Site icon Vistara News

ಮಧ್ಯಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 10 ರೋಗಿಗಳ ದುರ್ಮರಣ

Fire

ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದ್ದು 10 ರೋಗಿಗಳು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರು ಸಜೀವ ದಹನಗೊಂಡಿದ್ದರೆ, ಮತ್ತೊಂದಿಷ್ಟು ಮಂದಿ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ಜಬಲ್‌ಪುರದ ದಾಮೋಹ್‌ ನಾಖಾ ಏರಿಯಾದಲ್ಲಿರುವ ನ್ಯೂ ಲೈಫ್‌ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತೆರಳಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್‌ ಚೌಹಾಣ್‌ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಅಗ್ನಿ ಅವಘಡ; ಪರಾರಿ ಆಗಿದ್ದ ಕಟ್ಟಡ ಮಾಲೀಕನನ್ನು ಬಂಧಿಸಿದ ಪೊಲೀಸ್‌

Exit mobile version