ನವದೆಹಲಿ: ಒತ್ತಾಯದ ಮತಾಂತರವು ಗಂಭೀರ ಸಮಸ್ಯೆಯಾಗಿದ್ದು, ವಿಸ್ತೃತ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಸೂಚಿಸಿದೆ. ಮತಾಂತರ ವಿರೋಧಿ ಕಾನೂನಿಗೆ ಸಂಬಂಧಿಸಿದಂತೆ ರಾಜ್ಯಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಸೂಚಿಸಿದೆ.
ಮುಂದಿನ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ನಿಗದಿಪಡಿಸಿದ ಜಸ್ಟೀಸ್ ಎಂ ಆರ್ ಶಾ, ಜಸ್ಟೀಸ್ ಸಿ ಟಿ ರವಿಕುಮಾರ್ ಅವರಿದ್ದ ಪೀಠವು, ಮತಾಂತರ ತಡೆ ಕೋರಿ ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಡೆಸುತ್ತಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಪಿಐಎಲ್ ಅರ್ಜಿ ಹಾಕಿದ್ದಾರೆ.
ಮತಾಂತರ ಸಂಬಂಧ ಎಲ್ಲ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಇನ್ನೂ ಕಾಲಾವಕಾಶ ಬೇಕು ಎಂದು ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದರು.
ಇದನ್ನೂ ಓದಿ | Forced conversion | ಪತ್ನಿ ವಿರುದ್ಧವೇ ಬಲವಂತದ ಮತಾಂತರ ದೂರು ನೀಡಿದ ಪತಿ