ನವದೆಹಲಿ: ಉತ್ತರ ಪ್ರದೇಶದಲ್ಲಿ ೧೦ ಹಾಗೂ ೧೨ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ (UP Board Exam 2023) ನಕಲು ತಡೆಗೆ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ಕಠಿಣ ಕ್ರಮ ತೆಗೆದುಕೊಂಡ ಹಿನ್ನೆಲೆಯಲ್ಲಿ ೧೦ ಹಾಗೂ ೧೨ನೇ ತರಗತಿಯ ಒಟ್ಟು ೪ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಮೊದಲ ದಿನವೇ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಬೋರ್ಡ್ ಎಕ್ಸಾಂ ಆರಂಭವಾಗಿದ್ದು, ಪರೀಕ್ಷೆಗೆ ನೋಂದಣಿ ಮಾಡಿಕೊಂಡ ೩೧ ಲಕ್ಷಕ್ಕೂ ಅಧಿಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ೨.೧೮ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಗೆಯೇ, ದ್ವಿತೀಯ ಪಿಯುಸಿಯ ೨೫.೮೦ ಲಕ್ಷ ವಿದ್ಯಾರ್ಥಿಗಳಲ್ಲಿ ೧.೮೩ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. ನಕಲು ತಡೆಗೆ ಕಠಿಣ ಕ್ರಮ ತೆಗೆದುಕೊಂಡಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
ನಕಲು ತಡೆಗೆ ಏನು ಕ್ರಮ?
ವಾರ್ಷಿಕ ಪರೀಕ್ಷೆಗಳಲ್ಲಿ ನಕಲು ತಡೆಗೆ ಹತ್ತಾರು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ೭೫ ಜಿಲ್ಲೆಗಳ ೮,೭೫೩ ಪರೀಕ್ಷಾ ಕೇಂದ್ರಗಳ ೧.೪೩ ಪರೀಕ್ಷಾ ಕೊಠಡಿಗಳಲ್ಲಿ ವಾಯ್ಸ್ ರೆಕಾರ್ಡರ್ ಸಹಿತ ೩ ಲಕ್ಷ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳ ತಪಾಸಣೆ, ವಿದ್ಯುನ್ಮಾನ ಡಿವೈಸ್‌ಗಳ ಬಳಕೆ ನಿಷೇಧ ಸೇರಿ ಹತ್ತಾರು ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕೆ ಹೆದರಿ ವಿದ್ಯಾರ್ಥಿಗಳು ಪರೀಕ್ಷೆಗೆ ಚಕ್ಕರ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಪರೀಕ್ಷೆಗಿಂತ ಹಿಜಾಬ್ ಮುಖ್ಯವೆಂದ ವಿದ್ಯಾರ್ಥಿನಿಯರು: ದ್ವಿತೀಯ ಪಿಯು ಪರೀಕ್ಷೆಗೆ ಗೈರು