ಮುಂಬೈ: ಶಾಲೆಯಲ್ಲಿ ನೀಡಲಾದ ಬಿಸ್ಕೇಟ್ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ(Students hospitalized)ಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ(Food Poisoning). ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 80 ವಿದ್ಯಾರ್ಥಿಗಳು ಪೌಷ್ಠಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್ತುಗಳನ್ನು ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಕೇಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 8:30 ರ ಸುಮಾರಿಗೆ ಬಿಸ್ಕೆಟ್ ಸೇವಿಸಿದ ನಂತರ ಮಕ್ಕಳಲ್ಲಿ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವಿಷಯ ತಿಳಿದ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಕೂಡಲೇ ಶಾಲೆಗೆ ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದರು. ವಿದ್ಯಾರ್ಥಿಗಳನ್ನು ಗ್ರಾಮಾಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಲಾಗಿದೆ.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬಾಸಾಹೇಬ್ ಘುಘೆ ಮಾತನಾಡಿ, “ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಬಿಸ್ಕೆಟ್ ಸೇವಿಸಿದ 257 ವಿದ್ಯಾರ್ಥಿಗಳು ಆಹಾರ ವಿಷದ ಲಕ್ಷಣಗಳನ್ನು ವರದಿ ಮಾಡಿದ್ದಾರೆ. ಅವರಲ್ಲಿ 153 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಕೆಲವರಿಗೆ ಚಿಕಿತ್ಸೆ ನೀಡಲಾಗಿದೆ. ಮತ್ತು ಮನೆಗೆ ಕಳುಹಿಸಲಾಗಿದೆ. ಆದಾಗ್ಯೂ, ತೀವ್ರ ರೋಗಲಕ್ಷಣಗಳನ್ನು ಹೊಂದಿರುವ ಏಳು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಘುಘೆ ಹೇಳಿದ್ದಾರೆ.
ಶಾಲೆಯಲ್ಲಿ 296 ವಿದ್ಯಾರ್ಥಿಗಳಿದ್ದು, ಈ ಘಟನೆಗೆ ಕಾರಣ ಏನೆಂಬುದರ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ.
80 students hospitalized after eating biscuits at #Maharashtra school. At least 257 students reported symptoms of #foodpoisoning, of whom 80 were hospitalized. 7 students transferred to a better hospital for severe symptoms. The #schoolstudents experienced nausea & vomiting. pic.twitter.com/EDgsg5NgY3
— E Global news (@eglobalnews23) August 18, 2024
ಮೊಹರಂ ಆಚರಣೆ ವೇಳೆ ಕಳೆದ ತಿಂಗಳು ರಾಜಸ್ತಾನದಲ್ಲಿ ದುರಂತವೊಂದು ಸಂಭವಿಸಿದ್ದು, ಮೆರವಣಿಗೆ ವೇಳೆ ಷರಬತ್ತು ಸೇವಿಸಿದ ಸುಮಾರು 400 ಮಂದಿ ಅಸ್ವಸ್ಥರಾಗಿದ್ದಾರೆ. ರಾಜಸ್ತಾನದ ಬನ್ಸ್ವಾರಾದಲ್ಲಿ ಈ ಘಟನೆ ನಡೆದಿದ್ದು, ವಾಂತಿ ಮತ್ತು ಅತಿಸಾರ ಕಾಣಿಕೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯರಾತ್ರಿ ಮುಹರ್ರಮ್ ಮೆರವಣಿಗೆಯಲ್ಲಿ ಭಾಗವಹಿಸಿದ ಹಲವು ಮಂದಿ ಅಸ್ವಸ್ಥರಾದ ಕೂಡಲೇ ರಸ್ತೆ ಬದಿಯಲ್ಲಿದ್ದ ಮೆಡಿಕಲ್‌ಗಳಿಗೆ ನುಗ್ಗಿ ಬೀಗ ಒಡೆದು ಔಷಧ ಮತ್ತು ಒಆರ್‌ಎಸ್ ತೆಗೆದುಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ಮೂವರು ವೈದ್ಯರು ಧಾವಿಸಿ ಬಂದು ಸುಮಾರು ಅಸ್ವಸ್ಥರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಆರಂಭಿಸಿದರು. ಏಕಕಾಲಕ್ಕೆ 400ಕ್ಕೂ ಹೆಚ್ಚು ಮಂದಿ ಸ್ಥಳೀಯ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಸುಮಾರು 100 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ ವೈದ್ಯ ಹೀರಾಲಾಲ್ ತಬಿಯಾತ್ ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: Food Poisoning: ವಿಷ ಬೆರೆತ ಮಟನ್ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ