ರಾಜಸ್ಥಾನ ಮುಖ್ಯಮಂತ್ರಿಯನ್ನು ರಾವಣ ಎಂದು ಕರೆದ ಕೇಂದ್ರ ಸಚಿವರ ವಿರುದ್ಧ ಎಫ್​ಐಆರ್​ ದಾಖಲು - Vistara News

ದೇಶ

ರಾಜಸ್ಥಾನ ಮುಖ್ಯಮಂತ್ರಿಯನ್ನು ರಾವಣ ಎಂದು ಕರೆದ ಕೇಂದ್ರ ಸಚಿವರ ವಿರುದ್ಧ ಎಫ್​ಐಆರ್​ ದಾಖಲು

ರಾಜಸ್ಥಾನದಲ್ಲಿ ಈ ರಾವಣನ ರಾಜಕೀಯವನ್ನು ಕೊನೆಗೊಳಿಸಿ, ರಾಮರಾಜ್ಯ ಸ್ಥಾಪಿಸಬೇಕು. ಯಾರಿಗೆಲ್ಲ ಈ ರಾವಣನ ಆಡಳಿತ ಕೊನೆಗೊಳಿಸಬೇಕು ಎಂದಿದೆಯೋ ಅವರು ಕೈಯೆತ್ತಿ ಎಂದು ಕೇಂದ್ರ ಸಚಿವರು ಹೇಳಿದ್ದರು.

VISTARANEWS.COM


on

FIR Against Union Minister Gajendra Shekhawat Over Ravana Remark
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರನ್ನು ‘ರಾವಣ’ ಎಂದು ಕರೆದಿದ್ದ ಕೇಂದ್ರ ಜಲ ಶಕ್ತಿ ಇಲಾಖೆ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ರಾಜಸ್ಥಾನ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಸುರೇಂದ್ರ ಸಿಂಗ್​ ಅವರು ಚಿತ್ತೋರ್​ಗಢ್​ ಜಿಲ್ಲೆಯ ಪೊಲೀಸ್​ ಸ್ಟೇಶನ್​ನಲ್ಲಿ ಗಜೇಂದ್ರ ಸಿಂಗ್ ಶೇಖಾವತ್​ ವಿರುದ್ಧ ದೂರು ದಾಖಲಿಸಿದ್ದರು. ಕೇಂದ್ರ ಸಚಿವರು ಮುಖ್ಯಮಂತ್ರಿಗೆ ಅವಹೇಳನ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು.

ಚಿತ್ತೋರ್​ಗಢ್​​ನಲ್ಲಿ ನಡೆದ ಬಿಜೆಪಿ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ್ದ ಗಜೇಂದ್ರ ಸಿಂಗ್​ ಶೇಖಾವತ್, ‘ರಾವಣನಿಗೆ 10 ತಲೆಗಳಿವೆ. ಅದರಂತೆಯೇ ರಾಜಸ್ಥಾನ ಸರ್ಕಾರ ಮತ್ತು ಇಲ್ಲಿನ ರಾಜಕಾರಣದ ರಾವಣನಿಗೂ 10 ತಲೆಗಳಿವೆ. ಮಾಫಿಯಾ ರಾಜ್ಯ ಮತ್ತು ಗೂಂಡಾ ರಾಜ್ಯವನ್ನು ಈ ಸರ್ಕಾರ ಪೋಷಿಸುತ್ತಿದೆ. ಇದು ಸುಲಿಗೆ ಮಾಡುವವರ, ನಿರುದ್ಯೋಗ ಸೃಷ್ಟಿಸುವವರ, ವಿಶ್ವಾಸದ್ರೋಹ ಹರಡುವವರ ಸರ್ಕಾರ. ರಾಜಸ್ಥಾನದಲ್ಲಿ ಈ ರಾವಣನ ರಾಜಕೀಯವನ್ನು ಕೊನೆಗೊಳಿಸಿ, ರಾಮರಾಜ್ಯ ಸ್ಥಾಪಿಸಬೇಕು. ಯಾರಿಗೆಲ್ಲ ಈ ರಾವಣನ ಆಡಳಿತ ಕೊನೆಗೊಳಿಸಬೇಕು ಎಂದಿದೆಯೋ ಅವರು ಕೈಯೆತ್ತಿ’ ಎಂದು ಹೇಳಿದ್ದರು. ಹೀಗೆ ರಾಜಸ್ಥಾನ ಮುಖ್ಯಮಂತ್ರಿಯನ್ನು ರಾವಣನಿಗೆ ಹೋಲಿಸಿದ ಶೇಖಾವತ್​​ ವಿರುದ್ಧ ಕಾಂಗ್ರೆಸ್​ ನಾಯಕ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ:Rajasthan Budget: ವಿಧಾನಸಭೆಯಲ್ಲಿ ಹಳೇ ಬಜೆಟ್​ ಓದಿ ಎಡವಟ್ಟು ಮಾಡಿಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​!

ಇನ್ನು ಗಜೇಂದ್ರ ಶೇಖಾವತ್​ ಹೇಳಿಕೆಗೆ ತಿರುಗೇಟು ನೀಡಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್, ‘ಗಜೇಂದ್ರ ಶೇಖಾವತ್​ ಅವರು ನನ್ನನ್ನು ರಾವಣ ಎಂದಿದ್ದಾರೆ. ರಾವಣ ಆಡಳಿತವನ್ನು ಕೊನೆಯಾಗಿಸಬೇಕು ಎಂದಿದ್ದಾರೆ. ಒಳ್ಳೇದಾಗಲಿ, ನಾನಿದನ್ನು ಸ್ವಾಗತಿಸುತ್ತೇನೆ. ನಾನು ರಾವಣನೇ ಎಂದಿಟ್ಟುಕೊಳ್ಳೋಣ. ಹಾಗಿದ್ದ ಮೇಲೆ ನೀವು ಮರ್ಯಾದಾ ಪುರುಷೋತ್ತಮ ರಾಮನಾಗಿ. ಬಡವರಿಗೆ ಅವರ ಹಣವನ್ನು ತಿರುಗಿಸಿ ಕೊಡಿ’ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಡೆಂಗ್ಯೂಗೆ ಭಾರತೀಯ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗದಲ್ಲಿದೆ. ಈ ಹಿಂದೆ ನಡೆಸಿರುವ ಎರಡು ಪ್ರಯೋಗಗಳು ಯಶಸ್ವಿಯಾಗಿದ್ದು, ಐಸಿಎಂಆರ್ ಸಹಯೋಗದೊಂದಿಗೆ 3 ಹಂತದ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 19 ಪ್ರದೇಶಗಳಲ್ಲಿ 10,335ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕರ ಮೇಲೆ ನಡೆಯಲಿದೆ. ಈ ಲಸಿಕೆ ಯಶಸ್ವಿಯಾದರೆ ಡೆಂಗ್ಯೂ ರೋಗದಿಂದ ಉಂಟಾಗುತ್ತಿರುವ ಸಾವು ತಪ್ಪಿಸಬಹುದು.

VISTARANEWS.COM


on

By

Dengue Vaccine
Koo

ಪಂಡಿತ್ ಭಾಗವತ್ ದಯಾಳ್ ಶರ್ಮಾ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PGIMS) ರೋಹ್ಟಕ್‌ನಲ್ಲಿ ಭಾರತದ ಮೊದಲ ಸ್ಥಳೀಯ ಡೆಂಗ್ಯೂ ಲಸಿಕೆ (Dengue Vaccine) 3ನೇ ಹಂತದ ಪ್ರಯೋಗವನ್ನು ಪ್ರಾರಂಭಿಸಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಪ್ಯಾನೇಸಿಯಾ ಬಯೋಟೆಕ್ (Panacea Biotec) ಘೋಷಿಸಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಈ ಉಪಕ್ರಮವನ್ನು ಶ್ಲಾಘಿಸಿದ್ದು, ಡೆಂಗ್ಯೂ ಚಿಕೆತ್ಸೆಗಾಗಿ ಭಾರತದ ಮೊದಲ ಸ್ಥಳೀಯ ಲಸಿಕೆಯ 3 ಕ್ಲಿನಿಕಲ್ ಪ್ರಯೋಗದ ಪ್ರಾರಂಭವು ಡೆಂಗ್ಯೂ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪ್ರಗತಿಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಡೆಂಗ್ಯೂ ಲಸಿಕೆ ಅಭಿವೃದ್ಧಿಗೆ ಐಸಿಎಂಆರ್ ಮತ್ತು ಪ್ಯಾನೇಸಿಯಾ ಬಯೋಟೆಕ್ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ತಿಳಿಸಿದ ಕೇಂದ್ರ ಆರೋಗ್ಯ ಸಚಿವರು, ಈ ಪಾಲುದಾರಿಕೆಯ ಮೂಲಕ ನಾವು ನಮ್ಮ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಹೆಜ್ಜೆ ಇಡುತ್ತಿದ್ದೇವೆ. ಆರೋಗ್ಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ನಮ್ಮ ದೃಷ್ಟಿಯನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.


ಪ್ರಸ್ತುತ ದೇಶವು ಡೆಂಗ್ಯೂಗೆ ಯಾವುದೇ ಆಂಟಿವೈರಲ್ ಚಿಕಿತ್ಸೆ ಅಥವಾ ಪರವಾನಗಿ ಪಡೆದ ಲಸಿಕೆಯನ್ನು ಹೊಂದಿಲ್ಲ. ಪರಿಣಾಮಕಾರಿ ಲಸಿಕೆಯನ್ನು ಅಭಿವೃದ್ಧಿಪಡಿಸುವುದು ಸಂಕೀರ್ಣ ಮತ್ತು ತುರ್ತು ಅಗತ್ಯವಾಗಿದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ಸಿರೊಟೈಪ್‌ಗಳಲ್ಲಿ ಹೆಚ್ಚಿನ ಪರಿಣಾಮಕಾರಿತ್ವವನ್ನು ಸಾಧಿಸುವಲ್ಲಿ ಸವಾಲು ಇದೆ. ಇದು ದೇಶದ ಅನೇಕ ಪ್ರದೇಶಗಳಲ್ಲಿ ಹರಡುತ್ತಿದೆ ಎಂದರು.

ಟೆಟ್ರಾವಲೆಂಟ್ ಡೆಂಗ್ಯೂ ಲಸಿಕೆ ಸ್ಟ್ರೈನ್ (TV003/TV005) ಆರಂಭದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ (NIH), ಯುಎಸ್ ಎನಿಂದ ಅಭಿವೃದ್ಧಿಪಡಿಸಲಾಯಿತು. ಜಾಗತಿಕವಾಗಿ ಪೂರ್ವಭಾವಿ ಮತ್ತು ಕ್ಲಿನಿಕಲ್ ಪ್ರಯೋಗಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿದೆ. ಇದರ ಪ್ರಯೋಗ ಆರಂಭಿಸಿದ ಮೂರು ಭಾರತೀಯ ಕಂಪೆನಿಗಳಲ್ಲಿ ಒಂದಾದ Panacea Biotec ಸಂಪೂರ್ಣ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚು ಪ್ರಗತಿ ಸಾಧಿಸಿದೆ.

ಈ ಕೆಲಸಕ್ಕಾಗಿ ಕಂಪನಿಯು ಪ್ರಕ್ರಿಯೆಯ ಪೇಟೆಂಟ್ ಅನ್ನು ಹೊಂದಿದೆ. 2018-19ರಲ್ಲಿ ಭಾರತೀಯ ಲಸಿಕೆ ಕ್ಲಿನಿಕಲ್ ಪ್ರಯೋಗ ಹಂತ 1 ಮತ್ತು 2 ಪೂರ್ಣಗೊಂಡಿವೆ. ಇದು ಭರವಸೆಯ ಫಲಿತಾಂಶಗಳನ್ನು ನೀಡಿದೆ.
ಐಸಿಎಂಆರ್ ಸಹಯೋಗದೊಂದಿಗೆ ನಡೆಸಲಾದ ಹಂತ 3 ಕ್ಲಿನಿಕಲ್ ಪ್ರಯೋಗವು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 10,335 ಕ್ಕೂ ಹೆಚ್ಚು ಆರೋಗ್ಯವಂತ ವಯಸ್ಕ ಭಾಗವಹಿಸುವವರನ್ನು ಒಳಗೊಂಡ 19 ಪ್ರದೇಶಗಳಲ್ಲಿ ನಡೆಯಲಿದೆ.

ಇದನ್ನೂ ಓದಿ: Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

ಭಾರತವು ಡೆಂಗ್ಯೂ ರೋಗದ ಅತಿ ಹೆಚ್ಚು ಸಂಭವವಿರುವ ಟಾಪ್ 30 ದೇಶಗಳಲ್ಲಿ ಒಂದಾಗಿದೆ. ಡಬ್ಲ್ಯೂ ಹೆಚ್‌ಒ ವರದಿಯ ಪ್ರಕಾರ ಭಾರತದಲ್ಲಿ ಸುಮಾರು ಶೇ. 75-80ರಷ್ಟು ಸೋಂಕುಗಳು ಲಕ್ಷಣ ರಹಿತವಾಗಿವೆ. ಆದರೂ ಈ ವ್ಯಕ್ತಿಗಳು ಈಡಿಸ್ ಸೊಳ್ಳೆಗಳ ಕಡಿತದ ಮೂಲಕ ಸೋಂಕನ್ನು ಹರಡಬಹುದು. ರೋಗ ಲಕ್ಷಣಗಳು ಪ್ರಾಯೋಗಿಕವಾಗಿ ಸ್ಪಷ್ಟವಾಗಿ ಕಂಡುಬರುವ ಶೇ. 20-25 ಪ್ರಕರಣಗಳಲ್ಲಿ ಮಕ್ಕಳು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಮರಣದ ಅಪಾಯವೂ ಹೆಚ್ಚಾಗಿರುತ್ತದೆ.

Continue Reading

ದೇಶ

Kolkata Doctor Murder Case: ಕರ್ತವ್ಯಕ್ಕೆ ಹಾಜರಾಗಲು ಪ್ರತಿಭಟನಾನಿರತ ವೈದ್ಯರಲ್ಲಿ ಕೇಂದ್ರದ ಮನವಿ

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆಯನ್ನು ಖಂಡಿಸಿ ಇಂದು ವೈದ್ಯರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಪ್ರಸ್ತುತ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮನವಿ ಮಾಡಿದೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case)ಯನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರತೀಯ ವೈದ್ಯಕೀಯ ಸಂಘ (Indian Medical Association) ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ನಿಲ್ಲಿಸಲಿ ನೀಡಿರುವ ಕರೆಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಹೀಗಾಗಿ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಪ್ರಸ್ತುತ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ತಮ್ಮ ಕರ್ತವ್ಯಗಳನ್ನು ಪುನರಾರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of health and family welfare) ಶನಿವಾರ ಪ್ರತಿಭಟನಾನಿರತ ವೈದ್ಯರಲ್ಲಿ ಮನವಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘದ ಮನವಿಯಂತೆ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಸಮಿತಿಯನ್ನು ರಚಿಸುವುದಾಗಿ ಸಚಿವಾಲಯ ಭರವಸೆ ನೀಡಿದೆ. ಸಮಿತಿಗೆ ತಮ್ಮ ಸಲಹೆಗಳನ್ನು ನೀಡಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದೂ ತಿಳಿಸಿದೆ.

ಆರೋಗ್ಯ ಸಚಿವಾಲಯ ಹೇಳಿದ್ದೇನು?

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ಸ್ (FORDA), ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ದೆಹಲಿಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಷನ್‌ (Resident Doctors’ Associations of Government Medical Colleges and Hospitals in Delhi)ನ ಪ್ರತಿನಿಧಿಗಳ ಬೇಡಿಕೆಗಳನ್ನು ಆಲಿಸಿದ್ದೇವೆ. ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ. 26 ರಾಜ್ಯಗಳು ಈಗಾಗಲೇ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಜಾರಿಗೆ ತಂದಿವೆ ಎಂದೂ ತಿಳಿಸಿದೆ. ಹೀಗಾಗಿ ಕೂಡಲೇ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನನ್ನು ಒದಗಿಸುತ್ತಿದ್ದಾರೆ.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ಇದನ್ನೂ ಓದಿ: Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Continue Reading

ಕ್ರೈಂ

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ (sexual abuse) ಮತ್ತು ಹತ್ಯೆಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ ಸುದ್ದಿಯೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

sexual abuse
Koo

ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ (sexual abuse) ಸುದ್ದಿಯೊಂದಿದೆ. ದೇಶದಲ್ಲಿ ಪ್ರತಿ ಗಂಟೆಗೆ ನಾಲ್ಕು ಅತ್ಯಾಚಾರ (Rape Case) ಪ್ರಕರಣಗಳು ನಡೆಯುತ್ತಿದ್ದು, ಶೇ. 95 ಪ್ರಕರಣಗಳಲ್ಲಿ ತಿಳಿದಿರುವ ವ್ಯಕ್ತಿಗಳಿಂದಲೇ (Known person) ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವುದು ಆತಂಕದ ಸಂಗತಿಯಾಗಿದೆ. ಅದರಲ್ಲೂ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಪ್ರಕರಣಗಳಲ್ಲಿ ಬಲಿಪಶುಗಳಾಗಿದ್ದಾರೆ. 2017ರಿಂದ 2022ರ ನಡುವೆ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 82 ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಗೆ ಗೊತ್ತಿರುವವರಿಂದಲೇ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಗಂಟೆಗೆ ನಾಲ್ಕು ಪ್ರಕರಣ

ದೇಶದಲ್ಲಿ ಪ್ರತಿ ಗಂಟೆಗೆ ಸುಮಾರು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಇವುಗಳಲ್ಲಿ ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸಂತ್ರಸ್ತೆಯು ಅತ್ಯಾಚಾರ ನಡೆಸಿದವರನ್ನು ಬಲ್ಲವಳಾಗಿದ್ದಳು ಎಂದು ದಾಖಲೆಗಳು ಹೇಳಿವೆ.

ವಾರ್ಷಿಕ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ 2017ರಿಂದ 2022ರ ನಡುವೆ ಭಾರತದಲ್ಲಿ ಒಟ್ಟು 1.91 ಲಕ್ಷ ಅತ್ಯಾಚಾರ ಪ್ರಕರಣಗಳು ನಡೆದಿದೆ ಎನ್ನಲಾಗಿದ್ದು, 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ತಿಳಿದಿರುವ ವ್ಯಕ್ತಿಯಾಗಿದ್ದು, 9,670 ಪ್ರಕರಣಗಳಲ್ಲಿ ಅಷ್ಟೇ ಬಲಿಪಶುವಿಗೆ ತಿಳಿದಿಲ್ಲ.

18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಬಲಿಪಶುಗಳು

1.89 ಲಕ್ಷ ಪ್ರಕರಣಗಳಲ್ಲಿ 1.13 ಲಕ್ಷ ಅತ್ಯಾಚಾರ ಸಂತ್ರಸ್ತರು 18ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಹೀಗಾಗಿ ಪ್ರತಿದಿನ ದಾಖಲಾಗುವ 86 ಅತ್ಯಾಚಾರ ಪ್ರಕರಣದಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು. ಉಳಿದ ಪ್ರಕರಣಗಳು ದಿನಕ್ಕೆ 35 ಆಗಿದ್ದು, ಇತರ ವಯಸ್ಸಿನವರು ಎನ್ನಲಾಗಿದೆ.

ಕೆಲಸದ ಸ್ಥಳ ಸುರಕ್ಷಿತವೇ?

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಸರಾಸರಿಯಾಗಿ ಪ್ರತಿದಿನ ಕನಿಷ್ಠ ಒಬ್ಬ ಮಹಿಳೆ ಕೆಲಸದಲ್ಲಿ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತಿದ್ದರೆ ಎನ್ನುವುದನ್ನು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿ ಅಂಶ ತಿಳಿಸಿದೆ. 2014ರಿಂದ ಎನ್‌ಸಿಆರ್‌ಬಿ ಕಚೇರಿಯು ಐಪಿಸಿಯ ಸೆಕ್ಷನ್ 509 ಅವಮಾನದ ವರ್ಗದ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕುರಿತು ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿತು.

ಆರಂಭಿಕ ವರ್ಷಗಳಲ್ಲಿ ಅಂದರೆ 2014 ಮತ್ತು 2015ರಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳ ಮತ್ತು ಇನ್ನೊಂದು ಕೆಲಸಕ್ಕೆ ಸಂಬಂಧಿಸಿದ ಸ್ಥಳಗಳು ಎಂಬ ಎರಡು ವಿಭಿನ್ನ ವಿಭಾಗಗಳನ್ನು ಹೊಂದಿದ್ದವು. ಆದರೆ 2016 ರ ಅನಂತರ ಈ ವರ್ಗಗಳನ್ನು ಲೈಂಗಿಕ ಕಿರುಕುಳ ‘ಕೆಲಸ ಅಥವಾ ಕಚೇರಿ ಆವರಣದಲ್ಲಿ’ ಎಂಬುದಾಗಿ ವಿಲೀನಗೊಳಿಸಲಾಗಿದೆ.

2014 ಮತ್ತು 2022ರ ನಡುವೆ ಕೆಲಸ ಅಥವಾ ಕಚೇರಿ ಆವರಣದಲ್ಲಿ ಕನಿಷ್ಠ 4,231 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಆರಂಭದಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆಯು ಕಡಿಮೆಯಿತ್ತು. ಆದರೆ 2017 ರ ಅನಂತರ ಪ್ರತಿ ವರ್ಷ 400 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತವೆ.

2014, 2015 ಮತ್ತು 2016 ರಲ್ಲಿ ಎನ್‌ಸಿಆರ್‌ಬಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಆರಂಭದ ಮೂರು ವರ್ಷಗಳಲ್ಲಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು ಎರಡು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯಿದೆಯ ಅಡಿಯಲ್ಲಿ 2013ರಿಂದ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು 10ಕ್ಕಿಂತ ಹೆಚ್ಚು ಕೆಲಸಗಾರರನ್ನು ಹೊಂದಿರುವ ಎಲ್ಲಾ ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನೊಂದ ಮಹಿಳೆ ಅಥವಾ ಆಕೆಯ ಪರವಾಗಿ ಅಧಿಕಾರ ಹೊಂದಿರುವ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳದ ಲಿಖಿತ ದೂರನ್ನು ಸಲ್ಲಿಸಬಹುದು.

Continue Reading

ವೈರಲ್ ನ್ಯೂಸ್

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Bridge Collapse: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಸೇತುವೆ ಕುಸಿತ (Bridge Collapse)ದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video).

ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಗಮನಾರ್ಹ ಅಂಶ ಎಂದರೆ ಈ ಸೇತುವೆಯನ್ನೂ ಕಳೆದ 9 ವರ್ಷಗಳಿಂದ ನಿರ್ಮಿಸಲಾಗುತ್ತಿದ್ದು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಈ ಸೇತುವೆಯ ಕೆಲವೊಂದು ಭಾಗಗಳು ಈ ಹಿಂದೆ ಎರಡು ಬಾರಿ ಕುಸಿದು ಬಿದ್ದಿದ್ದವು.

ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್‌ ಇದಾಗಿದ್ದು, ಈ ಪ್ರದೇಶದ ನಿರ್ಣಾಯಕ ಕೊಂಡಿಯಾದ ವಿಕ್ರಮಶಿಲಾ ಸೇತುವೆ ಮೇಲಿನ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಎಸ್‌.ಪಿ.ಸಿಂಗ್ಲಾ ಕಂಪೆನಿ ಈ ಸೇತುವೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸೇತುವೆ ಕುಸಿತದ ಇತಿಹಾಸ

ಈ ಹಿಂದೆ ಇದೇ ಸೇತುವೆ 2022ರ ಏಪ್ರಿಲ್‌ 27ರಂದು ಮೊದಲ ಬಾರಿ ಕುಸಿದು ಬಿದ್ದಿತ್ತು. ಅದಾಗಿ ಸುಮಾರು ಒಂದು ವರ್ಷದ ಬಳಿಕ ಅಂದರೆ 2023ರ ಜೂನ್‌ 4ರಂದು ಎರಡನೇ ಬಾರಿ ಸೇತುವೆ ಕುಸಿದಿತ್ತು. ಈ ವೇಳೆ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ನೀರು ಪಾಲಾಗಿದ್ದರು.

2014ರ ಫೆಬ್ರವರಿ 23ರಂದು 3.16 ಕಿ.ಮೀ ಉದ್ದದ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿಯನ್ನು 2015ರ ಮಾರ್ಚ್ 9ರಂದು ಆರಂಭಿಸಲಾಗಿತ್ತು. ಬಿಹಾರ ಸರ್ಕಾರವು ಈ ಯೋಜನೆಗೆ 1,710 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದೂ ಒಂದು. ಅದಾಗ್ಯೂ ನಿರ್ಮಾಣ ಆರಂಭವಾಗಿ ಸುಮಾರು 9 ವರ್ಷಗಳ ನಂತರವೂ ಸೇತುವೆ ಅಪೂರ್ಣವಾಗಿ ಉಳಿದಿದೆ.

17 ದಿನದಲ್ಲಿ 10 ಸೇತುವೆ ಕುಸಿತ

ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಸೇತುವೆಗಳು ಕುಸಿದು ಬೀಳುತ್ತಿದ್ದು, ದೇಶಾದ್ಯಂತ ಚರ್ಚೆ ಹುಟ್ಟು ಹಾಕಿದೆ. ಕಳೆದ ತಿಂಗಳು 17 ದಿನಗಳಲ್ಲಿ 10 ಸೇತುವೆಗಳು ಕುಸಿದು ಬಿದ್ದಿದ್ದವು. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದರು. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading
Advertisement
tungabhadra dam gate
ಪ್ರಮುಖ ಸುದ್ದಿ13 mins ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ23 mins ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Murder Case
Latest34 mins ago

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

cm siddaramaiah congress protest
ಪ್ರಮುಖ ಸುದ್ದಿ41 mins ago

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Mohammed Shami comeback
ಕ್ರಿಕೆಟ್45 mins ago

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಕಾಲಿವುಡ್51 mins ago

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Dengue Vaccine
ಆರೋಗ್ಯ55 mins ago

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಫ್ಯಾಷನ್1 hour ago

Nail Extension Beauty Trend: ಬ್ಯೂಟಿ ಲೋಕದಲ್ಲಿ ಟ್ರೆಂಡಿಯಾದ ನೇಲ್ ಎಕ್ಸ್‌ಟೆನ್ಷನ್ ಕಾನ್ಸೆಪ್ಟ್

governor Thawarchand gehlot and CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Rakshit Shetty Copyright Infringement 20 lakhs for Delhi High Court orders deposit
ಸ್ಯಾಂಡಲ್ ವುಡ್1 hour ago

Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌