Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

B Somashekhar

ಯಾವ ಪ್ರಮುಖ ನಾಯಕರಿಗೆ ಮುನ್ನಡೆ?

– ತೆಲಂಗಾಣದಲ್ಲಿ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಮುನ್ನಡೆ

– ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ಅವರಿಗೆ ಮುನ್ನಡೆ

– ಮಧ್ಯಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡ ಶಿವರಾಜ್‌ ಸಿಂಗ್‌ ಚೌಹಾಣ್

B Somashekhar

ಯಾವ ರಾಜ್ಯಗಳಲ್ಲಿ ಯಾರಿಗೆ ಮುನ್ನಡೆ?

– ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

– ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

– ರಾಜಸ್ಥಾನದಲ್ಲಿ ಬಿಜೆಪಿಗೆ ಮುನ್ನಡೆ

– ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಮುನ್ನಡೆ

B Somashekhar

ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ತೆಲಂಗಾಣದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್‌ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್‌ಎಸ್‌ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

B Somashekhar

ಮತ ಎಣಿಕೆ ಆರಂಭ

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಸ್ಟ್ರಾಂಗ್‌ ರೂಮ್‌ಗಳಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. ಇದಾದ ಬಳಿಕ ಮತಯಂತ್ರಗಳಲ್ಲಿ ದಾಖಲಾದ ಮತಗಳನ್ನು ಎಣಿಕೆ ಮಾಡಲಾಗುತ್ತದೆ.

B Somashekhar

ಛತ್ತೀಸ್‌ಗಢ ಮತಗಟ್ಟೆ ಸಮೀಕ್ಷೆ ವರದಿ

Exit mobile version