Site icon Vistara News

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

EVMs damage

ಮಧ್ಯಪ್ರದೇಶ: ಚುನಾವಣಾ ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ(Fire accident) ಸಂಭವಿಸಿದ್ದು, ಅನೇಕ ವಿದ್ಯುನ್ಮಾನ ಮತಯಂತ್ರ(EVMs damage)ಗಳು ಹಾನಿಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇನ್ನು ಬಸ್‌ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಸಿಬ್ಬಂದಿ ಮತ್ತು ಚಾಲಕ ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ:

ಬೀತುಲ್‌ ಜಿಲ್ಲೆಯಾ ಗೋಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಬಸ್‌ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ಬೂತ್‌ ನಂಬರ್‌ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳು ಹಾನಿಗೊಳಗಾಗಿವೆ. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ. ಇನ್ನು ಈ ಘಟನೆಯಿಂದ ಮತ ಎಣಿಕೆ ಮೇಲೆ ಏನಾದರೂ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅವರು ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

ಮಧ್ಯಪ್ರದೇಶದಲ್ಲಿ ಮೂರನೇ ಹಂತದ ಮತದಾನ

ನಿನ್ನೆ ಮಧ್ಯಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತನಾದನ ನಡೆದಿತ್ತು. ಬೀತುಲ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ. 72.65 ರಷ್ಟು ಮತದಾನ ನಡೆದಿತ್ತು. ಒಟ್ಟಾರೆ ಮಧ್ಯಪ್ರದೇಶದಲ್ಲಿ ಒಂಬತ್ತು ಕ್ಷೇತ್ರಗಳಲ್ಲಿ ಶೇ.66.05ರಷ್ಟು ಮತದಾನ ಆಗಿತ್ತು. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಕೇಂದ್ರ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ, ಮಾಜಿ ಸಿಎಂಗಳಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಒಟ್ಟು 127 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಿನ್ನೆ ಮೊರೆನಾ, ಬಿಂದ್‌(ಎಸ್‌ಸಿ ಮೀಸಲು ಕ್ಷೇತ್ರ), ಗ್ವಾಲಿಯರ್‌, ಗುನಾ, ಸಾಗರ್‌, ವಿಧಿಶಾ, ಭೋಪಾಲ್‌, ರಾಜ್‌ಘರ್‌ ಮತ್ತು ಬೀತುಲ್‌(ಎಸ್‌ಟಿ ಮೀಸಲು ಕ್ಷೇತ್ರ)ನಲ್ಲಿ ಮತದಾನ ನಡೆದಿತ್ತು.

Exit mobile version