Site icon Vistara News

ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ನೀಡಲಿ: ರಮೇಶ್‌ ಬಾಬು ಆಗ್ರಹ

ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದ ಹಿರಿಯ ಕಾಂಗ್ರೆಸಿಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಷ್ಟ್ರೀಯ ಕಾಂಗ್ರೆಸ್‌ (ಎಐಸಿಸಿ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ರಮೇಶ್‌ ಬಾಬು ಪತ್ರ ಬರೆದಿದ್ದಾರೆ.

ಖರ್ಗೆ ಅವರು ೧೯೭೨ರಲ್ಲಿ ರಾಜಕೀಯ ಜೀವನ ಆರಂಭಿಸಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಈ ಸಂದರ್ಭದಲ್ಲಿ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಖರ್ಗೆ ಅವರನ್ನು AICC ಅಧ್ಯಕ್ಷರನ್ನಾಗಿಸಲು ರಾಜ್ಯ ಕಾಂಗ್ರೆಸ್ ಒತ್ತಾಸೆಯಾಗಬೇಕು ಎಂದಿದ್ದಾರೆ.

ಸೋಮವಾರ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶವಿದೆ. ರಾಹುಲ್ ಗಾಂಧಿ ಅವರಿಗೆ ಮೊದಲ ಪ್ರಾಧಾನ್ಯತೆಯಿದ್ದರೂ, ಅವರು ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ. ಹಾಗಾಗಿ ಪಕ್ಷಕ್ಕೆ, ಗಾಂಧಿ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಖರ್ಗೆ ಅವರನ್ನು ಆಯ್ಕೆ ಮಾಡಬೇಕು.

ಭಾರತ್ ಜೋಡೊ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಸಕ್ರಿಯವಾಗಿದ್ದಾರೆ‌. ರಾಜ್ಯ ಸೇರಿದಂತೆ ಬೇರೆ ಕಡೆಯೂ ಖರ್ಗೆ ಅವರ ಪರ ಅಭಿಪ್ರಾಯ ವ್ಯಕ್ತವಾಗಿದೆ‌ ಎಂದಿದ್ದಾರೆ.

ಇದನ್ನೂ ಓದಿ | ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಅವಮಾನ; ಪ್ರತಿಪಕ್ಷಗಳಿಂದ ದೂರು

Exit mobile version