Site icon Vistara News

Fire Accident: ಹೈದರಾಬಾದ್‌ನಲ್ಲಿ ಅಗ್ನಿ ಆಕಸ್ಮಿಕ, 9 ಜನರ ದಾರುಣ ಸಾವು

fire accident hyderabad

ಹೈದರಾಬಾದ್:‌ ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ಅಪಾರ್ಟ್‌ಮೆಂಟ್ ಸಂಕೀರ್ಣದ ಗೋಡೌನ್‌ನಲ್ಲಿ ಸೋಮವಾರ ಬೆಂಕಿ ಆಕಸ್ಮಿಕ (Fire Accident, Fire tragedy) ಸಂಭವಿಸಿದ್ದು, ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಅಗ್ನಿ ಅವಘಡ ಸಂಭವಿಸಿದ ಅಪಾರ್ಟ್‌ಮೆಂಟ್ ಸಮುಚ್ಚಯ ನಾಂಪಲ್ಲಿಯ ಬಜಾರ್‌ಘಾಟ್‌ನಲ್ಲಿದೆ ಎಂದು ಕೇಂದ್ರ ವಲಯ ಡಿಸಿಪಿ ವೆಂಕಟೇಶ್ವರ್ ರಾವ್ ತಿಳಿಸಿದ್ದಾರೆ. ಐದು ಅಂತಸ್ತಿನ ಕಟ್ಟಡದಲ್ಲಿ ಮೆಕ್ಯಾನಿಕಲ್ ಅಂಗಡಿ ಮತ್ತು ನೆಲ ಅಂತಸ್ತಿನಲ್ಲಿ ಕೆಮಿಕಲ್ ಗೋಡೌನ್ ಇತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಕೆಮಿಕಲ್ ಗೋಡೌನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

“ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಲಿನ ಮಹಡಿಗಳಲ್ಲಿ ವಾಸಿಸುವ ಜನರನ್ನು ಕಿಟಕಿಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಇತರ ಮಹಡಿಗಳಿಗೂ ವ್ಯಾಪಿಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಾರು ರಿಪೇರಿ ಮಾಡುವಾಗ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಯ ನಡುವೆ ನಡೆಸಲಾದ ಧೈರ್ಯಶಾಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಒಂದು ಮಗು ಮತ್ತು ಮಹಿಳೆಯನ್ನು ಕಟ್ಟಡದಿಂದ ಹೊರತೆಗೆಯುವುದರ ವಿಡಿಯೋ ಫೂಟೇಜ್‌ ಲಭ್ಯವಾಗಿದೆ.

ಹೈದರಾಬಾದ್‌ನಲ್ಲಿ ನಡೆದ ಮತ್ತೊಂದು ಅಗ್ನಿ ಅವಘಡದಲ್ಲಿ, ಓಲ್ಡ್ ಸಿಟಿಯ ಮೀರ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಒಂದು ಚಪ್ಪಲಿ ಗೋಡೌನ್‌ ಸೇರಿದಂತೆ ಐದು ಗೋಡೌನ್‌ಗಳಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಎರಡು ಮತ್ತು ಮೂರನೇ ಮಹಡಿಯಲ್ಲಿ ಬೆಂಕಿ ವ್ಯಾಪಿಸಿದೆ. ಭಾನುವಾರ ಸಂಜೆಯ ವೇಳೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ದೀಪಾವಳಿ ನಿಮಿತ್ತ ಕಾರ್ಖಾನೆಯಲ್ಲಿ ಯಾರೂ ಇಲ್ಲದ ಕಾರಣ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಬೆಂಗಳೂರಿನ ರಾಮಮೂರ್ತಿ ನಗರದಲ್ಲೂ ಒಂದು ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಐಟಿ ಕಂಪನಿ, ಪೀಠೋಪಕರಣ ಮಳಿಗೆ ಸಂಪೂರ್ಣ ಭಸ್ಮವಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಬ್ಬರು ಸೆಕ್ಯುರಿಟಿ ಗಾರ್ಡ್‌ಗಳ ಪ್ರಾಣವನ್ನು ಅಗ್ನಿಶಾಮಕ ಕಾರ್ಯಕರ್ತರು ರಕ್ಷಿಸಿದ್ದಾರೆ.

ಇದನ್ನೂ ಓದಿ: Fire Accident : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ; 20ಕ್ಕೂ ಅಧಿಕ ಐಷಾರಾಮಿ ಬಸ್‌ಗಳು ಭಸ್ಮ

Exit mobile version