ನವದೆಹಲಿ: ಜಾರಿ ನಿರ್ದೇಶನಾಲಯ (Enforcement Directorate) ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆಯು ಅಕ್ರಮ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಆದರೂ, ಇಡಿ ನಿರ್ದೇಶಕರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆಯಾಗಿದ್ದರೂ ಅವರು 2023ರ ಜುಲೈ 31ವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆಂದು ಹೇಳಿದೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ಕೋರ್ಟ್‌ಗೆ ಉತ್ತರಿಸಿದ್ದ ಕೇಂದ್ರ ಸರ್ಕಾರವು, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು. ಅಲ್ಲದೇ, ಅರ್ಜಿಯನ್ನು ವಜಾ ಮಾಡುವಂತೆ ಮನವಿ ಮಾಡಿದ್ದರು.
ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು ವಿಸ್ತರಣೆಯ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಅರ್ಹತೆಯೇ ಇಲ್ಲ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಈ ಅರ್ಜಿಯು ಯಾವುದೇ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳಿಗಿಂತ ಹೆಚ್ಚಾಗಿ ವೈಯಕ್ತಿಕ ಹಿತಾಸಕ್ತಿಯಿಂದ ಸ್ಪಷ್ಟವಾಗಿ ಪ್ರೇರಿತವಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿತ್ತು.
ಈ ಸುದ್ದಿಯನ್ನೂ ಓದಿ: ED raid | ಮಂಗಳೂರಿನ ಉದ್ಯಮಿಗೆ ಸೇರಿದ 17 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
ಕಳೆದ ನವೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದ ನಿರ್ದೇಶಕ ಎಸ್ ಕೆ ಮಿಶ್ರಾ ಅವರ ಅವಧಿಯನ್ನು ಒಂದು ವರ್ಷವರೆಗೆ ವಿಸ್ತರಣೆ ಮಾಡಿತ್ತು. ಇದು ಮೂರನೇ ಬಾರಿಗೆ ವಿಸ್ತರಿಸಿತ್ತು. ಒಟ್ಟು ಅವರ ಅಧಿಕಾರಾವಧಿಯನ್ನು 5 ವರ್ಷದವರೆಗೆ ಹಿಗ್ಗಿತ್ತು. ಸಂಪುಟ ಸಮಿತಿ ಒಪ್ಪಿಗೆಯೊಂದಿಗೆ ಜಾರಿ ನಿರ್ದೇಶನಾಲಯ ನಿರ್ದೇಶಕರಾಗಿ ಸಂಜಯ್ ಕುಮಾರ್ ಮಿಶ್ರಾ ಅವರ ಅವಧಿಯನ್ನು 18-11-2022ರಿಂದ 18-11-2023ರವರೆಗೆ ಅಥವಾ ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ವಿಸ್ತರಣಾ ಆದೇಶದಲ್ಲಿ ತಿಳಿಸಲಾಗಿತ್ತು.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.