Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

Ramesh B

ಬಿಜೆಪಿ ಕಚೇರಿಗೆ ಮೋದಿ ಭೇಟಿ

ಚುನಾವಣೆ ಫಲಿತಾಂಶ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿಗೆ ಸಂಜೆ 6.30ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

Ramesh B

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಜೈಪುರದ ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

Ramesh B

ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದೇನು?

ಮಧ್ಯಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. ಭಾರತ್‌ ಮಾತಾ ಕೀ ಜೈ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Ramesh B

ಛತ್ತೀಸ್‌ಗಢದಲ್ಲಿ ಮತ್ತೆ ಮುನ್ನಡೆ ಸಾಧಿಸಿದ ಕಾಂಗ್ರೆಸ್‌

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತೆ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಸದ್ಯ ಕಾಂಗ್ರೆಸ್‌ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 40 ಕ್ಷೇತ್ರಗಳಲ್ಲಿ ಮುಂದಿದೆ.

Ramesh B

ಛತ್ತೀಸ್‌ಗಢದಲ್ಲಿ ಸಮಬಲದ ಹೋರಾಟ

ಛತ್ತೀಸ್‌ಗಢದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಜಿದ್ದಾಜಿದ್ದಿ ಮುಂದುವರಿದಿದೆ. ಸದ್ಯ ಎರಡೂ ಪಕ್ಷಗಳು ತಲಾ 45 ಸ್ಥಾನಗಳಲ್ಲಿ ಮುಂದಿವೆ.

Exit mobile version