Site icon Vistara News

Terrorists Killed: ಒಳ ನುಸುಳುತ್ತಿದ್ದ ಐವರು ಲಷ್ಕರೆ ಉಗ್ರರನ್ನು ಹೊಡೆದುರುಳಿಸಿದ ಕಾಶ್ಮೀರ ಪೊಲೀಸ್, ಸೇನೆ

two terrorists killed in Uri, Kashmir Says Jammu and Kashmir police

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(LOC)ಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಒಳನುಸುಳುವಿಕೆ ತಡೆ ಕಾರ್ಯಾಚರಣೆಯ ವೇಳೆ ಐವರು ಲಷ್ಕರ್ ಭಯೋತ್ಪಾದಕರು(Terrorists Killed) ಗುರುವಾರ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಈ ಗುಂಡಿನ ಚಕಮಕಿ ನಡೆದಿದೆ(Encounter). ಆರಂಭಿಕ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ನಂತರದ ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತರಾದ ಎಲ್ಲ ಉಗ್ರರು ಲಷ್ಕರೆ ತಯ್ಬಾ (Lashkar-e-Toiba – LeT) ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ(counter infiltration operation).

16 ಭಯೋತ್ಪಾದಕ ಲಾಂಚಿಂಗ್ ಪ್ಯಾಡ್‌ಗಳು ಎಲ್‌ಒಸಿಯಾದ್ಯಂತ ಇನ್ನೂ ಕಾರ್ಯನಿರ್ವಹಿಸುತ್ತಿವೆ ಮತ್ತು ಪಾಕಿಸ್ತಾನದಿಂದ ಭಯೋತ್ಪಾದಕರನ್ನು ದೇಶದೊಳಗೆ ತಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Terrorists Killed: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಇಬ್ಬರು ಉಗ್ರರ ಎನ್‌ಕೌಂಟರ್

ಜಮ್ಮು ಮತ್ತು ಕಾಶ್ಮೀರದ ಉನ್ನತ ಅಧಿಕಾರಿಗಳು ಮತ್ತು ಭದ್ರತಾ ಏಜೆನ್ಸಿಗಳ ಸಭೆಯು ಶ್ರೀನಗರದಲ್ಲಿರುವ 15 ಕಾರ್ಪ್ಸ್‌ನ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆಯಿತು. ಈ ವೇಳೆ, ಕಾಶ್ಮೀರದಲ್ಲಿ ಒಳ ನುಸುಳುತ್ತಿರುವ ಉಗ್ರರ ವಿಷಯವು ಚರ್ಚೆಯ ಪ್ರಧಾನ ವಿಷಯವಾಗಿತ್ತು. ಸ್ಥಳೀಯವಾಗಿ ಉಗ್ರರ ನೇಮಕ ಕುಸಿತವಾದ ಹಾಗೆ ವಿದೇಶಿ ಉಗ್ರರ ಒಳ ನುಸುಳುವಿಕೆ ಹೆಚ್ಚಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರ್ಷ ಇಲ್ಲಿಯವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹತರಾದ 46 ಉಗ್ರರ ಪೈಕಿ 37 ಉಗ್ರರು ವಿದೇಶಿಗರಾಗಿದ್ದಾರೆ. ಸ್ಥಳೀಯ ಉಗ್ರರು ಕೇವಲ 9 ಮಂದಿ. ಕಳೆದ 33 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ಉಗ್ರರಕ್ಕಿಂತ ವಿದೇಶಿ ಉಗ್ರರ ಹತ್ಯೆ ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version