FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್! - Vistara News

ದೇಶ

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಆರೋಪದ ಮೇರೆಗೆ ಮುರಾದನಗರ ಗಂಗಾ ಕಾಲುವೆಯ ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ (FIR Filed) ದಾಖಲಾಗಿದೆ.

VISTARANEWS.COM


on

FIR Filed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಘಾಜಿಯಾಬಾದ್: ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ (CCTV camera) ಅಳವಡಿಸಿದ ಆರೋಪದ ಮೇರೆಗೆ ಘಾಜಿಯಾಬಾದ್ ನ (Ghaziabad) ದೇವಸ್ಥಾನದ (temple) ಅರ್ಚಕರೊಬ್ಬರ ವಿರುದ್ಧ ನಗರ ಪೊಲೀಸರು ಪ್ರಕರಣ (FIR Filed) ದಾಖಲಿಸಿದ್ದಾರೆ. ಮುರಾದ್‌ನಗರ (Muradnagar) ಗಂಗಾ ಕಾಲುವೆಯ (Ganga canal) ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ ದಾಖಲಾಗಿದೆ. ಭಕ್ತರು ಸಾಮಾನ್ಯವಾಗಿ ಕಾಲುವೆಯಲ್ಲಿ ಸ್ನಾನ ಮಾಡಿ ಅನಂತರ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಬರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ಮಹಿಳೆ ಮತ್ತು ಅವರ ಮಗಳು ಚಾವಣಿಯಿಲ್ಲದ ಸ್ನಾನಗೃಹದತ್ತ ಸಿಸಿಟಿವಿ ಕ್ಯಾಮೆರಾ ತೋರಿಸುತ್ತಿರುವುದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯ ಮೇಲೆ ಕೇಂದ್ರೀಕೃತವಾಗಿರುವುದನ್ನು ಮಹಿಳೆ ಗಮನಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ (ಗ್ರಾಮೀಣ) ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದ ಡಿಸ್‌ಪ್ಲೇಯು ಅರ್ಚಕರ ಮೊಬೈಲ್ ಫೋನ್‌ಗೆ ಲಿಂಕ್ ಮಾಡಲ್ಪಟ್ಟಿದೆ. ಅದರಲ್ಲಿ ಅವರು ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ವೀಕ್ಷಿಸುತ್ತಾರೆ ಎಂದು ಡಿಸಿಪಿ ಹೇಳಿದರು. ಕ್ಯಾಮೆರಾವನ್ನು ಗಮನಿಸಿದ ಮಹಿಳೆ ತಕ್ಷಣ ಅರ್ಚಕ ಮಹಂತ್ ಗೋಸ್ವಾಮಿ ಅವರನ್ನು ಸಂಪರ್ಕಿಸಿ ಸಿಸಿಟಿವಿ ಕ್ಯಾಮೆರಾದ ಬಗ್ಗೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಂತ್ ಮಹಿಳೆಯ ಮೇಲೆ ನಿಂದಿಸಲು ಪ್ರಾರಂಭಿಸಿದರು ಮತ್ತು ಕ್ಯಾಮೆರಾದ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಡಿಸಿಪಿ ಯಾದವ್ ಹೇಳಿದ್ದಾರೆ.

ದೂರು ಪಡೆದ ಅನಂತರ ಮುರಾದನಗರ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ಅರ್ಚಕನನ್ನು ಬಂಧಿಸಲು ಪೊಲೀಸ್ ತಂಡ ದೇವಸ್ಥಾನಕ್ಕೆ ಬಂದಾಗ ಆತ ಅಲ್ಲಿ ಇರಲಿಲ್ಲ ಎಂದು ಡಿಸಿಪಿ ತಿಳಿಸಿದರು. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಕ್ರಿಮಿನಲ್ ಹಲ್ಲೆ), 354 ಸಿ (ಖಾಸಗಿ ಕೃತ್ಯದಲ್ಲಿ ತೊಡಗಿರುವ ಮಹಿಳೆಯರ ಚಿತ್ರವನ್ನು ವೀಕ್ಷಿಸುವುದು ಅಥವಾ ಸೆರೆಹಿಡಿಯುವುದು), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರ್ಚಕನನ್ನು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Anant Radhika Wedding: ಅನಂತ್‌ ಅಂಬಾನಿ ಮದುವೆ ಖರ್ಚು 5000 ಕೋಟಿ ರೂ! ಅವರ ಸಂಪತ್ತಿಗೆ ಹೋಲಿಸಿದರೆ ಇದು ಸಣ್ಣ ಮೊತ್ತ!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಪೂರ್ಣ ವಿವಾಹದ (Anant Radhika Wedding) ಅಂದಾಜು ವೆಚ್ಚವು 4,000- 5,000 ಕೋಟಿ ರೂಪಾಯಿಗಳಷ್ಟಿದೆ. ಇದು ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯದ ಶೇಕಡಾ 0.5 ಆಗಿದೆ. ಆದರೆ ಇದು ಅಂಬಾನಿ ಕುಟುಂಬದ ಒಟ್ಟು ಸಂಪತ್ತಿನ ಶೇಕಡಾವಾರು ಪ್ರಮಾಣವನ್ನು ಗಮನಿಸಿದರೆ ಸರಾಸರಿ ಭಾರತೀಯ ಕುಟುಂಬಗಳು ಖರ್ಚು ಮಾಡುವುದಕ್ಕಿಂತ ಕಡಿಮೆ ಎನ್ನುತ್ತಾರೆ ಆರ್ಥಿಕ ತಜ್ಞರು. ಈ ಕುರಿತ ವರದಿ ಇಲ್ಲಿದೆ.

VISTARANEWS.COM


on

By

Anant Radhika Wedding
Koo

ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ (mukesh ambani) ತಮ್ಮ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕೆವನ್ನು (Anant Radhika Wedding) ಅದ್ಧೂರಿಯಾಗಿ ನಡೆಸುತ್ತಿರುವುದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯ ಸುದ್ದಿಯಾಗಿದೆ. ವಿವಾಹದ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ!

ಫೋರ್ಬ್ಸ್ 2024ರ ವರದಿ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 10,18,612 ಕೋಟಿ ರೂ. ಆಗಿದೆ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.


ಮದುವೆಯ ಪೂರ್ವಭಾವಿಯಾಗಿ ಗುಜರಾತ್‌ನ ಜಾಮ್‌ನಗರದಲ್ಲಿ ಮೊದಲ ಕಾರ್ಯಕ್ರಮಗಳು ನಡೆದಿತ್ತು. ಬಳಿಕ ಜೂನ್‌ನಲ್ಲಿ ಇಟಲಿಯಿಂದ ಫ್ರಾನ್ಸ್‌ಗೆ ಐಷಾರಾಮಿ ವಿಹಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಾಹ ಕಾರ್ಯಕ್ರಮಗಳನ್ನು ಮಹಾರಾಷ್ಟ್ರದ ಮುಂಬಯಿನಲ್ಲಿ ನಡೆಯುತ್ತಿದೆ.

ಮದುವೆಯ ವೆಚ್ಚ ಎಷ್ಟು?

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಪೂರ್ಣ ವಿವಾಹದ ಅಂದಾಜು ವೆಚ್ಚವು 4,000- 5,000 ಕೋಟಿ ರೂಪಾಯಿಗಳಷ್ಟಿದೆ. ಇದು ಮುಕೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯದ ಶೇ. 0.05 ಆಗಿದೆ. ಆದರೆ ಇದು ಅಂಬಾನಿ ಕುಟುಂಬದ ಒಟ್ಟು ಸಂಪತ್ತಿನ ಶೇಕಡಾವಾರು ಪ್ರಮಾಣವನ್ನು ಗಮನಿಸಿದರೆ ಸರಾಸರಿ ಭಾರತೀಯ ಕುಟುಂಬಗಳು ಖರ್ಚು ಮಾಡುವುದಕ್ಕಿಂತ ಕಡಿಮೆ ಖರ್ಚು ಮಾಡುತ್ತಿದೆ ಎನ್ನುತ್ತಾರೆ ಎನ್‌ಸಿ ಫೈನಾನ್ಶಿಯಲ್ ಅಡ್ವೈಸರಿ ಸರ್ವಿಸಸ್‌ನ ಸಂಸ್ಥಾಪಕ ನಿತಿನ್ ಚೌಧರಿ.


ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಧಾಮ್‌ಧೂಮ್‌ ವಿವಾಹದ ಒಳನೋಟಗಳನ್ನು ಹಂಚಿಕೊಂಡಿರುವ ಅವರು, ಕುಟುಂಬದ ಒಟ್ಟು ನಿವ್ವಳ ಮೌಲ್ಯದ ಶೇಕಡಾವಾರು ಗಮನಿಸಿದರೆ, ಅಂಬಾನಿ ಕುಟುಂಬವು ಖರ್ಚು ಮಾಡುವ ವೆಚ್ಚವು ಸರಾಸರಿ ಭಾರತೀಯ ಕುಟುಂಬವು ತಮ್ಮ ಮಕ್ಕಳ ಮದುವೆಗೆ ಎಷ್ಟು ಖರ್ಚು ಮಾಡುತ್ತಿದೆ ಎಂಬ ಬಗ್ಗೆ ಕುತೂಹಲ ಮೂಡಿಸುತ್ತದೆ.

50 ಲಕ್ಷದಿಂದ 1 ಕೋಟಿ ರೂಪಾಯಿ ನಿವ್ವಳ ಆದಾಯ ಮೌಲ್ಯ ಹೊಂದಿರುವ ಕುಟುಂಬವು ತಮ್ಮ ಮಕ್ಕಳ ಮದುವೆಗೆ 10-15 ಲಕ್ಷ ರೂಪಾಯಿ ಖರ್ಚು ಮಾಡಲು ಹಿಂಜರಿಯುವುದಿಲ್ಲ. ಅಂತೆಯೇ, ಸುಮಾರು 10 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯವನ್ನು ಹೊಂದಿರುವ ಸುಸ್ಥಿತಿಯಲ್ಲಿರುವ ಕುಟುಂಬವು ಮದುವೆಗೆ 50 ಲಕ್ಷದಿಂದ 1.5 ಕೋಟಿ ರೂಪಾಯಿಗಳ ನಡುವೆ ಸುಲಭವಾಗಿ ಖರ್ಚು ಮಾಡುತ್ತದೆ. ಸಾಮಾನ್ಯ ಆದಾಯದ ಕುಟುಂಬಗಳು ಕೂಡ ತಮ್ಮ ಮಕ್ಕಳ ಮದುವೆಯನ್ನು ಸಡಗರದಿಂದಲೇ ನಡೆಸುತ್ತವೆ. ಈ ಎಲ್ಲಾ ಅಂಕಿಅಂಶಗಳನ್ನು ಶೇಕಡಾವಾರು ಪ್ರಮಾಣದಲ್ಲಿ ನೋಡಿದಾಗ ಯಾವುದೇ ಭಾರತೀಯ ಕುಟುಂಬವು ಮದುವೆಗೆ ತಮ್ಮ ಒಟ್ಟು ಸಂಪತ್ತಿನ ಶೇಕಡಾ 5ರಿಂದ 15ರಷ್ಟು ವ್ಯಯಿಸುತ್ತದೆ ಎನ್ನಬಹುದು. ಹೀಗಾಗಿ ಅಂಬಾನಿ ಕುಟುಂಬ ಮಾಡುತ್ತಿರುವ ಖರ್ಚು ಸಹಜ ಎನ್ನಬಹುದು.

ಅಂಬಾನಿ ಮದುವೆಯ ಅಂದಾಜು ವೆಚ್ಚ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಬಗ್ಗೆ ವಿಭಿನ್ನ ಅಂದಾಜುಗಳನ್ನು ಹಾಕಿದ್ದರೂ ಇದು ಖಂಡಿತವಾಗಿಯೂ ವ್ಯವಸ್ಥೆಗಳು, ಕಲಾವಿದರು ಮತ್ತು ವೈಭವದ ಪ್ರಮಾಣವನ್ನು ಗಮನಿಸಿದರೆ ಸಾವಿರಾರು ಕೋಟಿಗಳಷ್ಟು ವೆಚ್ಚವಾಗುತ್ತದೆ. 4,000-5,000 ಕೋಟಿ ರೂ. ಅಂದಾಜು ಮಾಡಬಹುದಾಗಿದೆ.


ಇದನ್ನೂ ಓದಿ: Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

ಫೋರ್ಬ್ಸ್ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 2024 ರಲ್ಲಿ 10,28,544 ಕೋಟಿ ರೂ. ಗಳಾಗಿದೆ. ಇದರಲ್ಲಿ 5,000 ಕೋಟಿ ರೂ. ಗಳನ್ನು ವೆಚ್ಚವೆಂದು ಪರಿಗಣಿಸಿದರೆ ಇದು ಸರಿಸುಮಾರು 6 ಬಿಲಿಯನ್ ಡಾಲರ್ ಆಗಿರುತ್ತದೆ. ಅದನ್ನು ಶೇಕಡಾವಾರು ಪ್ರಮಾಣದಲ್ಲಿ ಹೇಳುವುದಾದರೆ ಇದು ಅಂಬಾನಿ ಕುಟುಂಬದ ನಿವ್ವಳ ಮೌಲ್ಯದ ಸರಿಸುಮಾರು ಶೇ. 0.5 ರಷ್ಟಾಗುತ್ತದೆ. ಹಾಗೆ ಲೆಕ್ಕ ಹಾಕಿ ನೋಡಿದರೆ ಅಂಬಾನಿ ಕುಟುಂಬ ಮಾಡುತ್ತಿರುವ ಖರ್ಚು ಸಾಮಾನ್ಯ ಭಾರತೀಯ ಕುಟುಂಬಗಳು ಮಾಡುತ್ತಿರುವ ಸರಾಸರಿ ಖರ್ಚಿಗಿಂತ ಕಡಿಮೆ ಎನ್ನುತ್ತಾರೆ ಆರ್ಥಿಕ ಪರಿಣತರು.

Continue Reading

ದೇಶ

Emergency: ತುರ್ತು ಪರಿಸ್ಥಿತಿ ಕರಾಳ ನೆನಪು; ಜೂನ್‌ 25ಅನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಘೋಷಿಸಿದ ಕೇಂದ್ರ

Emergency: ಪ್ರತಿವರ್ಷ ಜೂನ್‌ 25ರಂದು ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಆಚರಿಸಲಾಗುತ್ತದೆ. ಆ ಮೂಲಕ ತುರ್ತು ಪರಿಸ್ಥಿತಿ ವೇಳೆ ಸಾವು-ನೋವು ಅನುಭವಿಸಿದ ಲಕ್ಷಾಂತರ ಜನರ ಹೋರಾಟ, ತ್ಯಾಗವನ್ನು ಸ್ಮರಿಸಲಾಗುತ್ತದೆ ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಮಿತ್‌ ಶಾ ಅವರು ಪೋಸ್ಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಮಾಹಿತಿ ನೀಡಿದ್ದಾರೆ.

VISTARANEWS.COM


on

Emergency
Koo

ನವದೆಹಲಿ: 1975ರ ಜೂನ್‌ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಕಾರಣದಿಂದಾಗಿ ಜೂನ್‌ 25ಅನ್ನು ಸಂವಿಧಾನ ಹತ್ಯಾ ದಿವಸ (Samvidhaan Hatya Diwas) ಎಂಬುದಾಗಿ ಕೇಂದ್ರ ಸರ್ಕಾರ (Central Government) ಘೋಷಿಸಿದೆ. ಪ್ರತಿವರ್ಷ ಜೂನ್‌ 25ರಂದು ದೇಶಾದ್ಯಂತ ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಆಚರಿಸಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರತಿವರ್ಷ ಜೂನ್‌ 25ರಂದು ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಆಚರಿಸಲಾಗುತ್ತದೆ. ಆ ಮೂಲಕ ತುರ್ತು ಪರಿಸ್ಥಿತಿ ವೇಳೆ ಸಾವು-ನೋವು ಅನುಭವಿಸಿದ ಲಕ್ಷಾಂತರ ಜನರ ಹೋರಾಟ, ತ್ಯಾಗವನ್ನು ಸ್ಮರಿಸಲಾಗುತ್ತದೆ. ಅಲ್ಲದೆ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಕಾಂಗ್ರೆಸ್‌ ಹೇಗೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿತು ಎಂಬುದನ್ನು ಜನರಿಗೆ ತಿಳಿಸಲಾಗುತ್ತದೆ” ಎಂಬುದಾಗಿ ಮಾಹಿತಿ ನೀಡಿದರು.

“1975ರ ಜೂನ್‌ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವ ಮೂಲಕ ತಮ್ಮಲ್ಲಿರುವ ಸರ್ವಾಧಿಕಾರಿ ಮನಸ್ಥಿತಿಯನ್ನು ಜಗತ್ತಿಗೆ ತೋರಿಸಿದರು. ತುರ್ತು ಪರಿಸ್ಥಿತಿ ಹೇರುವ ಮೂಲಕ ಅವರು ಪ್ರಜಾಪ್ರಭುತ್ವದ ಆತ್ಮದ ಮೇಲೆಯೇ ದಾಳಿ ನಡೆಸಿದರು. ದೇಶದಲ್ಲಿ ಲಕ್ಷಾಂತರ ಜನರನ್ನು ಕಾರಣವೇ ಇಲ್ಲದೆ ಬಂಧಿಸಲಾಯಿತು. ಮಾಧ್ಯಮ ಸ್ವಾತಂತ್ರ್ಯವನ್ನು ಕಸಿಯಲಾಯಿತು. ಆದರೂ, ಲಕ್ಷಾಂತರ ಜನ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವವನ್ನು ಉಳಿಸಿದರು” ಎಂಬುದಾಗಿ ಅಮಿತ್‌ ಶಾ ಪೋಸ್ಟ್‌ ಮಾಡಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ವಿರುದ್ಧ ಕುಪಿತಗೊಂಡಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು 1975ರ ಜೂನ್‌ 25ರಂದು ತುರ್ತು ಪರಿಸ್ಥಿತಿ ಘೋಷಿಸಿದ್ದರು. 21 ತಿಂಗಳು ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ಇದೇ ವೇಳೆ ಲಕ್ಷಾಂತರ ಜನರನ್ನು ಜೈಲಿಗೆ ಕಳುಹಿಸಲಾಗಿತ್ತು. ಮಾಧ್ಯಮ ಸಂಸ್ಥೆಗಳನ್ನು ಮುಚ್ಚಲಾಗಿತ್ತು. ತಮ್ಮ ವಿರುದ್ಧ ವರದಿ ಪ್ರಕಟಿಸುವ ಪತ್ರಿಕೆಗಳನ್ನು ಮುಚ್ಚಲು ಇಂದಿರಾ ಗಾಂಧಿ ಆದೇಶಿಸಿದ್ದರು. ಜನರ ಹಕ್ಕುಗಳನ್ನು ಕಸಿಯಲಾಗಿತ್ತು. ಹಾಗಾಗಿ, ತುರ್ತು ಪರಿಸ್ಥಿತಿಯು ದೇಶದ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಎನಿಸಿದೆ.

ಇದನ್ನೂ ಓದಿ: Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

Continue Reading

ದೇಶ

Earthquake: ಜಮ್ಮು-ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ; ಮನೆಯಿಂದ ಓಡಿಬಂದ ಜನ

Earthquake: ಬಾರಾಮುಲ್ಲಾ ಪ್ರದೇಶದಲ್ಲಿ ಶುಕ್ರವಾರ (ಜುಲೈ 12) ಮಧ್ಯಾಹ್ನ 12.26ರ ಸುಮಾರಿಗೆ ಭೂಮಿ ಕಂಪಿಸಿದೆ. ಜನರ ಮನೆಗಳಲ್ಲಿರುವ ಫ್ಯಾನ್‌ ಹಾಗೂ ಮೇಜುಗಳು ಅಲುಗಾಡಿದ ಕಾರಣ ಜನ ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ. ಭೂಮಿಯ 10 ಕಿಲೋಮೀಟರ್‌ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Earthquake
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಬಾರಾಮುಲ್ಲಾದಲ್ಲಿ ಭಾರಿ ಭೂಕಂಪ (Earthquake) ಸಂಭವಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರಿಕ್ಟರ್‌ ಮಾಪನದಲ್ಲಿ 4.1 ತೀವ್ರತೆ ದಾಖಲಾಗಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಲೇ ಜನ ಮನೆಯಿಂದ ಹೊರಗೆ ಬಂದಿದ್ದಾರೆ. ಕೆಲ ಗಂಟೆಗಳ ಬಳಿಕವೇ ಅವರು ಮನೆಗೆ ಹೋಗಿದ್ದಾರೆ. ಆದಾಗ್ಯೂ, ಪ್ರಾಣಾಪಾಯ ಸೇರಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾರಾಮುಲ್ಲಾ ಪ್ರದೇಶದಲ್ಲಿ ಶುಕ್ರವಾರ (ಜುಲೈ 12) ಮಧ್ಯಾಹ್ನ 12.26ರ ಸುಮಾರಿಗೆ ಭೂಮಿ ಕಂಪಿಸಿದೆ. ಜನರ ಮನೆಗಳಲ್ಲಿರುವ ಫ್ಯಾನ್‌ ಹಾಗೂ ಮೇಜುಗಳು ಅಲುಗಾಡಿದ ಕಾರಣ ಜನ ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ. ಭೂಮಿಯ 10 ಕಿಲೋಮೀಟರ್‌ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲ ತಿಂಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ ಸೇರಿ ಹಲವೆಡೆ ಭೂಕಂಪ ಸಂಭವಿಸಿತ್ತು.

ಚೀನಾದಲ್ಲಿ ಕೆಲ ತಿಂಗಳ ಹಿಂದಷ್ಟೇ ಸಂಭವಿಸಿದ್ದ ಭೂಕಂಪದಲ್ಲಿ 100ಕ್ಕೂ ಅಧಿಕ ಜನ ಮೃತಪಟ್ಟು, ಸಾವಿರಾರು ನಾಗರಿಕರು ಗಾಯಗೊಂಡಿದ್ದರು. ಜಪಾನ್‌ನಲ್ಲೂ ಹೊಸ ವರ್ಷದ ದಿನವೇ ಭೂಕಂಪ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಚೀನಾದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿತ್ತು. ಅಫಘಾನಿಸ್ತಾನ, ಪಾಕಿಸ್ತಾನ, ಮ್ಯಾನ್ಮಾರ್‌ ಸೇರಿ ಹಲವೆಡೆ ಭೂಕಂಪ ಸಂಭವಿಸಿದರೆ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪದ ಅನುಭವವಾಗುವುದು ಸಾಮಾನ್ಯವಾಗಿದೆ.

ನೇಪಾಳದಲ್ಲೂ ಕಳೆದ ವರ್ಷ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಸಾವಿರಾರು ಕಟ್ಟಡಗಳು ಧರೆಗುರುಳಿದ್ದ ಕಾರಣ ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿತ್ತು.

ಇದನ್ನೂ ಓದಿ: Earthquake today : ಹಿಮಾಚಲ ಪ್ರದೇಶದಲ್ಲಿ 5.3 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ

Continue Reading

ದೇಶ

Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ!

Kangana Ranaut: ಮಂಡಿ ಕ್ಷೇತ್ರದಲ್ಲಿ ನನ್ನನ್ನು ಭೇಟಿಯಾಗಲು ಬರುವವರು ಜತೆಗೆ ಆಧಾರ್‌ ಕಾರ್ಡ್‌ ತರಬೇಕು. ನೀವು ಯಾವುದೇ ರೀತಿಯ ತೊಂದರೆ ಅನುಭವಿಸದರಿಲು ನಿಮ್ಮ ಕೆಲಸದ ಕುರಿತು ಪತ್ರದಲ್ಲಿ ಬರೆದುಕೊಂಡು ಬರಬೇಕು ಎಂದು ಕಂಗನಾ ರಣಾವತ್‌ ಅವರು ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Kangana Ranaut
Koo

ಶಿಮ್ಲಾ: ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ಗೆಲುವು ಸಾಧಿಸಿ, ಈಗ ಸಂಸದೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಈಗ ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದ ಜನರು ನನ್ನನ್ನು ಭೇಟಿಯಾಗಲು ಬರುವಾಗ ಆಧಾರ್‌ ಕಾರ್ಡ್‌ ತರಬೇಕು” ಎಂದು ಅವರು ಹೇಳಿದ್ದು, ಕಾಂಗ್ರೆಸ್‌ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

“ಹಿಮಾಚಲ ಪ್ರದೇಶಕ್ಕೆ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ಮಂಡಿ ಕ್ಷೇತ್ರದಲ್ಲಿ ನನ್ನನ್ನು ಭೇಟಿಯಾಗಲು ಬರುವವರು ಜತೆಗೆ ಆಧಾರ್‌ ಕಾರ್ಡ್‌ ತರಬೇಕು. ನೀವು ಯಾವುದೇ ರೀತಿಯ ತೊಂದರೆ ಅನುಭವಿಸದರಿಲು ನಿಮ್ಮ ಕೆಲಸದ ಕುರಿತು ಪತ್ರದಲ್ಲಿ ಬರೆದುಕೊಂಡು ಬರಬೇಕು” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಕಂಗನಾ ರಣಾವತ್‌ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕ, ಕಳೆದ ಚುನಾವಣೆಯಲ್ಲಿ ಸೋಲನುಭವಿಸಿದ್ದ ವಿಕ್ರಮಾದಿತ್ಯ ಸಿಂಗ್‌ ಅವರು ತಿರುಗೇಟು ನೀಡಿದ್ದು, “ನಾನು ಜನರ ಪರವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತರಬೇಕಿಲ್ಲ” ಎಂದಿದ್ದಾರೆ.

“ಜನಪ್ರತಿನಿಧಿಗಳಾದವರು ಜನರನ್ನು ಭೇಟಿ ಮಾಡಲು ಹಿಂಜರಿಯಬಾರದು ಹಾಗೂ ಅದು ಅವರ ಜವಾಬ್ದಾರಿಯಾಗಿದೆ. ರಾಜ್ಯದ ಪ್ರತಿಯೊಬ್ಬರೂ ಜನಪ್ರತಿನಿಧಿಗಳನ್ನು ಭೇಟಿಯಾಗಬಹುದು. ಸಣ್ಣ ಕೆಲಸ ಇರಲಿ, ದೊಡ್ಡ ಕೆಲಸ ಇರಲಿ, ನೀತಿಗಳ ಕುರಿತೇ ಇರಲಿ ಅಥವಾ ವೈಯಕ್ತಿಕ ಕೆಲಸಗೇ ಇರಲಿ, ಪ್ರತಿಯೊಬ್ಬರೂ ಜನಪ್ರತಿನಿಧಿಗಳನ್ನು ಭೇಟಿಯಾಗಬೇಕು ಹಾಗೂ ಅದಕ್ಕೆ ಜನಪ್ರತಿನಿಧಿಗಳು ಮುಕ್ತ ಅವಕಾಶ ನೀಡಬೇಕು” ಎಂದಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕಂಗನಾ ರಣಾವತ್‌ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದರು

“ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Continue Reading
Advertisement
ಕರ್ನಾಟಕ51 seconds ago

Cauvery Water Dispute: ತಮಿಳುನಾಡಿಗೆ ನೀರು; CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ, ಜು.14ಕ್ಕೆ ಸರ್ವಪಕ್ಷ ಸಭೆ

Murder Case
ಬೆಂಗಳೂರು5 mins ago

Murder Case : ಖಾಸಗಿ ಕ್ಷಣಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರೇಯಸಿಯ ಮಗುವನ್ನೇ ಕೊಂದ ಪಾಪಿ

Anant Radhika Wedding
ವಾಣಿಜ್ಯ6 mins ago

Anant Radhika Wedding: ಅನಂತ್‌ ಅಂಬಾನಿ ಮದುವೆ ಖರ್ಚು 5000 ಕೋಟಿ ರೂ! ಅವರ ಸಂಪತ್ತಿಗೆ ಹೋಲಿಸಿದರೆ ಇದು ಸಣ್ಣ ಮೊತ್ತ!

James Anderson
ಕ್ರೀಡೆ25 mins ago

James Anderson: 22 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಜೇಮ್ಸ್​ ಆ್ಯಂಡರ್ಸನ್; ಭಾವನಾತ್ಮಕವಾಗಿ ಹಾರೈಸಿದ ಸಚಿನ್

Bear Attack
ವಿಜಯನಗರ46 mins ago

Bear Attack : ವಿಜಯನಗರದ ಪಾರ್ಕ್‌, ಸ್ಟೇಡಿಯಂ‌ನಲ್ಲಿ ಸುತ್ತಾಡಿದ ಕರಡಿ; ದಿಕ್ಕಾಪಾಲಾಗಿ ಓಡಿದ ಜನರು

ED Raid
ಕರ್ನಾಟಕ51 mins ago

ED Raid: ಸತತ 7 ಗಂಟೆ ಇಡಿ ವಿಚಾರಣೆ ಬಳಿಕ ಮಾಜಿ ಸಚಿವ ನಾಗೇಂದ್ರ ಬಂಧನ; ಕೋರ್ಟ್‌ಗೆ ಹಾಜರುಪಡಿಸಲು ಸಿದ್ಧತೆ

Emergency
ದೇಶ56 mins ago

Emergency: ತುರ್ತು ಪರಿಸ್ಥಿತಿ ಕರಾಳ ನೆನಪು; ಜೂನ್‌ 25ಅನ್ನು ‘ಸಂವಿಧಾನ ಹತ್ಯಾ ದಿವಸ’ ಎಂದು ಘೋಷಿಸಿದ ಕೇಂದ್ರ

Shiva Rajkumar karataka damanaka In ott
ಸ್ಯಾಂಡಲ್ ವುಡ್1 hour ago

Shiva Rajkumar: ಶಿವಣ್ಣನ ಬರ್ತ್‌ಡೇ ದಿನ, ಬರೋಬ್ಬರಿ 4 ತಿಂಗಳ ಬಳಿಕ ಒಟಿಟಿಗೆ ʻಕರಟಕ ದಮನಕʼ ಎಂಟ್ರಿ!

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

BS Yediyurappa
ಕರ್ನಾಟಕ1 hour ago

BS Yediyurappa: ಪೋಕ್ಸೊ ಕೇಸ್‌ನಲ್ಲಿ ಖುದ್ದು ಹಾಜರಿಯಿಂದ ಬಿಎಸ್‌ವೈಗೆ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜು.26ಕ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌