Site icon Vistara News

Farooq Abdullah | ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಲ್ಲ ಎಂದ ಫಾರೂಕ್ ಅಬ್ದುಲ್ಲಾ

farroq abdula and NC

ನವದೆಹಲಿ: ಕಾಶ್ಮೀರ ಕಣಿವೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷವಾಗಿರುವ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (National Conference) ಅಧ್ಯಕ್ಷ ಸ್ಥಾನದಿಂದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಅವರು ಕೆಳಗಿಳಿಯಲಿದ್ದಾರೆ. ಡಿಸೆಂಬರ್ 5ರಂದು ನಡೆಯಲಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸದಿರಲು ಅವರು ನಿರ್ಧರಿಸಿದ್ದಾರೆ.

ಪ್ರಸಕ್ತ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುದ್ದಿಯನ್ನು ಅಲ್ಲಗಳೆದಿರುವ ಫಾರೂಕ್ ಅಬ್ದುಲ್ಲಾ ಅವರು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಡಿಸೆಂಬರ್ 5ರಂದು ನಡೆಯಲಿರುವ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೀಗ 86 ವರ್ಷ. ಪಕ್ಷವನ್ನು ಯುವಕರು ಮುನ್ನಡೆಸಬೇಕೆಂಬುದು ನನ್ನ ಆಸೆ. ಪಕ್ಷಕ್ಕೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಲಿದ್ದೇನೆ ಎಂದು ಅಬ್ದುಲ್ಲಾ ಹೇಳಿದ್ದಾರೆ.

1981ರಿಂದಲೂ ಫಾರೂಕ್ ಅಬ್ದುಲ್ಲಾ ಅವರು ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2002ರಲ್ಲಿ ಅವರ ಪುತ್ರ ಒಮರ್ ಅಬ್ದುಲ್ಲಾ ಅವರು ಪಕ್ಷದ ಅಧ್ಯಕ್ಷರಾದರು. ಆದರೆ, ಮತ್ತೆ 2006ರಲ್ಲಿ ಫಾರೂಕ್ ಅವರೇ ಪಕ್ಷದ ನೇತೃತ್ವವನ್ನು ವಹಿಸಿಕೊಂಡಿದ್ದರು. ಏತನ್ಮಧ್ಯೆ, ಗುಪ್ಕರ್ ಒಕ್ಕೂಟದ ಮುಖ್ಯಸ್ಥನಾಗಿ ಮುಂದುವರಿಯುವುದಾಗಿ ಫಾರೂಕ್ ಅವರು ಖಚಿತಪಡಿಸಿದ್ದಾರೆ. ಗುಪ್ಕರ್ ಎಂಬುದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸೌಲಭ್ಯ ಹಾಗೂ ರಾಜ್ಯದ ಸ್ಥಾನಮಾನಕ್ಕಾಗಿ ಕಣಿವೆ ರಾಜ್ಯದ ಪ್ರಾದೇಶಿಕ ಪಕ್ಷಗಳ ಒಕ್ಕೂಟವಾಗಿದೆ.

ಇದನ್ನು ಓದಿ | President Election: ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ, ಕಾಶ್ಮೀರದಲ್ಲೇ ಕೆಲಸವಿದೆಯಂತೆ!

Exit mobile version