ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ರಾಜಸ್ಥಾನದಲ್ಲಿ ಮುನ್ನಡೆ ಸಾಧಿಸಿದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್
ರಾಜಸ್ಥಾನದಲ್ಲಿ ಸದ್ಯ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಅದಾಗ್ಯೂ ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮುನ್ನಡೆ ಸಾಧಿಸಿದ್ದಾರೆ. ಇತ್ತ ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಬಿಆರ್‌ಎಸ್‌ಗೆ ಭಾರೀ ಹಿನ್ನಡೆ
ಸತತ ಮೂರನೇ ಅವಧಿಗೆ ತೆಲಂಗಾಣದಲ್ಲಿ ಅಧಿಕಾರ ಹಿಡಿಯಬೇಕು ಎನ್ನುವ ಬಿಆರ್‌ಎಸ್ ಕನಸಿಗೆ ಕಾಂಗ್ರೆಸ್ ತಡೆ ಒಡ್ಡಿರುವುದು ಕಂಡು ಬಂದಿದೆ. ಸದ್ಯ ಇಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಕೈ ಪಡೆ 67 ಸ್ಥಾನಗಳಲ್ಲಿ ಮುಂದಿದ್ದರೆ ಬಿಆರ್‌ಎಸ್ ಕೇವಲ 32 ಸ್ಥಾನಗಳಲ್ಲಿ ಮುಂದಿದೆ.
ತೆಲಂಗಾಣ, ಛತ್ತೀಸ್‌ಗಢ ಕಾಂಗ್ರೆಸ್‌ಗೆ ಮುನ್ನಡೆ
ಸದ್ಯದ ಟ್ರೆಂಡ್ ಪ್ರಕಾರ ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ತೆಲಂಗಾಣದಲ್ಲಿ ಕೈ ಪಡೆ 61 ಮತ್ತು ಛತ್ತೀಸ್‌ಗಢದಲ್ಲಿ 54 ಸ್ಥಾನಗಳಲ್ಲಿ ಮುಂದಿದೆ.
ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ
ಸದ್ಯದ ಟ್ರೆಂಡ್ ಪ್ರಕಾರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ, ರಾಜಸ್ಥಾನದಲ್ಲಿ ಬಿಜೆಪಿ 101 ಮತ್ತು ಮಧ್ಯ ಪ್ರದೇಶದಲ್ಲಿ 128 ಸ್ಥಾನಗಳಲ್ಲಿ ಮುಂದಿದೆ.
ರಾಜಸ್ಥಾನದಲ್ಲಿ ವಸುಂಧರಾ ರಾಜೆ ಮುನ್ನಡೆಯಲ್ಲಿ
ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಇಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮುನ್ನಡೆಯಲ್ಲಿದ್ದಾರೆ. ಸದ್ಯ ಬಿಜೆಪಿ 99 ಮತ್ತು ಕಾಂಗ್ರೆಸ್ 88 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.