ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು(Covid-19) ಪಾಲಿಸಬೇಕು. ಒಂದು ವೇಳೆ ಪಾಲಿಸಲು ಸಾಧ್ಯವಾಗದೇ ಹೋದರೆ, ರಾಷ್ಟ್ರೀಯ ಹಿತಾಸಕ್ತಿಗಾಗಿ ಯಾತ್ರೆಯನ್ನು ರದ್ದು ಮಾಡುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜಸ್ಥಾನದ ಮೂವರು ಬಿಜೆಪಿ ಸಂಸದರು ಕೋವಿಡ್ ಪಸರಿಸುವ ಕುರಿತು ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರು ಕಾಂಗ್ರೆಸ್ ಪಕ್ಷಕ್ಕೆ ಯಾತ್ರೆಯ ವೇಳೆ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಸಾಧ್ಯವಾಗದೇ ಹೋದರೆ ಯಾತ್ರೆಯನ್ನು ರದ್ದು ಮಾಡುವಂತೆ ತಿಳಿಸಿದ್ದಾರೆ. ಅವರು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೂ ಈ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಜನರಿಂದ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ. ಬಿಜೆಪಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಯಾತ್ರೆಗೆ ಅಡ್ಡಿಪಡಿಸಲು ಈ ರೀತಿ ಮಾಡಲಾಗುತ್ತಿದೆ. ಗುಜರಾತ್ ಚುನಾವಣೆ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ವೋಟ್ ಕೇಳಲು ಮನೆ ಮನೆ ಹೋಗಿದ್ದಾಗ ಮಾಸ್ಕ್ ಧರಿಸಿದ್ದರೆ ಎಂದು ಕಾಂಗ್ರೆಸ್ ಅಧೀರ್ ರಂಜನ್ ಚೌಧರಿ ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ | ಭಾರತ್ ಜೋಡೋ ಯಾತ್ರೆಗೆ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಸಾಥ್; ರಾಹುಲ್ ಗಾಂಧಿಯೊಂದಿಗೆ ಕಾಲ್ನಡಿಗೆ