ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ (Delhi BJP Office) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಅಗ್ನಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.
ಪಂಡಿತ್ ಪಂತ್ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
#WATCH | Fire breaks out in BJP's Delhi State Office at Pandit Pant Marg. Fire tenders being rushed to the spot. More details awaited. https://t.co/j15I12d1qW pic.twitter.com/6WGk954MTA
— ANI (@ANI) May 16, 2024
ಕೆಲ ತಿಂಗಳ ಹಿಂದೆ ಮಧ್ಯಪ್ರದೇಶ ವಿಧಾನಸೌಧದ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಭೋಪಾಲ್‌ನ ಅರೇರಾ ಹಿಲ್‌ನಲ್ಲಿರುವ ವಲ್ಲಭ ಭವನ ರಾಜ್ಯ ಸಚಿವಾಲಯದ ಕಟ್ಟಡದಲ್ಲಿ (State Secretariat) ಏಕಾಏಕಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 10-15 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದವು. ಅಗ್ನಿಯ ಕೆನ್ನಾಲಗೆಗೆ ಹಲವು ಕಡತಗಳು ಭಸ್ಮವಾಗಿವೆ ಎಂದು ತಿಳಿದುಬಂದಿತ್ತು.
ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ 11 ಜನರು ಮೃತಪಟ್ಟಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು