Site icon Vistara News

Pratibha Patil: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

Pratibha Patil

Former President Pratibha Patil hospitalised in Pune, condition stable

ಮುಂಬೈ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) (89) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಹಾಗೂ ಎದೆನೋವಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಪುಣೆಯಲ್ಲಿರುವ ಭಾರತಿ ಆಸ್ಪತ್ರೆಗೆ (Bharti Hospital) ಪ್ರತಿಭಾ ಪಾಟೀಲ್‌ ಅವರನ್ನು ಬುಧವಾರ ರಾತ್ರಿ (ಮಾರ್ಚ್‌ 13) ಬೆಳಗ್ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯವೀಗ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

“ಬುಧವಾರ ರಾತ್ರಿಯೇ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಲ್ಪ ಜ್ವರ ಬಂದಿದ್ದು, ಎದೆನೋವು ಕೂಡ ಕಾಣಿಸಿಕೊಂಡಿದೆ. ತಪಾಸಣೆ ಹಾಗೂ ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ. ಈಗಲೂ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ತೀವ್ರ ನಿಗಾ ಇರಿಸಲಾಗಿದೆ. ಶೀಘ್ರದಲ್ಲಿಯೇ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿಭಾ ಪಾಟೀಲ್ ಅವರ ಪತಿ ದೇವಿಸಿಂಗ್‌ ಶೇಖಾವತ್‌ (89) ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಪ್ರತಿಭಾ ಪಾಟೀಲ್ ಅವರು 2007ರಿಂದ 2012ರವರೆಗೆ ದೇಶದ ರಾಷ್ಟ್ರಪತಿಯಾಗಿದ್ದರು. ಇವರು ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

ಇದನ್ನೂ ಓದಿ: Ajith Kumar:  ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು!

ಪ್ರತಿಭಾ ಪಾಟೀಲ್‌ ಅವರು ಕಾಲೇಜು ದಿನಗಳಲ್ಲಿ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಅವರು ಟೇಬಲ್‌ ಟೆನಿಸ್‌ ಆಟಗಾರ್ತಿಯಾಗಿದ್ದರು. ಇದಾದ ನಂತರ ರಾಜಕೀಯ ಪ್ರವೇಶಿಸಿದ ಪ್ರತಿಭಾ ಪಾಟೀಲ್‌, 1962ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಶಾಸಕಿಯಾಗಿ ಆಯ್ಕೆಯಾದರು. ಶಾಸಕಿಯಾಗಿದ್ದಾಗಲೇ ಓದಿ ಕಾನೂನು ಪದವಿ ಪಡೆದ ಕೀರ್ತಿ ಅವರದ್ದು. ಶಾಸಕಿಯಾಗಿ, ರಾಜ್ಯಸಭೆ ಸದಸ್ಯೆಯಾಗಿ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿ, ಕೊನೆಗೆ ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version