ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಮಧ್ಯಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವ ಲಕ್ಷಣಗಳಿವೆ. ಇಲ್ಲಿ ಬಿಜೆಪಿ 156 ಸ್ಥಾನಗಳಲ್ಲಿ ಮುಂದಿದ್ದರೆ ಕಾಂಗ್ರೆಸ್ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ರಾಜಸ್ಥಾನದಲ್ಲೂ ಬಿಜೆಪಿ ಮ್ಯಾಜಿಕ್ ವರ್ಕ್‌ಔಟ್ ಆಗಿದೆ. ಇಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಮುಂದಿದೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮುನ್ನಡೆಯಲ್ಲಿರುವ ಕಾಂಗ್ರೆಸ್ ಹೈದರಾಬಾದ್ ನಲ್ಲಿ ಸಂಭ್ರಮಾಚರಣೆ
ಕಾಂಗ್ರೆಸ್ ನೆಲ ಕಚ್ಚಿದೆ: ಪ್ರಲ್ಹಾದ್ ಜೋಶಿ
ತೆಲಂಗಾಣದಲ್ಲಿನ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ಗೆ ಲಾಭ ತಂದುಕೊಟ್ಟಿದೆ. ಉಳಿದ 3 ರಾಜ್ಯಗಳಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ದೊಡ್ಡ ಗೆಲುವಿನತ್ತ ವಸುಂಧರಾ ರಾಜೇ
ರಾಜಸ್ಥಾನದ ಜಲ್ರಾಪಟಾಣ್ ಕ್ಷೇತ್ರದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರು 19000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ ಜೈಪುರದಲ್ಲಿ ಸಂಭ್ರಮಾಚರಣೆಗೆ ಬಿಜೆಪಿ ರೆಡಿಯಾಗಿದೆ.
ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್, ಛತ್ತೀಸಗಢ ಯಾರಿಗೆ?
ಸದ್ಯ ಚುನಾವಣೆ ಫಲಿತಾಂಶ ಒಂದು ಹಂತದ ಚಿತ್ರಣ ನೀಡ ತೊಡಗಿದೆ. ಅದರ ಪ್ರಕಾರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರತ್ತ ಹೆಜ್ಜೆ ಹಾಕಿದರೆ, ತೆಲಂಗಾಣದಲ್ಲಿ ಬಿಆರ್‌ಎಸ್ ಹಿಂದಿಕ್ಕಿ ಕಾಂಗ್ರೆಸ್ ಬಹುಮತದತ್ತ ಸಾಗಿದೆ. ಕುತೂಹಲ ಕೆರಳಿಸಿದ ಛತ್ತೀಗಢದಲ್ಲಿ ಸದ್ಯ ಬಿಜೆಪಿ ಮುನ್ನಡೆ ಸಾಧಿಸಿದೆ.