Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

B Somashekhar

ರಾಜಸ್ಥಾನದಲ್ಲಿ ಸಚಿನ್‌ ಪೈಲಟ್‌ಗೆ ಹಿನ್ನಡೆ

ರಾಜಸ್ಥಾನದ ಟೋಂಕ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ಗೆ ಹಿನ್ನಡೆ. ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿದ್ದ ನಾಯಕನಿಗೆ ಹಿನ್ನಡೆ.

Ramesh B

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಇಲ್ಲಿ ಕೈ ಪಡೆ 53 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 33 ಸ್ಥಾನಗಳಲ್ಲಿ ಮುಂದಿದೆ.

Ramesh B

ಮಧ್ಯಪ್ರದೇಶದಲ್ಲಿ ಮೊದಲ ಗೆಲುವು ದಾಖಲಿಸಿದ ಬಿಜೆಪಿ

ಮಧ್ಯಪ್ರದೇಶದಲ್ಲಿ ಬಿಜೆಪಿಯ ಪ್ರದೀಪ್‌ ಪಟೇಲ್‌ ಗೆಲುವು ಸಾಧಿಸಿದ್ದಾರೆ. ಸದ್ಯ ಇಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

B Somashekhar

ಎರಡೂ ಕ್ಷೇತ್ರಗಳಲ್ಲಿ ಸಿಎಂ ಕೆಸಿಆರ್‌ಗೆ ಹಿನ್ನಡೆ

ತೆಲಂಗಾಣದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರಿಗೆ ಎರಡೂ ಕ್ಷೇತ್ರಗಳಲ್ಲಿ ಭಾರಿ ಹಿನ್ನಡೆಯಾಗಿದೆ. ಗಾಜ್ವೆಲ್‌ ಹಾಗೂ ಕಾಮರೆಡ್ಡಿ ಕ್ಷೇತ್ರಗಳಲ್ಲಿ ಕೆಸಿಆರ್‌ ಹಿನ್ನಡೆ ಅನುಭವಿಸುತ್ತಿದ್ದಾರೆ.

Ramesh B

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

ಮಧ್ಯ ಪ್ರದೇಶದಲ್ಲಿ ಪ್ರಸ್ತುತ ಬಿಜೆಪಿ ಮುನ್ನಡೆಯಲ್ಲಿದೆ. ಬಿಜೆಪಿ 123 ಸ್ಥಾನದಲ್ಲಿ ಮುಂದಿದ್ದರೆ ಕಾಂಗ್ರೆಸ್‌ 90 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

Exit mobile version