ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ತೆಲಂಗಾಣದಲ್ಲಿ ಸ್ಪಷ್ಟ ಬಹುಮತದತ್ತ ಕಾಂಗ್ರೆಸ್
Congress crosses the halfway mark in Telangana; leads on 61 seats in official trends as per ECI.
— ANI (@ANI) December 3, 2023
BRS – 36, BJP – 10, AIMIM – 1 and CPI – 1 pic.twitter.com/KDvWhCoZCk
Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್. ಅಶೋಕ್
ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಅಲ್ಲಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
https://vistaranews.com/politics/election-results-2023-will-protest-if-congress-does-resort-politics-says-r-ashok/522740.htmlಛತ್ತೀಸ್‌ಗಢದಲ್ಲಿ ಅಧಿಕಾರದತ್ತ ಬಿಜೆಪಿ
ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರ ಹಿಡಿಯುವತ್ತ ಹೆಜ್ಜೆ ಹಾಕಿದೆ. ಇಲ್ಲಿ ಕಮಲ ಪಡೆ 52 ಸ್ಥಾನಗಳಲ್ಲಿ ಮುಂದಿದೆ. ಕಾಂಗ್ರೆಸ್ 35 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇತ್ತ ರಾಜಸ್ಥಾನ, ಮಧ್ಯಪ್ರದೇಶದಲ್ಲೂ ಬಿಜೆಪಿ ಕಮಾಲ್ ಮಾಡಿದೆ.
ತೆಲಂಗಾಣ ಮುಖ್ಯಮಂತ್ರಿಗೆ ಭಾರೀ ಹಿನ್ನಡೆ
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕಾಮರೆಡ್ಡಿ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇಲ್ಲಿ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್
ತೆಲಂಗಾಣದಲ್ಲಿ ಬಿಆರ್‌ಎಸ್ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಮೊದಲ ಗೆಲುವನ್ನು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಜಯ ಗಳಿಸಿದ್ದಾರೆ.