಗೆ ಆರೋಪಗಳನ್ನು ಮಾಡಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi)ಗೆ ಭಾರತೀಯ ಸೇನೆ ತಿರುಗೇಟು ನೀಡಿದೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯ ವೇಳೆ ‘ಅಗ್ನಿವೀರರು ಯೂಸ್‌ ಅಂಡ್‌ ಥ್ರೋ ಕಾರ್ಮಿಕರಿದ್ದಂತೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು, ಹುತಾತ್ಮ ಯೋಧರಿಗೆ ಕಿಂಚಿತ್ತೂ ಪರಿಹಾರ ನೀಡಿಲ್ಲ ಎಂದು ರಾಹುಲ್‌ ಕಿಡಿ ಕಾರಿದ್ದರು. ಇದಕ್ಕೆ ಉತ್ತರ ನೀಡಿರುವ ಭಾರತೀಯ ಸೇನೆ(Indian Army), ಕರ್ತವ್ಯದಲ್ಲಿದ್ದಾಗ ನಿಧನರಾದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರವಾಗಿ 98 ಲಕ್ಷ ರೂ ನೀಡಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

ಪರಿಹಾರ ನೀಡಿರುವ ಬಗ್ಗೆ ಸೇನೆ ಪೋಸ್ಟ್‌

ರಾಹುಲ್‌ ಗಾಂಧಿ ಆರೋಪಕ್ಕೆ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಕರ್ತವ್ಯದಲ್ಲಿರುವಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹೇಳಿವೆ. ಒಟ್ಟಾರೆ ಮೊತ್ತದಲ್ಲಿ ಅಗ್ನಿವೀರ್ ಅಜಯ ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ ನೀಡಲಾಗಿದೆ. ಅಗ್ನಿವೀರ್ ಯೋಜನೆಯ ನಿಯಮಗಳ ಅಡಿಯಲ್ಲಿ ಅನ್ವಯವಾಗುವಂತೆ ಅನುಗ್ರಹ ಪೂರ್ವಕವಾಗಿ ನೀಡಲಾಗುವ ಪರಿಹಾರ (ಎಕ್ಸ್‌- ಗ್ರೇಷಿಯಾ) ಮತ್ತು ಇತರೆ ಪ್ರಯೋಜನಗಳ ಅಂದಾಜು 67 ಲಕ್ಷ ರೂ ಮೊತ್ತವನ್ನು ಬಾಕಿ ಇರುವ ಪೊಲೀಸ್ ಪರಿಶೀಲನೆ ಬಳಿಕ ಕೂಡಲೇ ಅಂತಿಮ ಸೆಟ್ಲ್‌ಮೆಂಟ್ ಆಗಿ ಅವರ ಖಾತೆಗೆ ಜಮಾವಣೆ ಮಾಡಲಾಗುವುದು. ಒಟ್ಟಾರೆ ಮೊತ್ತವು ಅಂದಾಜು 1.65 ಕೋಟಿ ರೂ,ನಷ್ಟು ಹಣ ಅವರಿಗೆ ಸಿಗಲಿದೆ ಎಂದು ಸೇನೆ ತಿಳಿಸಿದೆ.

ಹುತಾತ್ಮ ಯೋಧನ ತಂದೆ ಜೊತೆ ರಾಹುಲ್‌ ಮಾತುಕತೆ

ಹುತಾತ್ಮ ಯೋಧ ಅಜಯ್‌ ಕುಮಾರ್‌ ಅವರ ತಂದೆ ಜೊತೆಮಾತುಕತೆ ನಡೆಸಿರುವ ವಿಡಿಯೋವನ್ನು ಎಕ್ಸ್‌ನಲ್ಲಿ ಹರಿಬಿಟ್ಟಿರುವ ರಾಹುಲ್‌ ಗಾಂಧಿ, ಸರ್ಕಾರದಿಂದ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಯಾವುದೇ ಆರ್ಥಿಕ ನೆರವು ಸಿಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಸಾಲದೆನ್ನುವುದಕ್ಕೆ ಅಜಯ್‌ ಕುಮಾರ್‌ ಅವರ ತಂದೆ ಕೂಡ ಸೇನೆ ಹಾಗೂ ಸರ್ಕಾರದಿಂದ ಕಿಂಚಿತ್ತೂ ಪರಿಹಾರ ಸಿಕ್ಕಿಲ್ಲ ಎಂದು ದೂರಿದ್ದರು.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Continue Reading
Advertisement
ಪ್ರಮುಖ ಸುದ್ದಿ7 mins ago

Narendra Modi : ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ, ಕಾರಣವೇನು?

Viral Video
Latest14 mins ago

Viral Video: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

Dhruva Sarja Gym Trainer Prashanth poojari twist
ಸ್ಯಾಂಡಲ್ ವುಡ್16 mins ago

Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

Air India
ಕ್ರೀಡೆ22 mins ago

Air India: ಟೀಮ್​ ಇಂಡಿಯಾ ಆಟಗಾರರನ್ನು ಕರೆ ತಂದ ಏರ್‌ ಇಂಡಿಯಾಗೆ ವರದಿ ಕೇಳಿದ ಡಿಜಿಸಿಎ; ಕಾರಣವೇನು?

karnataka Rain
ಮಳೆ26 mins ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Kannada Serials TRP Gowri in trp puttakkana makkalu number 1
ಕಿರುತೆರೆ1 hour ago

Kannada Serials TRP: ಟ್ರ್ಯಾಕ್‌ಗೆ ಮರಳಿದ `ಶ್ರೀಗೌರಿ’; ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Arecanut Import
ಕೃಷಿ1 hour ago

Arecanut Import: ಅಕ್ರಮ ಅಡಿಕೆ ಆಮದು ರೋಗಕ್ಕೆ ಔಷಧವೇ ಇಲ್ಲವೇ?

Team India
ಕ್ರೀಡೆ1 hour ago

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಪ್ರಮುಖ ಸುದ್ದಿ1 hour ago

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Om Birla
ದೇಶ1 hour ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ26 mins ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ2 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ3 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ4 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ5 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ6 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ಟ್ರೆಂಡಿಂಗ್‌