Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

Ramesh B

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು
Ramesh B

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ
Ramesh B

ತೆಲಂಗಾಣದಲ್ಲಿ ನಟ ಪವನ್‌ ಕಲ್ಯಾಣ್‌ಗೆ ಮುಖಭಂಗ

ತೆಲಂಗಾಣದಲ್ಲಿ ನಟ ಪವನ್‌ ಕಲ್ಯಾಣ್‌ಗೆ ಭಾರೀ ಹಿನ್ನಡೆಯಾಗಿದೆ. ಅವರ ಪಕ್ಷಕ್ಕೆ ಒಂದೇ ಒಂದು ಗೆಲುವು ಸಿಕ್ಕಿಲ್ಲ. ಜನಸೇನಾ ಪಕ್ಷ ಸ್ಪರ್ಧಿಸಿದ್ದ 8 ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋತಿದೆ.

Ramesh B

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ ಅಲೆ: ಡಿ.ಕೆ.ಶಿ.

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದಿದೆ. ಕರ್ನಾಟಕದ ಬಳಿಕ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ. ನಮ್ಮ ಕೆಲವನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೈದರಾಬಾದ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

Ramesh B

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಫಲಿತಾಂಶದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ನೂ ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ. ಸದ್ಯ ಲೀಡ್‌ ಇರೋದು ಕಂಡುಬರುತ್ತಿದೆ ಎಂದು ಹೇಳಿದ್ದಾರೆ.

Exit mobile version