ಫಲಕ್​​ನುಮಾ ಎಕ್ಸ್​ಪ್ರೆಸ್​​​​ ರೈಲಿನ 3 ಕೋಚ್​​ಗಳಲ್ಲಿ ಬೆಂಕಿ; ಕೆಳಗೆ ಇಳಿದು ಓಡಿದ ಪ್ರಯಾಣಿಕರು - Vistara News

ದೇಶ

ಫಲಕ್​​ನುಮಾ ಎಕ್ಸ್​ಪ್ರೆಸ್​​​​ ರೈಲಿನ 3 ಕೋಚ್​​ಗಳಲ್ಲಿ ಬೆಂಕಿ; ಕೆಳಗೆ ಇಳಿದು ಓಡಿದ ಪ್ರಯಾಣಿಕರು

VISTARANEWS.COM


on

fire In Falaknuma Express
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಕ್ಷಿಣ ರೈಲ್ವೆ ವಲಯದ ಸೂಪರ್​ ಪಾಸ್ಟ್​ ಎಕ್ಸ್​​ಪ್ರೆಸ್ ಟ್ರೇನ್ ಆಗಿರುವ​ ಫಲಕ್​​ನುಮಾ ಎಕ್ಸ್​ಪ್ರೆಸ್​ ರೈಲಿನ ಮೂರು ಕೋಚ್​​ಗಳಲ್ಲಿ ಇಂದು ಬೆಂಕಿ (Fire in Train) ಕಾಣಿಸಿಕೊಂಡಿದೆ. ಹೈದರಾಬಾದ್​ನ ಸಿಕಂದರಾಬಾದ್​-ಹೌರಾ ಮಧ್ಯೆ ಸಂಚರಿಸುವ ಈ ರೈಲು ಇಂದು ಬೊಮ್ಮಾಯ್​​ಪಲ್ಲಿ-ಪಗಾಡಿಪಲ್ಲಿ ಮಾರ್ಗದಲ್ಲಿ ಸಂಚರಿಸುವ ವೇಳೆ ಈ ಬೆಂಕಿ ಅವಘಡ (Falaknuma Express Catches Fire) ಆಗಿದೆ. ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಇದು ಮೂರೂ ಕೋಚ್​​ನಲ್ಲಿ ಇದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೈದರಾಬಾದ್​ಗೆ ವಾಪಸ್ ಕರೆದುಕೊಂಡು ಬರಲಾಗಿದೆ. ಹಾಗೇ, ಬೆಂಕಿ ಬೀಳಲು ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ರೈಲಿನ ಎಸ್​3, ಎಸ್​4 ಮತ್ತು ಎಸ್​5 ಕೋಚ್​​ಗಳಲ್ಲಿ ಕಡುಗಪ್ಪು ಹೊಗೆ ಬರಲು ಶುರುವಾಯಿತು. ಬೊಮ್ಮಾಯ್​​ಪಲ್ಲಿ ಹಳ್ಳಿಯ ಬಳಿಯೇ ರೈಲು ನಿಲ್ಲಿಸಲಾಯಿತು. ಪ್ರಯಾಣಿಕರೇ ಮುನ್ನೆಚ್ಚರಿಕೆ ವಹಿಸಿದರು. ಕೂಡಲೇ ತಮ್ಮ ಕೋಚ್​​ಗಳಿಂದ ಕೆಳಗೆ ಹಾರಿ, ಓಡಿ ಹೋದರು. ಬೆಂಕಿಯ ಕೆನ್ನಾಲಿಗೆ ಚಾಚುವ ಒಳಗೆ ಪ್ರಯಾಣಿಕರು ಪಾರಾಗಿದ್ದರು. ಹಾಗೇ, ವಿಷಯ ತಿಳಿಯುತ್ತಿದ್ದಂತೆ ಸ್ಟೇಶನ್​ ಮಾಸ್ಟರ್​​, ಡ್ಯೂಟಿಯಲ್ಲಿದ್ದ ಅಧಿಕಾರಿಗಳೆಲ್ಲ ಕೂಡಲೇ ಅಲ್ಲಿಗೆ ತೆರಳಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿಯೂ ತೆರಳಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ದುರಂತಕ್ಕೆ ಮಾನವ ಪ್ರಮಾದವೇ ಕಾರಣ ಎಂದ ತನಿಖೆ, ಯಾರು ಆ ವ್ಯಕ್ತಿ?

ಇಡೀ ರೈಲಿಗೆ ಬೆಂಕಿ ಹರಡುವುದನ್ನು ತಪ್ಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಯಿತು. ಬೆಂಕಿ ಬಿದ್ದಿದ್ದ ಕೋಚ್​ಗಳನ್ನು ರೈಲಿನಿಂದ ಬೇರ್ಪಡಿಸಲಾಯಿತು. ಅಂದಹಾಗೇ, ಈ ರೈಲಿನ ಕೋಚ್​ಗಳಿಗೆ ಬೆಂಕಿ ಬೀಳಲು ಕಾರಣವಾಗಿದ್ದು ಕಿಡಿಗೇಡಿಗಳ ಕೃತ್ಯ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಅಂದು ಕರ್ತವ್ಯದಲ್ಲಿದ್ದ ಸ್ಟೇಶನ್​ ಮಾಸ್ಟರ್​ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

NDA Meeting: ಮತ್ತೊಮ್ಮೆ ಮೋದಿ ಸರ್ಕಾರ; ಜೂ. 9ರಂದು ಪ್ರಮಾಣ ವಚನ ಸ್ವೀಕಾರ

NDA Meeting: ಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಜೂನ್‌ 9ರ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಶುಕ್ರವಾರ (ಜೂನ್‌ 7) ನಡೆದ ಎನ್‌ಡಿಎ ಒಕ್ಕೂಟದ ಸಂಸದೀಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

VISTARANEWS.COM


on

NDA Meeting
Koo

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಜೂನ್‌ 9ರ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಶುಕ್ರವಾರ (ಜೂನ್‌ 7) ನಡೆದ ಎನ್‌ಡಿಎ ಒಕ್ಕೂಟದ ಸಂಸದೀಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು (NDA Meeting).

ಹಳೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಮೋದಿ ಅವರ ಆಯ್ಕೆಗೆ ಅನುಮೋದನೆ ನೀಡಿದರು. ಸಭೆಗೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ಎನ್‌ಡಿಎ ನಾಯಕರು ಎದ್ದು ನಿಂತು, ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಬಿಜೆಪಿ ನಾಯಕರಾದ ಜೆ.ಪಿ.ನಡ್ಡಾ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಪ್ರಲ್ಹಾದ್‌ ಜೋಷಿ, ನಿರ್ಮಲಾ ಸೀತಾರಾಮನ್‌, ಯೋಗಿ ಆದಿತ್ಯನಾಥ್‌, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಜೆಡಿಯು ನಾಯಕ ನಿತೀಶ್‌ ಕುಮಾರ್‌, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌, ಏಕನಾಥ್‌ ಶಿಂದೆ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ʼʼಎನ್‌ಡಿಎ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಇದು ವಿಕಸಿತ ಯಾತ್ರೆ. ಮೋದಿ ಅವರ ಕಾರ್ಯ ವೈಖರಿಯಿಂದ ಇದು ಸಾಧ್ಯವಾಗಿದೆ. ಆಂಧ್ರ ಪ್ರದೇಶ, ಸಿಕ್ಕಿಂನಲ್ಲಿಯೂ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಿದೆʼʼ ಎಂದು ಜೆ.ಪಿ.ನಡ್ಡಾ ಹೇಳಿದರು. ʼʼಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಮೋದಿ ಪ್ರಧಾನಿ ಆಗಬೇಕು ಎನ್ನುವುದು ಎಲ್ಲರ ಆಶಯ. ಅವರು ದೇಶಕ್ಕಾಗಿ ಅವಿರತವಾಗಿ ದುಡಿಯುತ್ತಾರೆ. ಮೋದಿ ಅವರಿಂದ ಮಾತ್ರ ಬಡತನ ನಿವಾರಣೆ ಸಾಧ್ಯʼʼ ಎಂದು ಚಂದ್ರಬಾಬು ನಾಯ್ಡು ಬಣ್ಣಿಸಿದರು.

ನಾವು ಮೋದಿ ಜತೆಗೆ ಇರುತ್ತೇವೆ ಎಂದು ನಿತೀಶ್‌ ಕುಮಾರ್‌ ಭರವಸೆ ನೀಡಿದರು. ʼʼದೇಶ ಸಮರ್ಥವಾಗಿ ಮುನ್ನಡೆಯಲು ಮೋದಿ ಬೇಕು. ನನ್ನ ಬದುಕಿನ ಅದ್ಭುತ ಕ್ಷಣ ಇದುʼʼ ಎಂದು ಹೇಳಿದರು.

ಎನ್‌ಡಿಎ ನಾಯಕರನ್ನಾಗಿ ಮೋದಿ ಅವರ ಹೆಸರನ್ನು ರಾಜನಾಥ್‌ ಸಿಂಗ್‌ ಪ್ರಸ್ತಾವಿಸಿದರು. ಮೋದಿ ಹೆಸರು ಹೇಳುತ್ತಿದ್ದಂತೆ ಸಂಸದರೆಲ್ಲ ಜೈಕಾರ ಮೊಳಗಿಸಿದರು. ಪ್ರಸ್ತಾವನೆಯನ್ನು ಅಮಿತ್‌ ಶಾ, ನಿತಿನ್‌ ಗಡ್ಕರಿ, ಎಚ್‌.ಡಿ.ಕುಮಾರಸ್ವಾಮಿ, ನಿತೀಶ್‌ ಕುಮಾರ್‌ ಮತ್ತಿತರ ನಾಯಕರು ಅನುಮೋದಿಸಿದರು.

ಇಂದು ಎನ್‌ಡಿಎ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್‌ ಮತ್ತು ಆಂಧ್ರ ಪ್ರದೇಶದ ತೆಲುಗು ದೇಶಮ್‌ ಪಾರ್ಟಿ (TDP) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆದಷ್ಟು ಬೇಗ ಸರ್ಕಾರ ರಚಿಸುವಂತೆ ಆಗ್ರಹಿಸಿದ್ದರು. ಜೂನ್‌ 6ರಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿದ್ದ ನಿತೀಶ್‌ ಕುಮಾರ್‌, ʼʼಸರ್ಕಾರ ರಚನೆಯಲ್ಲಿ ಯಾವುದೇ ವಿಳಂಬವಾಗಬಾರದು. ನಾವು ಅದನ್ನು ಆದಷ್ಟು ಬೇಗ ಕಾರ್ಯ ಪ್ರವೃತ್ತರಾಗಬೇಕು” ಎಂದು ಸೂಚಿಸಿದ್ದರು. 

ಇದನ್ನೂ ಓದಿ: Election Results 2024: ರಾಮನೂರಿನಲ್ಲೇ ಬಿಜೆಪಿ ಹಿನ್ನಡೆ; ಹೀನಾಯ ಸೋಲಿಗೆ ಕಾರಣ ಏನು?

Continue Reading

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Rahul Gandhi: 42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲರು ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು.

VISTARANEWS.COM


on

defamation case rahul gandhi
Koo

ಬೆಂಗಳೂರು: ಬಿಜೆಪಿ (BJP) ಹೂಡಿರುವ ಮಾನನಷ್ಟ ಮೊಕದ್ದಮೆ (Defamation case) ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಗೆ (Rahul Gandhi) ಷರತ್ತುಬದ್ಧ ಜಾಮೀನು (Bail) ದೊರೆತಿದೆ. ಪ್ರಕರಣದ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಲಾಗಿದೆ.

42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲ ನಿಶಾನ್ ಕುಮಾರ್ ಶೆಟ್ಟಿ ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಕೆ ಸುರೇಶ್‌ (DK Suresh) ಅವರು ರಾಹುಲ್‌ ಗಾಂಧಿಗೆ 75 ಲಕ್ಷ ರೂಪಾಯಿ ಮೌಲ್ಯದ ಶ್ಯೂರಿಟಿ ಒದಗಿಸಿದರು. ಬಾಂಡ್‌ ಕಾಗದಗಳಿಗೆ ಸಹಿ ಹಾಕಿದ ಬಳಿಕ ರಾಹುಲ್‌ ಕೋರ್ಟ್‌ನಿಂದ ತೆರಳಿದರು. ಈ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸಹ ಉಪಸ್ಥಿತರಿದ್ದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

Continue Reading

ಕರ್ನಾಟಕ

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

VISTARANEWS.COM


on

uttarakhand trekking tragedy 2
Koo

ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ತ್ರತಾಲ್‌ ಶಿಖರದ (Sahstra Tal Summit) ಬಳಿ ಹಿಮಬಿರುಗಾಳಿಗೆ (Blizzard) ಸಿಕ್ಕಿ ಮೃತಪಟ್ಟ (Trekking Tragedy) 9 ಮಂದಿ ಕರ್ನಾಟಕದ ಚಾರಣಿಗರ (Trekkers) ಮೃತದೇಹಗಳು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kemepegowda internationa Airport) ಮೂಲಕ ಬೆಂಗಳೂರನ್ನು ತಲುಪಲಿವೆ. ಬದುಕುಳಿದ 13 ಇಂದು ಮುಂಜಾನೆ ಹಿಂದಿರುಗಿದರು.

ಉತ್ತರಾಖಂಡದ ಡೆಹ್ರಾಡೂನ್‌ನಿಂದ ದೇವನಹಳ್ಳಿಯ ಏರ್ಪೋರ್ಟ್‌ಗೆ ರಾತ್ರಿ 8:45ಕ್ಕೆ ಆಗಮಿಸಿದ 6E6136 ಇಂಡಿಗೋ ವಿಮಾನದಲ್ಲಿ 13 ಮಂದಿ ಚಾರಣಿಗರು ಬಂದಿಳಿದರು. ಕಾತರ ಹಾಗೂ ಆತಂಕಗಳಿಂದ ಅವರನ್ನು ಕಾಯುತ್ತಿದ್ದ ಸಂಬಂಧಿಕರು, ಸ್ನೇಹಿತರನ್ನು ಕೂಡಿಕೊಂಡರು. ತಮ್ಮ ಸಹಚಾರಣಿಗರನ್ನು ಕಣ್ಣ ಮುಂದೆಯೇ ಕಳೆದುಕೊಂಡ ದುರ್ಘಟನೆ ಹಾಗೂ ದುರ್ಭರ ಪರಿಸ್ಥಿತಿಯಲ್ಲಿ ಬದುಕುಳಿದ ಶಾಕ್‌ಗೆ ಒಳಗಾಗಿದ್ದ ಚಾರಣಿಗರು ಮೌನವಾಗಿ ಮನೆಗೆ ತೆರಳಿದ್ದು, ಯಾವುದೇ ಹೇಳಿಕೆ ನೀಡಲಿಲ್ಲ.

ಬೆಳಗ್ಗೆ 8:30ರ ಹೊತ್ತಿಗೆ ದೆಹಲಿಯಿಂದ ಬಂದು ಟರ್ಮಿನಲ್ 1ಕ್ಕೆ ತಲುಪಿದ ಇಂಡಿಗೋ 6E 6612 ವಿಮಾನದಲ್ಲಿ ಮೂವರ ಮೃತದೇಹಗಳು ಬಂದಿಳಿದಿವೆ. ಪದ್ಮಿನಿ ಹೆಗ್ಡೆ, ವೆಂಕಟೇಶ್ ಪ್ರಸಾದ್, ಆಶಾ ಸುಧಾಕರ್ ಮೃತದೇಹಗಳು ಮೊದಲ ವಿಮಾನದಲ್ಲಿ ಬಂದಿವೆ.

ಏರ್‌ಪೋರ್ಟ್ ಕಾರ್ಗೋ ಬಳಿ ಈ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದ್ದು, “ಈಗಾಗಲೇ ಮೂರು ಮೃತ ದೇಹಗಳು ಬಂದಿವೆ. ಅವುಗಳಿಗೆ ಗೌರವ ನೀಡಿ ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದೆ. ಮೃತ ದೇಹಗಳು ಬೆಂಗಳೂರಿಗೆ ತಲುಪಲು ಆಂಬ್ಯುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ. 1 ಗಂಟೆಯ ಒಳಗೆ ಎಲ್ಲಾ ಮೃತ ದೇಹಗಳು ಬರಲಿವೆ. ಮೃತದೇಹಗಳನ್ನು ಗೌರವಯುತವಾಗಿ ಕುಟುಂಬಸ್ತರಿಗೆ ಹಸ್ತಾಂತರಿಸಲಾಗುವುದು” ಎಂದು ತಿಳಿಸಿದ್ದಾರೆ.

ಮರಳಿ ಬೆಂಗಳೂರಿಗೆ ಬಂದವರು:

ಸೌಮ್ಯಾ ಕನಲೆ- 36 ವರ್ಷ
ವಿನಯ್ ಎಂಕೆ, 49 ವರ್ಷ
ಶಿವಜ್ಯೋತಿ- 46 ವರ್ಷ
ಸುಧಾಕರ್‌, 64 ವರ್ಷ
ಸ್ಮೃತಿ, 41 ವರ್ಷ
ಶೀನಾ ಲಕ್ಷ್ಮಿ, 48 ವರ್ಷ
ಮಧುಕಿರಣ್ ರೆಡ್ಡಿ- 52 ವರ್ಷ
ಜಯಪ್ರಕಾಶ್- 61 ವರ್ಷ
ಭರತ್- 53 ವರ್ಷ
ಅನಿಲ್ ಭಟ್ಟ್- 52 ವರ್ಷ
ವಿವೇಕ್ ಶ್ರೀಧರ್- 42 ವರ್ಷ
ರಿತಿಕ್ ಜಿಂದಾಲ್
ನವೀನ್ ಎ.

ಮೃತ ಚಾರಣಿಗರ ವಿವರಗಳು:

1) ಪದ್ಮಿನಿ ಹೆಗಡೆ
2) ವೆಂಕಟೇಶ್ ಪ್ರಸಾದ್
3) ಆಶಾ ಸುಧಾಕರ್
4) ಪದ್ಮನಾಭ್ ಕುಂದಾಪುರ ಕೃಷ್ಣಮೂರ್ತಿ
5) ಸಿಂಧು ವಾಕೆಕಲಂ
6) ಸುಜಾತ ಮುಂಗುರವಾಡಿ
7) ವಿನಾಯಕ್ ಮುಂಗುರವಾಡಿ
8) ಚಿತ್ರ ಪಾರ್ಟನಿಟ್
9) ಅನಿತಾ ರಂಗಪ್ಪ

ಇದನ್ನೂ ಓದಿ: Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Continue Reading

ವಾಣಿಜ್ಯ

RBI Monetary Policy: ಸತತ 8ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

RBI Monetary Policy: ಗೃಹ, ವಾಹನ ಸಾಲ ಸೇರಿ ಹಲವು ರೀತಿಯ ಸಾಲಗಾರರಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಸಿಹಿ ಸುದ್ದಿ ನೀಡಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ (Shaktikanta Das) ಅವರು ಹಣಕಾಸು ನೀತಿ ಸಭೆಯ ತೀರ್ಮಾನಗಳನ್ನು ಪ್ರಕಟಿಸಿದ್ದು, ರೆಪೋ ದರದಲ್ಲಿ (Repo Rate) ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ 6.5% ಬಡ್ಡಿ ದರವನ್ನೇ ಆರ್‌ಬಿಐ (RBI) ಮುಂದುವರಿಸಿದೆ.

VISTARANEWS.COM


on

RBI Monetary Policy
Koo

ಮುಂಬೈ: ಗೃಹ, ವಾಹನ ಸಾಲ ಸೇರಿ ಹಲವು ರೀತಿಯ ಸಾಲಗಾರರಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಸಿಹಿ ಸುದ್ದಿ ನೀಡಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ (Shaktikanta Das) ಅವರು ಹಣಕಾಸು ನೀತಿ ಸಭೆಯ (RBI Monetary Policy) ತೀರ್ಮಾನಗಳನ್ನು ಪ್ರಕಟಿಸಿದ್ದು, ರೆಪೋ ದರದಲ್ಲಿ (Repo Rate) ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ 6.5% ಬಡ್ಡಿ ದರವನ್ನೇ ಆರ್‌ಬಿಐ (RBI) ಮುಂದುವರಿಸಿದೆ. ಆರ್‌ಬಿಐ ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯನ್ನು ಜೂನ್ 5ರಂದು ಪ್ರಾರಂಭಿಸಿತ್ತು. ಇಂದು ತನ್ನ ನಿರ್ಧಾರವನ್ನು ಹಂಚಿಕೊಂಡಿದೆ. ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.

ಶಕ್ತಿಕಾಂತ ದಾಸ್‌ ಮಾತನಾಡಿ, ʼʼಹಣಕಾಸು ನೀತಿ ಸಮಿತಿಯು 4:2 ಬಹುಮತದಿಂದ ರೆಪೊ ದರವನ್ನು ಯಥಾಸ್ಥಿಯಲ್ಲಿಯೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಇದರ ಪರಿಣಾಮವಾಗಿ, ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ (SDF) ದರವು ಶೇ. 6.25 ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ (MSF) ದರ ಮತ್ತು ಬ್ಯಾಂಕ್ ದರವು ಶೇ. 6.75ರಷ್ಟು ಇರಲಿದೆʼʼ ಎಂದು ತಿಳಿಸಿದ್ದಾರೆ.

ಗೃಹ ಸಾಲದ ಮೇಲೆ ಪರಿಣಾಮ ಬೀರುವುದಿಲ್ಲ

ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆಯಾಗುವುದಿಲ್ಲ. ಇತ್ತ 2025ರ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಆರ್‌ಬಿಐ ನೀಡಿದ್ದರಿಂದ ಹೆಚ್ಚಿಸಿದ್ದರಿಂದ ಸೆನ್ಸೆಕ್ಸ್ 600 ಅಂಕ ಜಿಗಿತ ಕಂಡಿದೆ.

ರೆಪೋ ದರವನ್ನು ಬದಲಾಯಿಸದೆ ಇರಿಸುವುದರಿಂದ ಮನೆ ಖರೀದಿದಾರರು ನಿರಾಳರಾಗಲಿದ್ದಾರೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವುದು ಆರ್‌ಬಿಐಯ ಹಣಕಾಸು ನೀತಿಯ ಪ್ರಮುಖ ಗುರಿ. ಪ್ರಸ್ತುತ ಹಣದುಬ್ಬರ ದರ ವಿಶೇಷವಾಗಿ ಆಹಾರ ಹಣದುಬ್ಬರ ದರವು ಆರ್‌ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ. ರೆಪೋ ದರವನ್ನು ಕಡಿಮೆ ಮಾಡುವುದು ಆರ್ಥಿಕತೆಯಲ್ಲಿ ಹಣದುಬ್ಬರದ ಒತ್ತಡದ ಹೆಚ್ಚಳಕ್ಕೆ ಕಾರಣವಾಗಬಹುದು. ಪ್ರಸ್ತುತ ದರವನ್ನು ಕಾಯ್ದುಕೊಳ್ಳುವುದು ಹಣದುಬ್ಬರವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಸ್ವಲ್ಪ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ ಎಂದು ಆರ್‌ಬಿಐ ಹೇಳಿದೆ.

ರೆಪೋ ದರ ಎಂದರೇನು?

ದೇಶದ ವಾಣಿಜ್ಯ ಬ್ಯಾಂಕ್‌ಗಳಿಗೆ ಆರ್‌ಬಿಐ ನೀಡುವ ಸಾಲಕ್ಕೆ ವಿಧಿಸುವ ಬಡ್ಡಿದರವೇ ರೆಪೋದರ ಆಗಿದೆ. ಹಣದ ಕೊರತೆ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳು ಆರ್‌ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್‌ಬಿಐ ಬಡ್ಡಿ ವಿಧಿಸುತ್ತದೆ. ಇದನ್ನೇ ರೆಪೋ ರೇಟ್‌ ಎನ್ನುತ್ತಾರೆ. ಕೆಲವೊಮ್ಮೆ, ವಾಣಿಜ್ಯ ಬ್ಯಾಂಕ್‌ಗಳಿಂದ ಆರ್‌ಬಿಐ ಸಾಲ ಪಡೆಯತ್ತದೆ. ಆ ಸಾಲದ ಮೇಲಿನ ಬಡ್ಡಿಗೆ ರಿವರ್ಸ್‌ ರೆಪೋ ದರ ಎನ್ನುತ್ತಾರೆ. ರೆಪೋ ದರ ಏರಿಕೆಯಾದರೆ, ಬ್ಯಾಂಕುಗಳು ಕೂಡ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿಯನ್ನು ಏರಿಕೆ ಮಾಡುತ್ತವೆ. ಹಾಗಾಗಿ, ರೆಪೋ ದರವು ಸಾಲಗಾರರಿಗೆ ಪ್ರಮುಖ ಎನಿಸುತ್ತದೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Continue Reading
Advertisement
karnataka rain
ಮಳೆ35 seconds ago

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

karnataka Rain
ಮಳೆ2 mins ago

Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

T20 World Cup
ಕ್ರೀಡೆ3 mins ago

T20 World Cup : ಪಾಕಿಸ್ತಾನ ವಿರುದ್ಧದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ ಅಮೆರಿಕ ತಂಡ ಸೌರಭ್ ನೇತ್ರವಾಲ್ಕರ್ ಯಾರು?

NDA Meeting
Lok Sabha Election 202421 mins ago

NDA Meeting: ಮತ್ತೊಮ್ಮೆ ಮೋದಿ ಸರ್ಕಾರ; ಜೂ. 9ರಂದು ಪ್ರಮಾಣ ವಚನ ಸ್ವೀಕಾರ

Chetan Ahimsa says that Upendra is not intelligent he is delusional
ಸ್ಯಾಂಡಲ್ ವುಡ್21 mins ago

Chetan Ahimsa: ಉಪೇಂದ್ರ ಬುದ್ಧಿವಂತನಲ್ಲ, ಅವರಿಗೆ ಭ್ರಮೆ; ನಟ ಚೇತನ್ ಗೇಲಿ

Art exhibition
ಬೆಂಗಳೂರು30 mins ago

Art Exhibition : ಜುಲೈ 10ರವರೆಗೆ ಬೆಂಗಳೂರಿನಲ್ಲಿ ಯೂಸುಫ್, ಶಿಬು ಅರಕ್ಕಲ್ ಚಿತ್ರಗಳ ಪ್ರದರ್ಶನ

Prajwal Revanna Case
ಪ್ರಮುಖ ಸುದ್ದಿ32 mins ago

Prajwal Revanna Case: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

Gold Rate Today
ಚಿನ್ನದ ದರ32 mins ago

Gold Rate Today: ಸತತ ಎರಡನೇ ದಿನವೂ ದುಬಾರಿಯಾದ ಚಿನ್ನ; ಇಂದಿನ ದರದ ಮಾಹಿತಿ ಇಲ್ಲಿದೆ

Assault Case
ಚಿತ್ರದುರ್ಗ54 mins ago

Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

Posani Krishna Murali End of Career In Tollywood
ಟಾಲಿವುಡ್1 hour ago

Posani Krishna Murali: ಟಾಲಿವುಡ್‌ನಲ್ಲಿ ಪೋಸಾನಿ ಕೃಷ್ಣ ಮುರಳಿ ವೃತ್ತಿಜೀವನ ಅಂತ್ಯ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌