Site icon Vistara News

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Exit Poll 2024

ಬೆಂಗಳೂರು: ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಬಹುತೇಕ ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿ ನಾವ್ಯಾರು ಎಕ್ಸಿಟ್ ಪೋಲ್ ನಂಬುವುದಿಲ್ಲ ಎಂದು ಹೇಳಿದ್ದಾರೆ. ಇದು ಗ್ರೌಂಡ್ ರಿಯಾಲಿಟಿಯಿಂದ ದೂರ ಇದೆ ಎಂದೇ ನಂಬುತ್ತೇವೆ ಎಂದು ನುಡಿದಿದ್ದಾರೆ. ಸಮೀಕ್ಷೆಗಳಲ್ಲಿ ಕೇವಲ ಐದಾರು ಸೀಟುಗಳನ್ನು ಮಾತ್ರ ಕೊಟ್ಟಿದ್ದಾರೆ. ಆದರೆ, ಜೂ 4ರಂದು ವಾಸ್ತವ ಗೊತ್ತಾಗಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್​ ಡಬಲ್​ ಡಿಜಿಟ್ ದಾಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಸಮೀಕ್ಷೆ ಹೇಗಿದೆ?

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

Exit mobile version