Nirmala Sitharaman Pressmeet: ಸ್ತ್ರೀ ಸಬಲೀಕರಣ, ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ: ನಿರ್ಮಲಾ ಸೀತಾರಾಮನ್​ - Vistara News

ದೇಶ

Nirmala Sitharaman Pressmeet: ಸ್ತ್ರೀ ಸಬಲೀಕರಣ, ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ: ನಿರ್ಮಲಾ ಸೀತಾರಾಮನ್​

FM Nirmala Sitharaman Budget Press Conference: ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಳ್ಳಿ ಎಂದು ಸರ್ಕಾರ ಯಾರಿಗೂ ಒತ್ತಡ ಹೇರುವುದಿಲ್ಲ. ಹಳೇ ತೆರಿಗೆ ಪದ್ಧತಿಯಲ್ಲೇ ಮುಂದುವರಿಯುವವರು ಖಂಡಿತ ಅದನ್ನೇ ಅನುಸರಿಸಬಹುದು. ಆದರೆ ಹೊಸ ತೆರಿಗೆ ಪದ್ಧತಿ ಆಕರ್ಷಕವಾಗಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದರು.

VISTARANEWS.COM


on

No impact of Adani Enterprises FPO cancellation on economy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಜೆಟ್​ ಮಂಡನೆ ಬಳಿಕ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)​ ಮೊಟ್ಟಮೊದಲಿಗೆ ವೈಯಕ್ತಿಕ ಹಣಕಾಸು ತೆರಿಗೆ ಬಗ್ಗೆ ಪ್ರಸ್ತಾಪಿಸಿದರು. ‘ಈ ಸಲದ ಬಜೆಟ್​​ನಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಹೊಸ ತೆರಿಗೆ ಪದ್ಧತಿಗೆ ಪ್ರೋತ್ಸಾಹ ನೀಡಲಾಗಿದೆ. ಇದರಿಂದಾಗಿ ಜನಸಾಮಾನ್ಯರು ಸುಲಭವಾಗಿ ಹಳೇ ತೆರಿಗೆ ಪದ್ಧತಿಯಿಂದ ಹೊರಬಂದು, ಹೊಸ ಪದ್ಧತಿಗೆ ಹೊಂದಿಕೊಳ್ಳಬಹುದು’ ಎಂದು ಹೇಳಿದರು.

‘ಹಾಗಂತ ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಳ್ಳಿ ಎಂದು ಸರ್ಕಾರ ಯಾರಿಗೂ ಒತ್ತಡ ಹೇರುವುದಿಲ್ಲ. ಹಳೇ ತೆರಿಗೆ ಪದ್ಧತಿಯಲ್ಲೇ ಮುಂದುವರಿಯುವವರು ಖಂಡಿತ ಅದನ್ನೇ ಅನುಸರಿಸಬಹುದು. ಆದರೆ ಹೊಸ ತೆರಿಗೆ ಪದ್ಧತಿ ಆಕರ್ಷಕವಾಗಿದೆ ಮತ್ತು ಸರಳವಾಗಿದೆ. ಸಣ್ಣ ಪ್ರಮಾಣದ ಸ್ಲ್ಯಾಬ್​​ಗಳನ್ನು ಒಳಗೊಂಡಿದ್ದು ತೆರಿಗಾದರರಿಗೆ ರಿಯಾಯಿತಿ ನೀಡುತ್ತದೆ ಎಂದೂ ನಿರ್ಮಲಾ ಸೀತಾರಾಮನ್​ ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಆದ್ಯತೆ
ಈ ಸಲದ ಬಜೆಟ್​​ನಲ್ಲಿ ಒಟ್ಟು ನಾಲ್ಕು ಸಂಗತಿಗಳಿಗೆ ಒತ್ತುಕೊಡಲಾಗಿದೆ. ಮಹಿಳಾ ಸಬಲೀಕರಣ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಿಯಾ ಯೋಜನೆ, ಸಾಂಪ್ರದಾಯಿಕ ಕುಶಲಕರ್ಮಿಗಳಿಗಾಗಿ (ವಿಶ್ವಕರ್ಮ ಸಮುದಾಯದವರು) ಉಪಕ್ರಮಗಳು ಮತ್ತು ಹಸಿರು ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಾಗೇ, ನಾವು ಆಶಾದಾಯಕ ಫಿನ್​ಟೆಕ್​ ವಲಯಕ್ಕಾಗಿ ಎದುರು ನೋಡುತ್ತಿದ್ದೇವೆ. ಸದ್ಯದ 4ನೇ ಕೈಗಾರಿಕಾ ಕ್ರಾಂತಿಯ ಮೂಲಕ ಜನರನ್ನು ತರಬೇತುಗೊಳಿಸಲಾಗುವುದು. ಸಮಾಜದ ಎಲ್ಲ ವರ್ಗದ-ಕ್ಷೇತ್ರದ ಜನರಿಗೂ ಅನುಕೂಲವಾಗುವಂತೆ ಡಿಜಿಟಲ್ ಆರ್ಥಿಕತೆಯನ್ನು ಸಡಿಲಗೊಳಿಸು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದೂ ಸಚಿವೆ ತಿಳಿಸಿದರು.

ನಾವು ಮಂಡಿಸಿರುವ ಈ ಬಜೆಟ್​ ಬಂಡವಾಳ ಹೂಡಿಕೆ ಕ್ಷೇತ್ರದಲ್ಲಿ ದೊಡ್ಡಮಟ್ಟದ ಸುಧಾರಣೆಯಾಗಲು ಅನುಕೂಲ ಮಾಡಿಕೊಡುತ್ತದೆ. ದೇಶದ ಬೆಳವಣಿಗೆಗೆ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಎಂಜಿನ್​ಗಳಾಗಿದ್ದರಿಂದ ಅವುಗಳಿಗೆ ಹೆಚ್ಚು ಉತ್ತೇಜನ ಕೊಡಲಾಗಿದೆ. ಅಷ್ಟೇ ಅಲ್ಲ ಖಾಸಗಿ ವಲಯವನ್ನು ಬೂಸ್ಟ್ ಮಾಡುತ್ತದೆ ಎಂದು ಹೇಳಿದರು. ಅಷ್ಟೇ ಅಲ್ಲ, ಸಿಪಿಐ (Consumer Price Index-ಗ್ರಾಹಕರ ಬೆಲೆ ಸೂಚ್ಯಂಕ) ಮತ್ತು ಡಬ್ಲ್ಯೂಪಿಐ (Wholesale Price Index-ಸಗಟು ಬೆಲೆ ಸೂಚ್ಯಂಕ) ಎರಡೂ ಕಡೆಗಳಲ್ಲಿ ಹಣದುಬ್ಬರ ಕಡಿಮೆ ಆಗಿರುವುದನ್ನು ನೀವು ನೋಡಿರಬಹುದು. ಹಣದುಬ್ಬರ ಇಳಿಕೆಗಾಗಿ ನಮ್ಮ ಸರ್ಕಾರವು ಕ್ರಮ ಕೈಗೊಂಡಿದೆ. 5 ಟ್ರಿಲಿಯನ್​ ಡಾಲರ್ ಆರ್ಥಿಕತೆಯನ್ನು ನಾವು ಸಾಗುತ್ತಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.

ಇದನ್ನೂ ಓದಿ: Union Budget 2023: ನಿರ್ಮಲಾ ಸೀತಾರಾಮನ್‌ ತಂಡದಲ್ಲಿ ಇರುವವರು ಇವರೇ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

Medical Negligence: 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸದ್ಯ ವೈದ್ಯರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

VISTARANEWS.COM


on

Medical Negligence
Koo

ಲಕ್ನೋ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯದಿಂದ ತೊಂದರೆ ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ (Medical Negligence). ಇದಕ್ಕೆ ತಾಜಾ ಉದಾಹರಣೆ ಇದು. 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ (Viral News).

ಈ ಹೃದಯ ವಿದ್ರಾವಕ ಘಟನೆ ಮೈನ್‌ಪುರಿಯ ಘಿರೊರ್‌ ಥಾನಾ ಪ್ರದೇಶದಲ್ಲಿ ನಡೆದಿದೆ. ಭುಗೈ ಎಂಬ ಹಳ್ಳಿಯ ರಿತಾ ಎನ್ನುವ ಮಹಿಳೆ ಇತ್ತೀಚೆಗೆ ಮೈನ್‌ಪುರಿಯ ರಾಧಾರಮಣ್‌ ರಸ್ತೆಯಲ್ಲಿರುವ ಸಾಯಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಿಸೇರಿಯನ್‌ ಮೂಲಕ ಈ ಮಗು ಜನಿಸಿತ್ತು. ಜನಿಸುವಾಗಲೇ ಮಗುವಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಇದಕ್ಕೆ ವೈದ್ಯರು ಪ್ರತಿ ದಿನ ಅರ್ಧ ಗಂಟೆ ಮಗುವನ್ನು ಬಿಸಿಲಿನಲ್ಲಿ ಇರಿಸುವಂತೆ ಮನೆಯವರಿಗೆ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಸಿಲಿನ ತಾಪಕ್ಕೆ ಅಸುನೀಗಿದ ಹಸುಳೆ

ವೈದ್ಯರ ಸಲಹೆಯಂತೆ ಮಗುವಿನ ಮನೆಯವರು 5 ದಿನಗಳ ಹಸುಳೆಯನ್ನು ಆಸ್ಪತ್ರೆಯ ಟೆರೇಸ್‌ಗೆ ಒಯ್ದು ಬಿಸಿಲಿನಲ್ಲಿ ಮಲಗಿಸಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ಟೆರೇಸ್‌ನಲ್ಲಿ ಇರಿಸಿ ಅರ್ಧ ಗಂಟೆ ಆದ ಮೇಲೆ ಮಗುವನ್ನು ವಾರ್ಡ್‌ಗೆ ಕರೆದೊಯ್ದಿದ್ದರು. ಇದಾಗಿ ಕೆಲ ಹೊತ್ತಿನಲ್ಲೇ ಮಗು ಮೃತಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ಹೇಳಿ ಕೇಳಿ ಇದು ಬಿರು ಬೇಸಗೆ ಕಾಲ. ಇತ್ತೀಚೆಗಂತೂ ಉಷ್ಣಾಂಶ ವಿಪರೀತ ಎನ್ನುವಷ್ಟು ಏರಿಕೆಯಾಗಿದೆ. ಹೀಗಾಗಿ ಅತಿಯಾದ ತಾಪಮಾನ ತಾಳಲಾರದೆ ಮಗು ಅಸುನೀಗಿದೆ. ಅಲ್ಲದೆ ಈ ಪ್ರದೇಶದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು. ವಯಸ್ಕರಿಗೇ ಈ ಬಿಸಿಲಿನ ಝಳವನ್ನು ತಾಳಲು ಸಾಧ್ಯವಾಗುತ್ತಿಲ್ಲ. ಇನ್ನು 5 ದಿನಗಳ ಹಸುಳೆ ಹೇಗೆ ತಡೆದುಕೊಳ್ಳುತ್ತದೆ ಎಂದು ಮನೆಯವರು ಪ್ರಶ್ನಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ತಮ್ಮ ಮಗುವಿನ ಸಾವಿಗೆ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ

ಪ್ರತಿದಿನ ಅರ್ಧ ಗಂಟೆ ಬಿಸಿಲಿನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದರಿಂದಲೇ ಮಗು ಅಸುನೀಗಿದೆ ಎಂದಿರುವ ಕುಟುಂಬಸ್ಥರು ಆಸ್ಪತ್ರೆಯ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆಸ್ಪತ್ರೆಯ ಆಡಳಿತದ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಮಗು ಮೃತಪಡುತ್ತಿದ್ದಂತೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸಿಎಂಒ ಆದೇಶದ ಮೇರೆಗೆ ಸದ್ಯ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಮತ್ತು ವೈದ್ಯರ ವಿರುದ್ಧ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ 4 ತಿಂಗಳ ಮಗು ಬಲಿ? ಆಕ್ಸಿಜನ್‌ ಹಾಕಿದ 10 ನಿಮಿಷಕ್ಕೆ ಮೃತ್ಯು!

ಕೇರಳದಲ್ಲಿ ಮತ್ತೊಂದು ಪ್ರಕರಣ

ಇತ್ತ ಕೇರಳದಲ್ಲಿಯೂ ವೈದ್ಯರು ಎಡವಟ್ಟು ಮಾಡಿಕೊಂಡಿದ್ದಾರೆ. ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಡಾಕ್ಟರ್‌ ಮಗುವಿನ ಕೈ ಬೆರಳಿನ ಬದಲು ನಾಲಿಗೆಯ ಶಸ್ತ್ರಚಿಕಿತ್ಸೆಯ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಅಸಮಾಧಾನ ಹೊರ ಹಾಕುತ್ತಿದ್ದಂತೆ ವೈದ್ಯರು ಬಂದು ತಪ್ಪಿಗೆ ಕ್ಷಮೆ ಯಾಚಿಸಿದ್ದು, ಮತ್ತೆ ಮಗುವನ್ನು ಕರೆದುಕೊಂಡು ಹೋಗಿ ಬೆರಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆಯಲು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Continue Reading

ದೇಶ

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

Kapil Sibal: ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kapil Sibal
Koo

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ವಕೀಲ, ಕೇಂದ್ರದ ಮಾಜಿ ಸಚಿವರೂ ಆದ ಕಪಿಲ್‌ ಸಿಬಲ್‌ (Kapil Sibal) ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ (Supreme Court Bar Association) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ಗೆ ಗುರುವಾರ (ಮೇ 16) ಚುನಾವಣೆ ನಡೆದಿದ್ದು, ಕಪಿಲ್‌ ಸಿಬಲ್‌ ಅವರು ಪ್ರದೀಪ್‌ ರೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೇ 8ರಂದು ಚುನಾವಣೆಗೆ ಸ್ಪರ್ಧಿಸುವುದಾಗಿ ಕಪಿಲ್‌ ಸಿಬಲ್‌ ಘೋಷಣೆ ಮಾಡಿದ್ದರು.

ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯೂ ಬದಲಾಗಲಿದ್ದಾರೆ” ಎಂದು ನರೇಂದ್ರ ಮೋದಿ ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಕಪಿಲ್‌ ಸಿಬಲ್‌ ಹಿನ್ನೆಲೆ ಏನು?

ದೇಶದ ಪ್ರಮುಖ ವಕೀಲರಲ್ಲಿ ಕಪಿಲ್‌ ಸಿಬಲ್‌ ಅವರು ಒಬ್ಬರಾಗಿದ್ದಾರೆ. ಪಂಜಾಬ್‌ನ ಜಲಂಧರ್‌ನವರಾದ ಕಪಿಲ್‌ ಸಿಬಲ್‌ ಅವರು ಹಾರ್ವರ್ಡ್‌ ಲಾ ಸ್ಕೂಲ್‌ನಲ್ಲಿ ಪದವಿ ಪಡೆದು, ವಕೀಲಿಕೆ ಆರಂಭಿಸಿದರು. 1983ರಲ್ಲಿ ಇವರು ಹಿರಿಯ ವಕೀಲ ಎಂಬ ಖ್ಯಾತಿ ಗಳಿಸಿದರು. ಇವರು 1989ರಿಂದ 1990ರವರೆಗೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿದ್ದರು. ಇವರು 1995ರಿಂದ 2002ರ ಅವಧಿಯಲ್ಲಿ ಮೂರು ಬಾರಿ ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ನಾಯಕರೂ ಆಗಿರುವ ಕಪಿಲ್‌ ಸಿಬಲ್‌ ಅವರು ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಚಿವರೂ ಆಗಿದ್ದರು. ರಾಜ್ಯಸಭೆ ಸದಸ್ಯರಾಗಿ, 2004ರಲ್ಲಿ ಚಾಂದಿನಿ ಚೌಕ್‌ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು. ಇದುವರೆಗೆ ಹಿರಿಯ ವಕೀಲ ಆದಿಶ್‌ ಅಗರ್ವಾಲ ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಈಗ ಕಪಿಲ್‌ ಸಿಬಲ್‌ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Continue Reading

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading

ದೇಶ

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ನಡೆದಿದೆ. ಇದರಲ್ಲಿ ಲೇಡಿ ಕಾನ್‌ಸ್ಟೆಬಲ್‌ ಕೂಡ ಭಾಗಿಯಾಗಿದ್ದರು. ಗಾಯಕ ಮನಮೋಹಕವಾಗಿ ಹಾಡಿದ್ದಕ್ಕೆ ಮಹಿಳಾ ಪೇದೆಯು ಮನದುಂಬಿ ಅವರಿಗೆ ಮುತ್ತು ಕೊಟ್ಟರು. ತಬ್ಬಿಕೊಂಡು ಅಭಿಮಾನ ವ್ಯಕ್ತಪಡಿಸಿದರು. ಈಗ ಇದೇ ಅವರಿಗೆ ಮುಳುವಾಗಿದೆ.

VISTARANEWS.COM


on

Lady Constable
Koo

ದಿಸ್ಪುರ: ನೆಚ್ಚಿನ ನಟ-ನಟಿ, ಗಾಯಕ-ಗಾಯಕಿ ಸೇರಿ ಯಾವುದೇ ಸೆಲೆಬ್ರಿಟಿ (Celebrity) ಸಿಕ್ಕರೆ ಹೇಗೆ ವರ್ತಿಸುತ್ತೇವೆ? ಅವರ ಜತೆ ಒಂದು ಸೆಲ್ಫಿ ತೆಗೆದುಕೊಳ್ಳುತ್ತೇವೆ. ತುಸು ಸಮಯ ಸಿಕ್ಕರೂ ಆಟೋಗ್ರಾಫ್‌ ಹಾಕಿಸಿಕೊಳ್ಳುತ್ತೇವೆ. ಆದರೆ, ಅಸ್ಸಾಂನಲ್ಲಿ (Assam) ಲೇಡಿ ಕಾನ್‌ಸ್ಟೆಬಲ್‌ ಒಬ್ಬರು (Lady Constable) ಮೆಚ್ಚಿದ ಗಾಯಕನನ್ನು ವೇದಿಕೆ ಮೇಲೆಯೇ ತಬ್ಬಿಕೊಂಡು, ಗಾಯಕನ ಕೆನ್ನೆಗೊಂದು ಮುತ್ತು ಕೊಟ್ಟು ಅಭಿಮಾನ ಮೆರೆದಿದ್ದಾರೆ. ಆದರೆ, ಗಾಯಕನಿಗೆ ವೇದಿಕೆ ಮೇಲೆಯೇ ಮುತ್ತುಕೊಟ್ಟ ಮಹಿಳಾ ಪೇದೆಯನ್ನು ಈಗ ಅಮಾನತು ಮಾಡಲಾಗಿದೆ.

ಹೌದು, ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ಆಯೋಜಿಸಲಾಗಿತ್ತು. ಗ್ಯಾಂಗ್‌ಸ್ಟರ್‌ ಬಾಲಿವುಡ್‌ ಸಿನಿಮಾದ ಯಾ ಅಲಿ ಎಂಬ ಹಾಡು ಹಾಡಿದ ಖ್ಯಾತ ಜುಬೀನ್‌ ಗರ್ಗ್‌ ಅವರು ಮ್ಯೂಸಿಕ್‌ ಕನ್ಸರ್ಟ್‌ ನಡೆಸಿಕೊಟ್ಟರು. ಅವರ ಮನಮೋಹಕ ಹಾಡಿಗೆ ಅಲ್ಲಿ ನೆರೆದಿದ್ದ ಎಲ್ಲರೂ ಚಪ್ಪಾಳೆ, ಕೇಕೆ ಮೂಲಕ ಪ್ರೋತ್ಸಾಹ ನೀಡಿದರು. ಆದರೆ, ಅಲ್ಲಿಯೇ ಇದ್ದ ಮಹಿಳಾ ಪೇದೆ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರಿಗೆ ಮುತ್ತು ಕೊಟ್ಟರು. ಈ ವಿಡಿಯೊ ಭಾರಿ ವೈರಲ್‌ ಕೂಡ ಆಯಿತು.

ನೆಚ್ಚಿನ ಗಾಯಕನ ಹಾಡಿಗೆ ಫಿದಾ ಆದ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡರು. ಅವರನ್ನು ಮನಸಾರೆ ಹೊಗಳಿದರು. ಗಾಯಕನ ಮೇಲೆ ಎಷ್ಟು ಅಭಿಮಾನ ಹೊಂದಿದ್ದೇನೆ ಎಂಬುದನ್ನು ಭಾವುಕರಾಗಿ ತಿಳಿಸಿದರು. ಇದೇ ವೇಳೆ ಅವರು ಜುಬೀನ್‌ ಗರ್ಗ್‌ ಅವರ ಕೆನ್ನೆಗೆ ಪದೇಪದೆ ಮುತ್ತು ಕೊಟ್ಟರು. ಅಷ್ಟೇ ಅಲ್ಲ, ಗಾಯಕನ ಪಾದ ಮುಟ್ಟಿ ನಮಸ್ಕಾರ ಮಾಡಿದರು. ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಯಿತು.

ವಿಡಿಯೊ ವೈರಲ್‌ ಆಗುತ್ತಲೇ ಮಿಲಿಪ್ರಭಾ ಚುಟಿಯಾ ಅವರನ್ನು ಅಸ್ಸಾಂ ಪೊಲೀಸ್‌ ಇಲಾಖೆಯು ಅಮಾನತುಗೊಳಿಸಿದೆ. ಪೊಲೀಸ್‌ ಇಲಾಖೆಯ ಶಿಸ್ತು ಹಾಗೂ ಸಾರ್ವಜನಿಕ ವರ್ತನೆಯ ನಿಯಮಗಳನ್ನು ಮೀರಿದ ಆರೋಪದಲ್ಲಿ ಅವರನ್ನು ಅಮಾನತುಗೊಳಿಸಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೇದೆ ವರ್ತನೆ ಬಗ್ಗೆ ಪರ-ವಿರೋಧ ಚರ್ಚೆಯಾಗಿದೆ. ನೆಚ್ಚಿನ ಗಾಯಕನನ್ನು ತಬ್ಬಿಕೊಂಡು, ಮುತ್ತು ಕೊಡುವುದರಲ್ಲಿ ಅಶ್ಲೀಲತೆ ಏನಿದೆ ಎಂದು ಒಂದಷ್ಟು ಜನ ಹೇಳಿದರೆ, ಪೊಲೀಸ್‌ ಅಧಿಕಾರಿಯಾದವರು ಸಾರ್ವಜನಿಕವಾಗಿ ಹೇಗಿರಬೇಕು ಎಂಬುದು ಗೊತ್ತಿರಬೇಕು ಎಂದು ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Continue Reading
Advertisement
Medical Negligence
ದೇಶ1 min ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ13 mins ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ41 mins ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ3 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ8 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ8 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ8 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ18 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು21 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌